BREAKING: ಬಿಜೆಪಿ ಶಾಸಕ ಮುನಿರತ್ನಗೆ ಬಿಗ್‌ ರಿಲೀಫ್‌ ನೀಡಿದ ಕೋರ್ಟ್‌

Munirathna Case: ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ಆರ್‌ಆರ್‌ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್​ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ. ಇದರಿಂದ ಮುನಿತ್ನಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ ಒದಗಿಸುವಂತೆ, ಸಾಕ್ಷ್ಯಾಧಾರ ನಾಶಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಲಾಗಿದೆ. ಬೆಂಗಳೂರಿನ 82ನೇ ಸಿಸಿಹೆಚ್ ಕೋರ್ಟ್​​ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಜಮೀನು ನೀಡಿ ಆದೇಶ ಹೊರಡಿಸಿದ್ದಾರೆ.

Special Court grants to Conditional Anticipatory Bail to BJP MLA Munirathna

ಸದ್ಯ ಇದೀಗ ಮುನಿರತ್ನ ಪರ ವಕೀಲರು ಜಾಮೀನು ಷರತ್ತು ಪೂರೈಸುತ್ತಿದ್ದು, ಇಂದು (ಸೆಪ್ಟೆಂಬರ್‌ 19) ಸಂಜೆ ಜೈಲಿನಿಂದ ಮುನಿರತ್ನ ಬಿಡುಗಡೆ ಸಾಧ್ಯತೆಯಿದೆ. ಆದರೆ, ಜೈಲಿನಿಂದ ಬಿಡುಗಡೆ ಆದರೂ ಕೂಡ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಈ ಸಂಬಂಧ ಮುನಿರತ್ನ ಅವರು ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ್ದರು. ನಿನ್ನೆ ವಾದ ಪ್ರತಿವಾದ ಆಲಿಸಿದ್ದ ಕೋರ್ಟ್, ಇಂದಿಗೆ ಜಾಮೀನು ಆದೇಶ ಕಾಯ್ದಿರಿಸಿತ್ತು.

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ಆರ್‌ಆರ್‌ ನಗರ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಎರಡು ಪ್ರಕರಣ ದಾಖಲಾಗಿರುವ ಮುನಿರತ್ನ ಆತನ ಗನ್ ಮ್ಯಾನ್ ವಿಜಯ್ ಕುಮಾರ್, ಸುಧಾಕರ್, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಸೇರಿದಂಕೆ 7 ಜನರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.

ಈ ಕುರಿತು ಕೃತ್ಯ ನಡೆದ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಬುಧವಾರ ತಡರಾತ್ರಿ ಅತ್ಯಾಚಾರದ ದೂರು ದಾಖಲು ಮಾಡಿದ್ದಾರೆ. ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಸಂತ್ರಸ್ತೆ ಡಿವೈಎಸ್‌ಪಿ ದಿನಕರ ಶೆಟ್ಟಿ ಸಮ್ಮುಖದಲ್ಲಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.

ಸಮಾಜ ಸೇವಕಿಯಾಗಿ ಗುರುತಿಸಿಕೊಂಡಿರುವ, ಬಿಜೆಪಿಯಲ್ಲೂ ಸಕ್ರಿಯ ಆಗಿರುವ ತನ್ನ ಮೇಲೆ 2020ರಿಂದ 2022ರವರೆಗೆ ಅತ್ಯಾಚಾರ ನಡೆಸಿ ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಬಗ್ಗೆ ದೂರು ನೀಡಿದ್ದಾರೆ. ದೂರು ಪರಿಶೀಲಿಸಿದ ನಂತರ ಠಾಣೆ ಅಧಿಕಾರಿಗಳು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ದಿನಕರ ಶೆಟ್ಟಿ ನೇತೃತೃತ್ವದಲ್ಲಿ ಜೆ.ಪಿ.ಪಾರ್ಕ್ ಬಳಿಯ ಗೋಡೌನ್‌ನಲ್ಲಿ ಸಂತ್ರಸ್ತೆಯನ್ನು ಕರೆತಂದು ಸ್ಥಳ ಮಹಜರು ನಡೆಸಲಾಯಿತು. ಈ ಪ್ರಕರಣ ಸಂಬಂಧ ರಾಮನಗರ ಪೊಲೀಸರು ಮುನಿರತ್ನ ಅವರನ್ನು ಬಂಧಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+