ಬೆಂಗಳೂರು : ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ

ಬೆಂಗಳೂರು, ಸೆಪ್ಟೆಂಬರ್, 14 : ಬೆಂಗಳೂರು ನಗರ ವ್ಯಾಪ್ತಿಯ ಏಳು ವಿಧಾನಸಭಾಕ್ಷೇತ್ರದಲ್ಲಿ ಸೆ.15ರ ಮಂಗಳವಾರ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಮತ್ತು ಮತದಾರರ ಪಟ್ಟಿಯಿಂದ ಹೆಸರು ತೆಗೆಯುವುದು, ವಿಳಾಸ ಬದಲಾವಣೆ, ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.

ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ ಹಾಗೂ ಆನೇಕಲ್ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ವಿಶೇಷ ಪರಿಷ್ಕರಣೆ ನಡೆಯಲಿದೆ. ಜನರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿ.ಶಂಕರ್ ಮನವಿ ಮಾಡಿದ್ದಾರೆ.

voter id

ಸೆ.15ರ ಮಂಗಳವಾರ ಕರಡು ಮತದಾರರ ಪಟ್ಟಿಗಳನ್ನು ಪ್ರಕಟಿಸಲಾಗುತ್ತದೆ. ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 14ರ ವರೆಗೆ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು ಪರಿಶೀಲಿಸಿ 2016ರ ಜನವರಿ 11ರಂದು ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. [ಆಧಾರ್ ಕಾರ್ಡ್ ಮಾಡಿಸುವುದು ಹೇಗೆ?]

ಕರಡು ಪಟ್ಟಿಯಲ್ಲಿ ಮತದಾರರು ತಮ್ಮ ಹೆಸರು, ತಂದೆ/ಗಂಡನ ಹೆಸರು, ಮನೆ ವಿಳಾಸ, ಲಿಂಗ, ವಯಸ್ಸು, ಮುಂತಾದ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದು. ಮತದಾರರ ನೋಂದಣಾಧಿಕಾರಿಗಳು / ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳ ಕಚೇರಿಗಳಲ್ಲಿ ಕರಡು ಪಟ್ಟಿಗಳು ಲಭ್ಯವಿರುತ್ತವೆ. [ಅರ್ಜಿ ಹಾಕಿದ 48 ಗಂಟೆಗಳಲ್ಲಿ ಪ್ಯಾನ್ ಕಾರ್ಡ್]

ಮತದಾರರ ಪಟ್ಟಿಗೆ ಸೇರ್ಪಡೆಗಾಗಿ, ಹೆಸರು ತೆಗೆದುಹಾಕಲು, ವಿಳಾಸ ಬದಲಾವಣೆಗಾಗಿ ಹಾಗೂ ಇತರೆ ತಿದ್ದುಪಡಿಗಳಿದ್ದಲ್ಲಿ ಅಕ್ಟೋಬರ್‌ 14ರೊಳಗೆ ಹತ್ತಿರದ ಮತಗಟ್ಟೆಅಧಿಕಾರಿ, ತಾಲೂಕು ಕಛೇರಿ ಮತ್ತು ಸಹಾಯಕ ಆಯುಕ್ತರ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ದಿನಾಂಕ 01-01-2016ಕ್ಕೆ 18 ವರ್ಷ ಪೂರ್ಣಗೊಳ್ಳುವ 18 ವರ್ಷತುಂಬಿದ ಯುವಕ/ಯುವತಿಯರು ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿದದವರು ಈ ವಿಶೇಷ ಪರಿಷ್ಕರಣೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+