Get Updates
Get notified of breaking news, exclusive insights, and must-see stories!

ಯಶವಂತಪುರ-ಮಡಗಾಂವ್ ನಡುವೆ ವಿಶೇಷ ರೈಲು ಸೇವೆ: ರೈಲುಗಳ ಸಂಖ್ಯೆ, ಸಮಯ, ದಿನಾಂಕ, ನಿಲುಗಡೆಗಳ ವಿವರ ತಿಳಿಯಿರಿ

South Western Railway: ಮಹಾ ಶಿವರಾತ್ರಿ ಸಮೀಪಿಸುತ್ತಿದ್ದು, ಈ ವೇಳೆ ನಗರ ಪ್ರದೇಶಗಳಿಂದ ಊರು, ಪ್ರೇಕ್ಷಣೀಯ ಸ್ಥಳಗಳ ಕಡೆ ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಇದನ್ನು ಅರಿತುಕೊಂಡೇ ಈಗಾಗಲೇ ಭಾರತೀಯ ರೈಲ್ವೆ ಹಲವು ಭಾಗಗಳಿಗೆ ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ. ಇದೀಗ ಯಶವಂತಪುರ ಮತ್ತು ಮಡಗಾಂವ್ ನಡುವೆ ವಿಶೇಷ ರೈಲು ಓಡಲಿಸಲು ನಿರ್ಧರಿಸಿದೆ. ಹಾಗಾದ್ರೆ, ದಿನಾಂಕ, ಸಮಯಗಳ ಕುರಿತು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಮಹಾ ಶಿವರಾತ್ರಿ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಣ ಮಾಡಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಮಡಗಾಂವ್ ನಡುವೆ ವಿಶೇಷ ರೈಲು ಓಡಲಿಸಲು ನಿರ್ಧಾರ ಮಾಡಿದೆ. ಹಾಗಾದ್ರೆ, ರೈಲುಗಳ ಸಂಖ್ಯೆ, ದಿನಾಂಕ ಸಮಯಗಳ ಕುರಿತು ಹೆಚ್ಚಿನ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ ಗಮನಿಸಿ.

Special Train Between Yeswanthpur and Madgaon Announced for Maha Shivaratri by South Western Railway

ರೈಲು ಸಂಖ್ಯೆ, ದಿನಾಂಕ, ಸಮಯಗಳ ವಿವರ: ರೈಲು ಸಂಖ್ಯೆ 06507 ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್‌ ರೈಲು ಫೆಬ್ರವರಿ 13ರಂದು ಮಧ್ಯಾಹ್ನ 12.30ಕ್ಕೆ ಯಶವಂತಪುರದಿಂದ ಹೊರಟು, ಮಾರನೆ ದಿನ ಬೆಳಗ್ಗೆ 6:45ಕ್ಕೆ ಮಡಗಾಂವ್ ತಲುಪಲಿದೆ.

ರೈಲು ಸಂಖ್ಯೆ 06508 ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್‌ ರೈಲು ಫೆಬ್ರವರಿ 16ರಂದು ಬೆಳಗ್ಗೆ 11 ಗಂಟೆಗೆ ಮಡಗಾಂವ್‌ನಿಂದ ಹೊರಟು, ಮರುದಿನ ಬೆಳಗ್ಗೆ 4:45ಕ್ಕೆ ಯಶವಂತಪುರ ತಲುಪಲಿದೆ.

ಎಲ್ಲಡೆ ನಿಲುಗಡೆ ಇರಲಿದೆ?: ಚಿಕ್ಕಬಾಣವರ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.

ಈ ರೈಲು 20 ಬೋಗಿಗಳನ್ನು ಒಳಗೊಂಡಿದ್ದು, ಇದರಲ್ಲಿ 1 ಪ್ರಥಮ ದರ್ಜೆ ಎಸಿ ಕಮ್ ಎಸಿ 2-ಟೈರ್ ಬೋಗಿ, 2 ಎಸಿ 2-ಟೈರ್ ಬೋಗಿಗಳು, 2 ಎಸಿ 3-ಟೈರ್ ಬೋಗಿಗಳು, 9 ಸ್ಲೀಪರ್ ಕ್ಲಾಸ್‌ ಬೋಗಿಗಳು, 4 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಎಸ್‌ಎಲ್‌ಆರ್‌/ಡಿ ಬೋಗಿಗಳು ಇರಲಿವೆ ಎನ್ನುವ ಮಾಹಿತಿಯನ್ನು ನೈಋತ್ಯ ರೈಲ್ವೆ ನೀಡಿದೆ.

