ಕೆಪಿಎಸ್‍ಸಿ ಹಗರಣದ ಹೋರಾಟಕ್ಕೆ ಎಸ್ಆರ್ ಹಿರೇಮಠ ಬೆಂಬಲ
ಬೆಂಗಳೂರು, ಡಿ. 31 : ಕೆಪಿಎಸ್‍ಸಿ ಹಗರಣದ ಬಗ್ಗೆ ಕ್ರಮ ಕೈಗೊಳ್ಳುವಂತೆ ಮೂರು ದಿನಗಳ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಲೋಕಸತ್ತಾ ಪಕ್ಷ ಮತ್ತು ಅನ್ಯಾಯಕ್ಕೆ ಒಳಗಾಗಿರುವ ಅಭ್ಯರ್ಥಿಗಳಿರುವ ಸ್ಥಳಕ್ಕೆ ಭೇಟಿ ನೀಡಿದ ಸಾಮಾಜಿಕ ಹೋರಾಟಗಾರ ಎಸ್ಆರ್ ಹಿರೇಮಠ ಅವರು ಈ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಿದರು.
ಅನ್ಯಾಯಕ್ಕೆ ಒಳಗಾಗಿರುವ ಅಭ್ಯರ್ಥಿಗಳು ಯಾರಿಗೂ ಹೆದರದೇ ಮುಂದೆ ಬಂದು ಹೋರಾಟದ ಮುಂಚೂಣಿಗೆ ಬರಬೇಕು, ಆಗಲೇ ಭ್ರಷ್ಟರನ್ನು ಹೊರಹಾಕಲು ಸಾಧ್ಯವಾಗುವುದು. ಈ ನಿಮ್ಮ ಹೋರಾಟಕ್ಕೆ ನನ್ನ ಬೆಂಬಲ ಯಾವಗಲೂ ಇದ್ದೇ ಇದೆ ಹಾಗೂ ಮುಂದೆಯೂ ಇರುತ್ತದೆ ಎಂದು ಸೋಮವಾರ ಅವರನ್ನು ಭೇಟಿ ಮಾಡಿ ಹೇಳಿದರು. ನಂತರ ಉಪವಾಸ ಮಾಡುತ್ತಿದ್ದವರಿಗೆ ಜ್ಯೂಸ್ ನೀಡುವ ಮೂಲಕ ಮೂರು ದಿನಗಳ ಉಪವಾಸ ಸತ್ಯಾಗ್ರಹಕ್ಕೆ ಸಾಂಕೇತಿಕವಾಗಿ ಕೊನೆ ಮಾಡಿದರು. [ಕರ್ನಾಟಕ ವರ್ಷ ವ್ಯಕ್ತಿಗೆ ಅಭಿನಂದನೆಗಳು]

ಲೋಕಸತ್ತಾ ಪಕ್ಷದ ಬೇಡಿಕೆಗಳು
* ಕೆಪಿಎಸ್‌ಸಿಯಲ್ಲಿ ಭ್ರಷ್ಟಾಚಾರ ನಡೆಸಿತುತ್ತಿರುವವರ ವಿರುದ್ಧ ಕ್ರಮ ಮತ್ತು ಆಯ್ಕೆ ಪ್ರಕ್ರಿಯೆಯಲ್ಲಿ ಸುಧಾರಣೆ.
* ಸಿಐಡಿ ವರದಿಯಲ್ಲಿ ಹೆಸರಿಸಲಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು.
* 2011ರ ಆಯ್ಕೆಯ ಸುತ್ತೋಲೆಯನ್ನು ಹಿಂದಕ್ಕೆ ಪಡೆಯಬೇಕು. [ಎಸ್ಆರ್ ಹಿರೇಮಠ ಯಾರು? ಸಂಕ್ಷಿಪ್ತ ಪರಿಚಯ]
ಹೋರಾಟದ ಭಾಗವಾಗಿ ಭಾನುವಾರ ರಾತ್ರಿ ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಲೋಕಸತ್ತಾ ಪಕ್ಷದ ಕಾರ್ಯಕರ್ತರು ರವಿ ಕೃಷ್ಣಾರೆಡ್ಡಿಯವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪೋಲಿಸರು ಭೇಟಿಗೆ ಸರಿಯಾಗಿ ಅವಕಾಶ ನೀಡದೆ ದೌರ್ಜನ್ಯ ಎಸಗಿದರು. ಪ್ರಜಾಪ್ರಭುತ್ವದಲ್ಲಿ ತಮ್ಮ ಜನಪ್ರತಿನಿಧಿಯನ್ನು ಭೇಟಿ ಮಾಡಿ ತಮ್ಮ ಅಳಲು ಬೇಡಿಕೆ ಸಲ್ಲಿಸಲು ಅವಕಾಶ ನೀಡದೆ ಅನ್ಯಾಯ ಮಾಡಿದ್ದಾರೆ.
ಆನಂದ ರಾವ್ ವೃತ್ತದಲ್ಲಿರುವ ಮೌರ್ಯ ಹೋಟೆಲ್ ಮುಂದಿರುವ ಗಾಂಧಿ ಪ್ರತಿಮೆ ಎದಿರು ಲೋಕಸತ್ತಾ ಪಕ್ಷದ ಕಾರ್ಯಕರ್ತರು ಡಿ.28, 29 ಮತ್ತು 30ರಂದು ಉಪವಾಸ ಸತ್ಯಾಗ್ರಹ ನಡೆಸಿದರು. ಲೋಕಸತ್ತಾ ಪಕ್ಷ ಮತ್ತು ಈ ಹಗರಣದಿಂದ ಭಾದಿತರಾದ ಅನೇಕ ಅಭ್ಯರ್ಥಿಗಳು ಈ ಬಗ್ಗೆ ಕಳೆದ ಹಲವಾರು ತಿಂಗಳುಗಳಿಂದ ಹೋರಾಟ ನಡೆಸುತ್ತಿದೆ ಎಂದು ಇಲ್ಲಿ ಸ್ಮರಿಸಬಹುದು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications