ಸ್ಪುಟ್ನಿಕ್ V ಕೊರೊನಾ ಲಸಿಕೆ ಶೀಘ್ರ ಬೆಂಗಳೂರಿನಲ್ಲಿ ಲಭ್ಯ
ಬೆಂಗಳೂರು, ಜೂನ್ 17: ಸ್ಪುಟ್ನಿಕ್ V ಕೊರೊನಾ ಲಸಿಕೆ ಶೀಘ್ರ ಬೆಂಗಳೂರಿನಲ್ಲಿ ಲಬ್ಯವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
Recommended Video
ಕೋವಿಡ್ ವಿರುದ್ಧ ರಷ್ಯಾ ನಿರ್ಮಿತ ಸ್ಪುಟ್ನಿಕ್ V ಲಸಿಕೆಯ ಪ್ರಯೋಗ ಭಾರತದಲ್ಲಿ ನಡೆಯುತ್ತಿದ್ದು, ಅಂತಿಮ ಹಂತದಲ್ಲಿದೆ, ಶೀಘ್ರ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ ಡಾ ರೆಡ್ಡೀಸ್ ಲ್ಯಾಬೊರೇಟೊರೀಸ್ ಸಂಸ್ಥೆ ಹೇಳಿದೆ.
ಲಸಿಕೆಯ ಸಾಫ್ಟ್ ಲಾಂಚ್ ಭಾಗವಾಗಿ ಅದನ್ನು ಪ್ರಸ್ತುತ 9 ನಗರಗಳಲ್ಲಿ ನೀಡಲಾಗುತ್ತಿದೆ ಮತ್ತು ಬೇರೆ ನಗರಗಳಿಗೂ ವಿಸ್ತರಿಸುವ ಇರಾದೆ ಸಂಸ್ಥೆಗಿದೆ. ವಿಶಾಖಪಟ್ಟಣಂ, ಬೆಂಗಳೂರು. ಮುಂಬೈ, ಕೋಲ್ಕತಾ, ದೆಹಲಿ, ಬಡ್ಡಿ, ಮಿರ್ಯಾಲಗುಡ, ಚೆನೈ, ಮತ್ತು ಕೊಲ್ಹಾಪುರ ನಗರಗಳಲ್ಲಿ ಅದನ್ನು ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಡಿಜಿಟಲ್ ವ್ಯಾಕ್ಸಿನ್ ಡೆಲಿವರಿ ಪ್ಲಾಟ್ಫಾರ್ಮ್ ಕೊವಿನ್ನಲ್ಲಿ ಸ್ಪುಟ್ನಿಕ್ V ಲಸಿಕೆಗೆ ಇನ್ನೂ ಸ್ಲಾಟ್ಗಳು ದೊರೆತಿಲ್ಲ.
ಭಾರತದಲ್ಲಿ ಸ್ಪುಟ್ನಿಕ್ V ಲಸಿಕೆ ಸೀಮಿತ ಪೈಲಟ್ ಲಾಂಚ್ ಅನ್ನು ಮೇ 14 ರಂದು ಹೈದರಾಬಾದಿನ ಡಾ ರೆಡ್ಡೀಸ್ ಆರಂಭಿಸಿದ್ದು, ಅದರ ಅಂತಿಮ ಹಂತದ ಪರೀಕ್ಷೆಗಳು ಜಾರಿಯಲ್ಲಿದೆ. ಲಸಿಕೆಯನ್ನು ಮಾರುಕಟ್ಟೆಗಳಿಗೆ ಬಿಡುಗಡೆ ಮಾಡಲು ಸಂಸ್ಥೆಯು ಸಿದ್ಧವಾಗುತ್ತಿದೆ ಎಂದು ಡಾ ರೆಡ್ಡೀಸ್ ಲ್ಯಾಬೊರೇಟೊರೀಸ್ ಹೇಳಿಕೆ ಬಿಡುಗಡೆ ಮಾಡಿದೆ.

ಲಸಿಕೆಗೆ ಶೈತ್ಯಾಗಾರ ವ್ಯವಸ್ಥೆ
ಪೈಲಟ್ ಹಂತವು ನಮ್ಮ ಶೈತ್ಯಾಗಾರದ ವ್ಯವಸ್ಥೆಯನ್ನು ಈ ನಗರಗಳಲ್ಲಿ ಟೆಸ್ಟ್ ಮಾಡುವ ಅವಕಾಶವನ್ನು ಕಲ್ಪಿಸಿದೆ, ಸ್ಪುಟ್ನಿಕ್ ಲಸಿಕೆಯನ್ನು -18 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಸ್ಟೋರ್ ಮಾಡಬೇಕಾಗುತ್ತದೆ, ಮಾರುಕಟ್ಟೆಗಳಿಗೆ ಬಿಡುಗಡೆ ಮಾಡುವುದಕ್ಕೂ ಮುನ್ನ ಎಲ್ಲಾ ಸಿದ್ಧತೆಗಳನ್ನು ನಾವು ಮಾಡಿಕೊಳ್ಳುತ್ತಿದ್ದೇವೆ ಎಂದು ಕಂಪನಿಯ ಹೇಳಿಕೆ ತಿಳಿಸಿದೆ.

