ಗುರುರಾಘವೇಂದ್ರ ಬ್ಯಾಂಕ್ ಅವ್ಯವಹಾರ: ಉದ್ಯಮಿಗಳ ಮನೆ ಮೇಲೆ ಸಿಐಡಿ ದಾಳಿ

ಬೆಂಗಳೂರು, ಆಗಸ್ಟ್ 5: ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೆಲವು ಉದ್ಯಮಿಗಳ ಮನೆ ಮೇಲೆ ಸಿಐಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಉದ್ಯಮಿಗಳಿಗೆ ಸೇರಿದ ಸುಮಾರು ಹದಿನೈದು ಸ್ಥಳಗಳಲ್ಲಿ ಸಿಐಡಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದು, ಮಾಹಿತಿ ಕಲೆಹಾಕಿದ್ದಾರೆ.

ಸಾವಿರಾರು ಗ್ರಾಹಕರ ಠೇವಣಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಿ ಸಾವಿರಾರು ಕೋಟಿ ವಂಚನೆ ಮಾಡಿರುವ ಆರೋಪ ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಮೇಲಿದೆ. ಈ ಸಂಬಂಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಾಗಿದೆ.

Sri Guru Raghavendra Bank: Cid Officials Conducted Raids On A Few Businessmen In 15 Spots

ಈ ಹಿಂದೆ ಎಸಿಬಿ ಮತ್ತು ಸಿಐಡಿ ಎರಡೂ ಸಂಸ್ಥೆಗಳು ಈ ಪ್ರಕರಣವನ್ನು ತನಿಖೆ ಮಾಡುತ್ತಿತ್ತು. ಬಳಿಕ ಹೈಕೋರ್ಟ್ ಆದೇಶದಂತೆ ಇಡೀ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಇದೀಗ, ಪ್ರಕರಣ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಕೇಸ್‌ಗೆ ಸಂಬಂಧಿಸಿದ ವ್ಯಕ್ತಿಗಳ ವಿಚಾರಣೆ ಆರಂಭಿಸಿದ್ದಾರೆ.

ಇದಕ್ಕೂ ಮುಂಚೆ ಬ್ಯಾಂಕಿನ ಪ್ರಧಾನ ಕಚೇರಿ, ಬಸವನಗುಡಿ ಶಾಖೆ, ಶ್ರೀ ಗುರುಸಾರ್ವಭೌಮ ಸೌಹಾರ್ಧ ಸಹಕಾರ ಸಂಘ, ಬ್ಯಾಂಕಿನ ಮಾಜಿ ಅಧ್ಯಕ್ಷ ರಾಮಕೃಷ್ಣ ಮತ್ತು ಬಸವನಗುಡಿ ಮನೆ ಮತ್ತು ಸಿಇಒ ಮಣೂರು ವಾಸುದೇವ ಮಯ್ಯ ಅವರ ಮನೆಗಳಲ್ಲಿ ಎಸಿಬಿ ಅಧಿಕಾರಿಗಳ ದಾಳಿ ನಡಿಸಿ ಪರಿಶೀಲನೆ ನಡೆಸಿದ್ದರು.

ಬೆಂಗಳೂರು ನಗರದಲ್ಲಿಯೇ ಶ್ರೀ ಗುರುರಾಘವೇಂದ್ರ ಸಹಕಾರಿ ಬ್ಯಾಂಕ್ 12 ಶಾಖೆಗಳನ್ನು ಹೊಂದಿದೆ. ಆಕರ್ಷಕ ಬಡ್ಡಿ ದರ ನೀಡುವ ಘೋಷಣೆಯನ್ನು ಬ್ಯಾಂಕ್ ಮಾಡಿತ್ತು. ಆದ್ದರಿಂದ ಗ್ರಾಹಕರು ಸುಮಾರು 2,400 ಕೋಟಿ ಠೇವಣಿ ಇಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+