Namma Metro: ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ರತನ್ ಟಾಟಾ ಅವರಿಗೆ ವಿಶೇಷ ನಮನ-ವೈರಲ್
Namma Metro: ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ (86) ಅವರ ನಿಧನದಿಂದ ಭಾರತದ ಉದ್ಯಮ ಕ್ಷೇತ್ರ ಮಂಕಾಗಿದೆ. ಇನ್ನು ಅವರ ನಿಧನಕ್ಕೆ ಬರೀ ಭಾರತ ಅಷ್ಟೇ ಅಲ್ಲದೆ, ವಿಶ್ವ ಮಟ್ಟದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಹಾಗೆಯೆ ಇದೀಗ ಬೆಂಗಳೂರಿನ ನಮ್ಮ ಮೆಟ್ರೋ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ವಿಶೇಷವಾಗಿ ನಮನ ಸಲ್ಲಿಸಿದೆ.
ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ರಂಗೋಲಿಯಲ್ಲಿ ಮರೆಯಲಾಗದ ರತ್ನ ಮತ್ತು ಉದ್ಯಮಿ ಶ್ರೀ ದಿವಂಗತ ರತನ್ ಟಾಟಾ ಅವರ ಚಿತ್ರವನ್ನು ಬಿಡಿಸಿ ನಮ್ಮ ಮೆಟ್ರೋ ಅವರಿಗೆ ವಿಶೇಷ ನಮನ ಸಲ್ಲಿಸಿದೆ. ಇನ್ನೂ ಈ ಪೋಸ್ಟರ್ ಇದೀಗ ಸಾಮಾಜಿಕ ಜಾಲತಾನಲ್ಲಿ ಭಾರೀ ವೈರಲ್ ಆಗುತ್ತಿದೆ.

ಕೆಂಪೇಗೌಡ ಮೆಟ್ರೋ ನಿಲ್ದಾಣಕ್ಕೆ ಬಂದತಹ ಪ್ರಯಾಣಿಕರು ಕೂಡ ರಂಗೋಲಿಯಲ್ಲಿ ಅರಳಿದ ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ ಅವರಿಗೆ ಕೈಮುಗಿದು ಗೌರವ ಅರ್ಪಿಸುತ್ತಿದ್ದಾರೆ. ಅಲ್ಲದೆ, ಇದೇ ವೇಳೆ ಅವರು ಉದ್ಯಮ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಗಳನ್ನು ನೆನೆಯುತ್ತಿದ್ದಾರೆ.
🙏ನಾಡಪ್ರಭು ಕೆಂಪೇಗೌಡ ಮೆಟ್ರೋ ಸ್ಟೇಷನ್ ಮೆಜೆಸ್ಟಿಕ್ನಲ್ಲಿ ರಂಗೋಲಿ ಕಲೆಯ ಮೂಲಕ ಮರೆಯಲಾಗದ ರತ್ನ ಮತ್ತು ಉದ್ಯಮಿ ಶ್ರೀ ದಿವಂಗತ ರತನ್ ಟಾಟಾ ಅವರಿಗೆ ನಮ್ಮ ಮೆಟ್ರೋದಿಂದ ನಮನ🙏 pic.twitter.com/oLDwRMvHGY
— ನಮ್ಮ ಮೆಟ್ರೋ (@OfficialBMRCL) October 11, 2024
* ಸಿಎಂ ಸಿದ್ದರಾಮಯ್ಯ ಅವರು, ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ. ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ'ಎಂದು ತಮ್ಮ ಟ್ವೀಟ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
* ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ, ರತನ್ ಟಾಟಾ ಅವರ ನಿಧನದ ಸುದ್ದಿ ಕೇಳಿ ನನಗೆ ಅತೀವ ದುಃಖವಾಗಿದೆ. ಲೋಕೋಪಕಾರಿ ಮತ್ತು ಕೈಗಾರಿಕೋದ್ಯಮಿಯಾಗಿ ಅವರ ಪರಂಪರೆಯು ಅಸಂಖ್ಯಾತ ಜೀವನ ಮತ್ತು ಸಮುದಾಯಗಳನ್ನು ಆಳವಾಗಿ ಪ್ರಭಾವಿಸಿದೆ. ಅವರ ದೂರದೃಷ್ಟಿ, ಸಹಾನುಭೂತಿ ಮತ್ತು ಸಾಮಾಜಿಕ ಕಾರಣಗಳಿಗಾಗಿ ಅಚಲವಾದ ಸಮರ್ಪಣೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ ಎಂದು ಬರೆದುಕೊಂಡಿದ್ದಾರೆ.
* ರತನ್ ಟಾಟಾ ಅವರ ನಿಧನ ಅತೀವ ದುಃಖದ ತಂದಿದ್ದು, ಭಾರತವು ಸಾಂಸ್ಥಿಕ ಬೆಳವಣಿಗೆಯನ್ನು ರಾಷ್ಟ್ರ ನಿರ್ಮಾಣದೊಂದಿಗೆ ಮತ್ತು ಶ್ರೇಷ್ಠತೆಯನ್ನು ನೀತಿಯೊಂದಿಗೆ ಸಂಯೋಜಿಸಿದ ಐಕಾನ್ ವ್ಯಕ್ತಿಯನ್ನು ಕಳೆದುಕೊಂಡಿದೆ. ಪದ್ಮವಿಭೂಷಣ ಮತ್ತು ಪದ್ಮಭೂಷಣ ಪುರಸ್ಕೃತರಾದ ಅವರು ಶ್ರೇಷ್ಠ ಟಾಟಾ ಪರಂಪರೆಯನ್ನು ಮುಂದಕ್ಕೆ ಕೊಂಡೊಯ್ದರು ಮತ್ತು ಹೆಚ್ಚು ಪ್ರಭಾವಶಾಲಿ ಜಾಗತಿಕ ಉಪಸ್ಥಿತಿಯನ್ನು ನೀಡಿದರು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.
* ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ, ರತನ್ ಟಾಟಾ ದೂರದೃಷ್ಟಿ ಹೊಂದಿದ ವ್ಯಕ್ತಿ. ಅವರು ವ್ಯಾಪಾರ ಮತ್ತು ಲೋಕೋಪಕಾರ ಎರಡರಲ್ಲೂ ಶಾಶ್ವತವಾದ ಗುರುತು ಬಿಟ್ಟಿದ್ದಾರೆ. ಅವರ ಕುಟುಂಬ ಮತ್ತು ಟಾಟಾ ಸಮುದಾಯಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.
* ಗೌತಮ್ ಅದಾನಿ ಟ್ವೀಟ್ ಮಾಡಿ, ಭಾರತವು ಒಬ್ಬ ದೈತ್ಯನನ್ನು ಕಳೆದುಕೊಂಡಿದೆ. ಆಧುನಿಕ ಭಾರತದ ಹಾದಿಯನ್ನು ಮರು ವ್ಯಾಖ್ಯಾನಿಸಿದ ದಾರ್ಶನಿಕ. ರತನ್ ಟಾಟಾ ಅವರು ಕೇವಲ ವ್ಯಾಪಾರದ ನಾಯಕರಾಗಿರಲಿಲ್ಲ. ಅವರು ಸಮಗ್ರತೆ, ಸಹಾನುಭೂತಿ ಮತ್ತು ಹೆಚ್ಚಿನ ಒಳಿತಿಗಾಗಿ ಅಚಲವಾದ ಬದ್ಧತೆಯೊಂದಿಗೆ ಭಾರತದ ಆತ್ಮವನ್ನು ಸಾಕಾರಗೊಳಿಸಿದರು. ಅವರಂತಹ ದಂತಕಥೆಗಳು ಎಂದಿಗೂ ಮರೆಯಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
-
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ












Click it and Unblock the Notifications