ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲೂ ಸ್ಪುಟ್ನಿಕ್-ವಿ ಲಸಿಕೆ ಸಿಗುತ್ತೆ?

|
Google Oneindia Kannada News

ಬೆಂಗಳೂರು, ಜೂನ್ 01: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಜೂನ್ ತಿಂಗಳ ಎರಡನೇ ವಾರದಿಂದ ರಷ್ಯಾದ ಸ್ಪುಟ್ನಿಕ್-ವಿ ಲಸಿಕೆ ವಿತರಣೆಯು ದೇಶದ ಅಪೋಲೋ ಆಸ್ಪತ್ರೆಗಳಲ್ಲಿ ಆರಂಭವಾಗದಲಿದೆ. ಇದರ ಬೆನ್ನಲ್ಲೇ ಅಪೋಲೋ ಅಲ್ಲದೇ ಮಣಿಪಾಲ್ ಆಸ್ಪತ್ರೆಗಳಲ್ಲೂ ಸ್ಪುಟ್ನಿಕ್-ವಿ ಲಸಿಕೆಯು ಸಿಗಲಿದೆ.

ಸ್ಪುಟ್ನಿಕ್-ವಿ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಮಣಿಪಾಲ್ ಸಂಸ್ಥೆಯು ಡಾ.ರೆಡ್ಡೀಸ್ ಪ್ರಯೋಗಾಲಯದ ಸಹಭಾಗತ್ವವನ್ನು ಪಡೆದುಕೊಂಡಿದೆ. ದೇಶದ ಮಣಿಪಾಲ್ ಆಸ್ಪತ್ರೆಗಳಲ್ಲಿ ಕೊವಿಶೀಲ್ಡ್, ಕೊವ್ಯಾಕ್ಸಿನ್ ಜೊತೆಗೆ ರಷ್ಯಾದ ಸ್ಪುಟ್ನಿಕ್-ವಿ ಲಸಿಕೆ ಕೂಡ ಲಭ್ಯವಾಗಲಿದೆ.

ಒಂದು ಬಾರಿ ಕೊರೊನಾವೈರಸ್ ಬಂದು ಹೋಗುವುದು ಒಳ್ಳೆಯದ್ದೇ!?ಒಂದು ಬಾರಿ ಕೊರೊನಾವೈರಸ್ ಬಂದು ಹೋಗುವುದು ಒಳ್ಳೆಯದ್ದೇ!?

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸ್ಪುಟ್ನಿಕ್-ವಿ ಲಸಿಕೆ ವಿತರಣೆಗೆ ಇಷ್ಟರಲ್ಲೇ ಪ್ರಾಯೋಗಿಕವಾಗಿ ಚಾಲನೆ ನೀಡಲಾಗುತ್ತದೆ. ಕಳೆದ ತಿಂಗಳು ರಷ್ಯಾದಿಂದ ಹೈದ್ರಾಬಾದಿಗೆ 30 ಲಕ್ಷ ಡೋಸ್ ಸ್ಪುಟ್ನಿಕ್-ವಿ ಲಸಿಕೆಯನ್ನು ಆಮದು ಮಾಡಿಕೊಂಡಿರುವ ಬೆನ್ನಲ್ಲೇ ಮಣಿಪಾಲ್ ಸಂಸ್ಥೆ ಈ ಬಗ್ಗೆ ಸ್ಪಷ್ಟಪಡಿಸಿದೆ.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸ್ಪುಟ್ನಿಕ್-ವಿ

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸ್ಪುಟ್ನಿಕ್-ವಿ

ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ ಕಾಪಾಡಿಕೊಳ್ಳುವುದಕ್ಕೆ ಅಗತ್ಯವಿರುವ ಅತ್ಯಾಧುನಿಕ ಮೂಲಸೌಕರ್ಯಗಳನ್ನು ಸ್ಥಾಪಿಸುವುದಕ್ಕೆ ಮಣಿಪಾಲ್ ಆಸ್ಪತ್ರೆಗಳು ಸಿದ್ಧತೆ ಮಾಡಿಕೊಳ್ಳುತ್ತಿವೆ. ಈ ಸಂಬಂಧ ಡಾ. ರೆಡ್ಡೀಸ್ ಪ್ರಯೋಗಾಲಯದ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಕೆಲಸ ಮಾಡಲಾಗುತ್ತಿದೆ ಎಂದು ಮಣಿಪಾಲ್ ಹೆಲ್ತ್ ಎಂಟರ್‌ಪ್ರೈಸಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾರ್ತಿಕ್ ರಾಜಗೋಪಾಲ್ ತಿಳಿಸಿದ್ದಾರೆ.