ನೋಂದಣಿ ಇನ್ನೂ ಶುರುವಾಗಿಲ್ಲ
ಲಸಿಕೆ ಪೈಲಟ್ ಹಂತದಲ್ಲಿರುವುದರಿಂದ ಸಾರ್ವಜನಿಕರಿಗೆ ಕೊವಿನ್ ಪ್ಲಾಟ್ಫಾರ್ಮ್ನಲ್ಲಿ ಸ್ಪುಟ್ನಿಕ್ ಲಸಿಕೆಗಾಗಿ ನೋಂದಣಿ ಇನ್ನೂ ಪ್ರಾರಂಭವಾಗಿಲ್ಲ. ಲಸಿಕೆಯ ವಾಣಿಜ್ಯ ಲಾಂಚ್ ಸಂದರ್ಭದಲ್ಲಿ ಅದು ತೆರೆಯಲಿದೆ ಎಂದು ಕಂಪನಿ ಹೇಳಿದೆ.

ಲಸಿಕೆ ಶೇ.91.6ರಷ್ಟು ಪರಿಣಾಮಕಾರಿ
ರಷ್ಯನ್ ಸಾವರೀನ್ ವೆಲ್ತ್ ಫಂಡ್ (ಆರ್ಡಿಐಎಫ್) ನೆರವಿನಿಂದ ಸ್ಪುಟ್ನಿಕ್ V ಲಸಿಕೆಯನ್ನು ರಷ್ಯಾದ ಗಮಾಲೆಯಾ ಇನ್ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿದ್ದು, ಜಾಗತಿವಾಗಿ ಆದರ ಮಾರ್ಕೆಟಿಂಗ್ ಸಹ ಮಾಡುತ್ತಿದೆ. ಸ್ಪುಟ್ನಿಕ್ V ಲಸಿಕೆಯು ಎರಡು-ಡೋಸ್ಗಳ ಶಾಟ್ ಆಗಿದ್ದು ಇದು ಸೋಂಕನ್ನು ತಡೆಯುವಲ್ಲಿ ಶೇ. 91.6 ರಷ್ಟು ಪರಿಣಾಮಕಾರಿಯಾಗಿದೆ.

ಮೂರನೇ ಕೊರೊನಾ ಲಸಿಕೆ
ಕೊವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ನಂತರ ಭಾರತದಲ್ಲಿ ತುರ್ತು ಸ್ಥಿತಿಯಲ್ಲಿ ಬಳಸಲು ಅನುಮತಿ ಪಡೆದಿರುವ ಮೂರನೇ ಲಸಿಕೆ ಸ್ಪುಟ್ನಿಕ್ V ಆಗಿದೆ. ನಮ್ಮೊಂದಿಗೆ ಪಾಲುದಾರಿಕೆ ಮಾಡಿಕೊಂಡಿರುವ ಆಸ್ಪತ್ರೆಗಳಲ್ಲಿ ಎರಡು ಡೋಸ್ಗಳ ಕಾಂಪೊನೆಂಟ್ಗಳು ಸರಿಯಾದ ಪ್ರಮಾಣದಲ್ಲಿ ಮತ್ತು ಸೂಕ್ತವಾದ ಸಮಯದಲ್ಲಿ ದೊರಕುವುದನ್ನು ಖಾತ್ರಿಪಡಿಸಿಕೊಳ್ಳಲು ಅಗತ್ಯವಿರುವ ಸರಬರಾಜು ಏರ್ಪಾಟುಗಳನ್ನು ಮಾಡಿಕೊಳ್ಳಲಾಗುತ್ತಿದೆ. ಒಮ್ಮೆ ಪ್ಲಾಟ್ ಹಂತ ಕೊನೆಗೊಂಡರೆ ಲಸಿಕೆಯ ಮಾರುಕಟ್ಟೆ ಬಿಡುಗಡೆ ಕುರಿತು ಡಾ ರೆಡ್ಡೀಸ್ ಘೋಷಣೆ ಮಾಡುತ್ತದೆ ಎಂದು ಹೇಳಿಕೆ ನೀಡಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications