ಚಿತ್ರಗಳು : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಪಘಾತ

ಬೆಂಗಳೂರು, ಜುಲೈ 28 : ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಈ ಅಪಘಾತ ನಡೆದಿದೆ.

ಮೃತಪಟ್ಟವರನ್ನು ಸಂಜಯ ನಗರ ನಿವಾಸಿ ಶೀಯಾನ್ (24) ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಶೀಯಾನ್ ಬೆಳಗ್ಗೆ 7.15ರ ಸುಮಾರಿಗೆ ಕೆಲಸಕ್ಕೆಂದು ತೆರಳುವಾಗ ಈ ಅಪಘಾತ ಸಂಭವಿಸಿದೆ.

bus

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬಿಎಂಟಿಸಿ ಬಸ್ಸನ್ನು ಓವರ್ ಟೆಕ್ ಮಾಡಲು ಶೀಯಾನ್ ಪ್ರಯತ್ನಿಸಿದಾಗ ಬೈಕ್ ನಿಯಂತ್ರಣ ತಪ್ಪಿ, ಬಸ್‌ಗೆ ಡಿಕ್ಕಿ ಹೊಡೆದಿದೆ. ತಕ್ಷಣ ಕೆಳಗೆ ಬಿದ್ದ ಶೀಯಾನ್ ತಲೆಗೆ ಪೆಟ್ಟಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತ ದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಬಿಎಂಟಿಸಿ ಬಸ್ ಶಿವಾಜಿನಗರದಿಂದ ಕೆ.ಆರ್.ಮಾರ್ಕೆಟ್‌ಗೆ ಹೋಗುತ್ತಿತ್ತು. ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

bmtc

ಕಾರು ಡಿಕ್ಕಿ, ವ್ಯಕ್ತಿ ಸಾವು : ಕಾರು ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿರುವ ಘಟನೆ ಹೆಣ್ಣೂರು ಹೊರ ವರ್ತುಲ ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ನಾಗೇಂದರ್‌ ಸಾಹು (28) ಎಂದು ಗುರುತಿಸಲಾಗಿದೆ. ಬಿಹಾರ ಮೂಲದವರಾದ ಇವರು ಆರು ತಿಂಗಳ ಹಿಂದೆ ನಗರಕ್ಕೆ ಆಗಮಿಸಿದ್ದರು, ಗಾರೆ ಕೆಲಸ ಮಾಡಿಕೊಂಡಿದ್ದರು.

traffic police
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+