ಮಣಿಪಾಲ್ ಆಸ್ಪತ್ರೆಗಳಲ್ಲಿ ಕೊವ್ಯಾಕ್ಸಿನ್, ಕೊವಿಶೀಲ್ಡ್

ಮಣಿಪಾಲ್ ಆಸ್ಪತ್ರೆಗಳಲ್ಲಿ ಕೊವ್ಯಾಕ್ಸಿನ್, ಕೊವಿಶೀಲ್ಡ್

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಗೆ ಚಾಲನೆ ನೀಡಿದ ದಿನದಿಂದ ಇಂದಿನವರೆಗೂ ಖಾಸಗಿ ವಲಯದಲ್ಲಿ ಮಣಿಪಾಲ್ ಆಸ್ಪತ್ರೆ ಲಸಿಕೆ ವಿತರಣೆಯನ್ನು ಯಶಸ್ವಿಯಾಗಿ ನಡೆಸುತ್ತಿದೆ. ಕೊವ್ಯಾಕ್ಸಿನ್ ಹಾಗೂ ಕೊವಿಶೀಲ್ಡ್ ಲಸಿಕೆಯನ್ನು ಮೊದಲಿನಿಂದ ವಿತರಣೆ ಮಾಡಲಾಗುತ್ತಿದೆ. ಇದೀಗ ಈ ಪಟ್ಟಿಗೆ ಸ್ಪುಟ್ನಿಕ್-ವಿ ಲಸಿಕೆಯನ್ನು ಸಹ ಸೇರಿಸಲಾಗುತ್ತಿದೆ. ಜೂನ್ ತಿಂಗಳ ಎರಡನೇ ವಾರದಲ್ಲಿ ಸ್ಪುಟ್ನಿಕ್-ವಿ ಲಸಿಕೆ ವಿತರಿಸಲಾಗುವುದು ಎಂದು ಕಾರ್ತಿಕ್ ರಾಜಗೋಪಾಲ್ ಹೇಳಿದ್ದಾರೆ.

ಮುಂದಿನ ತಿಂಗಳು ಅತಿಹೆಚ್ಚು ಜನರಿಗೆ ಲಸಿಕೆ

ಮುಂದಿನ ತಿಂಗಳು ಅತಿಹೆಚ್ಚು ಜನರಿಗೆ ಲಸಿಕೆ

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಶಾಖೆಯೊಂದಿಗಿನ ಸಹಭಾಗಿತ್ವಕ್ಕೆ ತುಂಬಾ ಸಂತೋಷವಾಗುತ್ತಿದೆ. ಮುಂದಿನ ತಿಂಗಳ ವೇಳೆಯಲ್ಲಿ ದೇಶದ ಇತರೆ ಮಣಿಪಾಲ್ ಆಸ್ಪತ್ರೆ ಕೇಂದ್ರಗಳಲ್ಲಿ ಸ್ಪುಟ್ನಿಕ್-ವಿ ಲಸಿಕೆ ವಿತರಣೆಯನ್ನು ಆರಂಭಿಸಲಾಗುತ್ತದೆ. ಮುಂದಿನ ತಿಂಗಳ ವೇಳೆಗೆ ಅತಿಹೆಚ್ಚು ಜನರಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದು ಸಿಇಓ ಎಂ ವಿ ರಮಣ್ ತಿಳಿಸಿದ್ದಾರೆ.

Recommended Video

Pizza Burger ಮನೆಗೆ ತಲುಪಿಸೋದಾದ್ರೆ ರೇಷನ್ ಯಾಕೆ ಆಗಲ್ಲ : Arvind Kejriwal | Oneindia Kannada
ಒಂದು ಡೋಸ್ ಸ್ಪುಟ್ನಿಕ್-ವಿ ಲಸಿಕೆಗೆ 1,195 ರೂ.

ಒಂದು ಡೋಸ್ ಸ್ಪುಟ್ನಿಕ್-ವಿ ಲಸಿಕೆಗೆ 1,195 ರೂ.

ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆಗೆ ಬೆಲೆಯನ್ನು ನಿಗದಿಗೊಳಿಸಲಾಗಿದೆ. ಒಂದು ಡೋಸ್ ಲಸಿಕೆಗೆ 1,195 ರೂಪಾಯಿ ತೆಗೆದುಕೊಳ್ಳಲಾಗುವುದು ಎಂದು ಸಂಸ್ಥೆ ತಿಳಿಸಿದೆ. ಒಂದು ಡೋಸ್ ಸ್ಪುಟ್ನಿಕ್-ವಿ ಲಸಿಕೆಗೆ 995 ರೂಪಾಯಿ ಹಾಗೂ ಲಸಿಕೆ ವಿತರಣೆಗೆ 200 ರೂಪಾಯಿ ಸೇವಾ ಶುಲ್ಕ ವಿಧಿಸಲಾಗುತ್ತದೆ. ಒಟ್ಟಾರೆ ಒಂದು ಡೋಸ್ ಲಸಿಕೆಗೆ 1,195 ರೂಪಾಯಿ ಪಾವತಿಸಬೇಕಾಗುತ್ತದೆ.

English summary
Sputnik-V Vaccine Also Available At Manipal Hospital In Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X