ಹಬ್ಬ-ಹರಿದಿನಗಳು, ವಿಶೇಷ ಸಂದರ್ಭಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ರಯಾಣಿಕರು ರೈಲಿನಲ್ಲೇ ಪ್ರಯಾಣ ಮಾಡಲು ಬಯಸುತ್ತಾರೆ. ವೆಚ್ಚ ಕಡಿಮೆ, ಆರಾಮದಾಯಕ ಪ್ರಯಾಣ ನೀಡುವುದರಿಂದ ಈ ಸಾರಿಗೆಯನ್ನೇ ಬಹುತೇಕ ಮಂದಿ ಆಯ್ಕೆ ಮಾಡಿಕೊಳ್ಳುತ್ತಾರೆ. ಇದನ್ನು ಅರಿತುಕೊಂಡೆ ಭಾರತೀಯ ರೈಲ್ವೆಯು ಹಬ್ಬಗಳ ವೇಳೆ ವಿಶೇಷ ರೈಲುಗಳ ವ್ಯವಸ್ಥೆಯನ್ನು ಕಲ್ಪಿಸುತ್ತಾ ಬಂದಿದೆ.

ಪ್ರಯಾಣಿಕರಿಗೆ ಹೆಚ್ಚು ಅನುಕೂಲ: ಹಬ್ಬ-ಹರಿದಿನಗಳು, ರಜೆ ಹಾಗೂ ವಿಶೇಷ ಸಂದರ್ಭಗಳಲ್ಲಿ ಭಾರತೀಯ ರೈಲ್ವೆ ಆರಂಭಿಸುವ ವಿಶೇಷ ರೈಲು ಸೇವೆಗಳು ಪ್ರಯಾಣಿಕರಿಗೆ ಮಹತ್ತರ ಪ್ರಯೋಜನವನ್ನು ನೀಡುತ್ತವೆ. ಸಾಮಾನ್ಯ ದಿನಗಳಲ್ಲಿ ಹೆಚ್ಚಿರುವ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವಲ್ಲಿ ಈ ವಿಶೇಷ ರೈಲುಗಳು ಪ್ರಮುಖ ಪಾತ್ರ ವಹಿಸುತ್ತವೆ. ಇದರ ಪರಿಣಾಮವಾಗಿ ಟಿಕೆಟ್‌ ದೊರೆಯದ ಸಮಸ್ಯೆ ತಗ್ಗಿ, ಪ್ರಯಾಣಿಕರಿಗೆ ಸುಲಭವಾಗಿ ಪ್ರಯಾಣ ಮಾಡುವ ಅವಕಾಶ ಲಭ್ಯವಾಗುತ್ತದೆ.

ವಿಶೇಷ ರೈಲು ಸೇವೆಗಳು ದೂರದ ಊರುಗಳಿಗೆ ತೆರಳುವವರಿಗೆ ಸಮಯ ಹಾಗೂ ಹಣ ಉಳಿತಾಯವಾಗುವಂತೆ ಮಾಡುತ್ತವೆ. ನಿರ್ದಿಷ್ಟ ಮಾರ್ಗಗಳಲ್ಲಿ ಹೆಚ್ಚುವರಿ ರೈಲುಗಳು ಸಂಚರಿಸುವುದರಿಂದ ಸಂಪರ್ಕ ವ್ಯವಸ್ಥೆ ಸುಧಾರಿಸಿ, ಗ್ರಾಮೀಣ ಹಾಗೂ ನಗರ ಪ್ರದೇಶಗಳ ನಡುವೆ ಸಂಚಾರ ಸುಲಭವಾಗುತ್ತದೆ. ಅಲ್ಲದೆ, ತುರ್ತು ಪ್ರಯಾಣ ಅಗತ್ಯ ಇರುವವರಿಗೆ ಇದು ತುಂಬಾ ನೆರವಾಗುತ್ತದೆ.

ವಿಶೇಷ ರೈಲುಗಳ ಮೂಲಕ ವ್ಯಾಪಾರ, ಪ್ರವಾಸೋದ್ಯಮ ಮತ್ತು ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗುತ್ತದೆ. ಪ್ರಯಾಣಿಕರ ಅನುಕೂಲತೆ ಹೆಚ್ಚಿಸುವ ಜೊತೆಗೆ ದೇಶದ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ವಿಶೇಷ ರೈಲು ಸೇವೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಲಾಗುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+