SWR: ಬೆಂಗಳೂರಿನಿಂದ ಇಲ್ಲಿಗೆ ವಿಶೇಷ ರೈಲು ಕಾರ್ಯಾಚರಣೆ, ಪ್ರಯಾಣಿಕರೇ ಗಮನಿಸಿ
ಬೆಂಗಳೂರು, ಮಾರ್ಚ್ 12: ಹೋಳಿ ಹಬ್ಬದ ಪ್ರಯುಕ್ತ ದೂರದ ಊರುಗಳಿಗೆ ತೆರಳುವವರಿಗ ಅನುಕೂಲ ಆಗುವಂತೆ ಹಾಗೂ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಣೆಗಾಗಿ ವಿಶೇಷ ರೈಲುಗಳ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಪೂರ್ವ ಕರಾವಳಿ ರೈಲ್ವೆ ವಲಯ ತಿಳಿಸಿದೆ. ವಿಶಾಖಪಟ್ಟಣಂ-ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ನಿಗದಿತ ದಿನಾಂಕಗಳಂದು ಸಂಚರಿಸಲಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
* ವಿಶಾಖಪಟ್ಟಣಂ -ಎಸ್‌ಎಂವಿಟಿ ಬೆಂಗಳೂರು-ವಿಶಾಖಪಟ್ಟಣಂ ರೈಲು (ಸಂಖ್ಯೆ 08549/08550) ಸಂಚರಿಸಲಿದೆ. ಇದರಲ್ಲಿ 08549 ಸಂಖ್ಯೆಯ ರೈಲು ಮಾರ್ಚ್ 16 ಮತ್ತು 23ರಂದು ಮಧ್ಯಾಹ್ನ 3:30 ಕ್ಕೆ ವಿಶಾಖಪಟ್ಟಣಂನಿಂದ ಹೊರಟು, ಮರುದಿನ ಮಧ್ಯಾಹ್ನ 12.45 ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಕ್ಕೆ ಬರಲಿದೆ.

* ಮರಳಿ ಬೆಂಗಳೂರು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ 08550 ಸಂಖ್ಯೆಯ ರೈಲು ಮಾರ್ಚ್ 17 ಮತ್ತು 24 ಮಧ್ಯಾಹ್ನ 3.50 ಕ್ಕೆ ಸಂಚಾರ ಆರಂಭಿಸುತ್ತದೆ. ಮತ್ತದೇ ಮಾರ್ಗವಾಗಿ ಸಾಗಿ ಮರುದಿನ ಮಧ್ಯಾಹ್ನ 12:30 ಕ್ಕೆ ವಿಶಾಖಪಟ್ಟಣಂ ನಿಲ್ದಾಣ ತಲುಪಲಿದೆ ಎಂದು ಪೂರ್ವ ಕರಾವಳಿ ರೈಲ್ವೆ ತಿಳಿಸಿದೆ.
ವಿಶೇಷ ರೈಲು ನಿಲುಗಡೆ ನಿಲ್ದಾಣಗಳು
ಈ ವಿಶೇಷ ರೈಲು ಎರಡೂ ಮಾರ್ಗಗಳಲ್ಲಿ ದುವಾಡ, ಅನಕಪಲ್ಲಿ, ಎಲೂರು, ವಿಜಯವಾಡ, ಒಂಗೋಲ್, ನೆಲ್ಲೂರು, ಸಾಮಲೊಟ್, ರಾಜಮಂಡ್ರಿ, ಗುಡೂರು, ಪೆರಂಬೂರ್, ಅರಕ್ಕೋಣಂ, ಕಟಪಾಡಿ, ಜೋಲಾರ್ ಪೆಟ್ಟೆ, ಕುಪ್ಪಂ, ಬಂಗಾರಪೇಟೆ ಮತ್ತು ಕೃಷ್ಣರಾಜಪುರಂ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ವಿವಿಧ ಒಟ್ಟು 20 ಬೋಗಿಗಳನ್ನು ಒಳಗೊಂಡ ವಿಶೇಷ ರೈಲು ಇದಾಗಿರುತ್ತದೆ. 4 ಎಸಿ ತ್ರಿ ಟೈರ್, 2 ಎಸಿ ತ್ರಿ ಟೈರ್ ಎಕಾನಮಿ, 8 ಸ್ವೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 1 ಬ್ರೇಕ್, ಲಗೇಜ್ ಕಮ್ ಜನರೇಟರ್ ಕಾರ್ ಮತ್ತು 1 ಸೆಕೆಂಡ್ ಲಗೇಜ್-ಕಮ್-ಬ್ರೇಕ್ ವ್ಯಾನ್/ಅಂಗವಿಕಲ ಬೋಗಿಗಳು ಒಳಗೊಂಡಿರುತ್ತವೆ.
ರೈಲು ಸಂಚಾರ ಕುರಿತು ಹೆಚ್ಚಿನ ಮಾಹಿತಿಗಾಗಿ ಪ್ರಯಾಣಿಕರು ಭಾರತೀಯ ರೈಲೆಯ ಅಧಿಕೃತ ವೆಬ್‌ಸೈಟ್‌ಗೆ https://www.indianrail.gov.in/ ಭೇಟಿ ನೀಡಬೇಕು. ಇಲ್ಲವೇ 139 ಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಆಗಮನ/ನಿರ್ಗಮನದ ಸಮಯವನ್ನು ಪರಿಶೀಲಿಸಬೇಕು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications