ಎಸ್.ಎಲ್. ಧರ್ಮೇಗೌಡ ಅವರ ನಿಧನದಿಂದ ಮನಸ್ಸಿಗೆ ನೋವುಂಟಾಗಿದೆ
ಬೆಂಗಳೂರು, ಡಿ. 29: ಕರ್ನಾಟಕ ವಿಧಾನ ಪರಿಷತ್ ಉಪ ಸಭಾಪತಿ ಮತ್ತು ಕರ್ನಾಟಕ ವಿಧಾನ ಸಭೆಯ ಮಾಜಿ ಶಾಸಕ ಎಸ್.ಎಲ್. ಧರ್ಮೇಗೌಡ ಅವರ ನಿಧನದಿಂದ ಮನಸ್ಸಿಗೆ ನೋವುಂಟಾಗಿದೆ ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್.ಎಲ್. ಧರ್ಮೇಗೌಡರ ಅಗಲಿಕೆಯಿಂದ ಹಿರಿಯ ರಾಜಕಾರಣಿಯೊಬ್ಬರನ್ನು, ಸಹಕಾರಿ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ ಹಾಗೂ ನನ್ನ ಆತ್ಮೀಯ ಸ್ನೇಹಿತರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ತಮ್ಮ ಶೋಕ ಸಂದೇಶದಲ್ಲಿ ಸ್ಪೀಕರ್ ಕಾಗೇರಿ ಅವರು ಹೇಳಿದ್ದಾರೆ.
ಅವರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ಕರುಣಿಸಲಿ. ಅವರ ಕುಟುಂಬದವರಿಗೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಕಾಗೇರಿ ಸಂತಾಪದಲ್ಲಿ ತಿಳಿಸಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ!
ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸಂತಾಪ: ಕರ್ನಾಟಕ ವಿಧಾನ ಪರಿಷತ್ತಿನ ಹಾಲಿ ಉಪ ಸಭಾಪತಿ ಎಸ್.ಎಲ್ ಧರ್ಮೇಗೌಡರ ನಿಧನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪಂಚಾಯಿತಿಯಿಂದ ಪರಿಷತ್ ತನಕ; ಎಸ್. ಎಲ್. ಧರ್ಮೇಗೌಡ ಪರಿಚಯ
ಸಜ್ಜನ ವ್ಯಕ್ತಿತ್ವ ಹೊಂದಿದ್ದ ಅವರ ಹಠಾತ್ ಮರಣದ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವತ ಅವರ ಕುಟುಂಬದ ಸದಸ್ಯರುಗಳಿಗೆ ಹಾಗೂ ಅಪಾರ ಬಂಧು ಬಳಗಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸಂದೇಶದಲ್ಲಿ ಹೇಳಿದ್ದಾರೆ.