ರಾಮ ಮಂದಿರ ಕುರಿತ ಮೋದಿ ಹೇಳಿಕೆಗೆ ಶ್ರೀರಾಮ ಸೇನೆ ವಿರೋಧ
ಬೆಂಗಳೂರು, ಜನವರಿ 01: ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣದ ಬಗ್ಗೆ ನೀಡಿರುವ ಹೇಳಿಕೆಯನ್ನು ಶ್ರೀರಾಮ ಸೇನೆ ತೀವ್ರವಾಗಿ ವಿರೋಧಿಸಿದೆ.
ಮೋದಿ ಅವರು ಇಂದು ಎಎನ್‌ಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ರಾಮ ಮಂದಿರದ ಬಗ್ಗೆ ಮಾತನಾಡಿ, ರಾಮ ಮಂದಿರ ನಿರ್ಮಾಣ ನ್ಯಾಯಾಲಯ ತೀರ್ಪಿನ ನಂತರವೇ ಆಗಬೇಕು. ನಿರ್ಣಯ ಬಂದ ನಂತರವೇ ಸುಗ್ರೀವಾಜ್ಞೆ ಬಗ್ಗೆ ಯೋಚಿಸಲಾಗುತ್ತದೆ ಎಂದಿದ್ದಾರೆ.
ಆದರೆ ಈ ಹೇಳಿಕೆಯನ್ನು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ನ್ಯಾಯಾಲಯದ ತೀರ್ಪಿನ ನಂತರವೇ ರಾಮ ಮಂದಿರ ನಿರ್ಮಾಣವಾಗಬೇಕು ಎನ್ನುವುದಾದರೆ ಚಳುವಳಿಯ ಅಗತ್ಯವೇನಿದೆ ಎಂದು ಮುತಾಲಿಕ್ ಪ್ರಶ್ನಿಸಿದ್ದಾರೆ.

ರಾಮ ಮಂದಿರ ನಿರ್ಮಾಣ ವಿಳಂಬ ಆಗುತ್ತಿರುವ ಕಾರಣ. ಮಂದಿರ ನಿರ್ಮಾಣಕ್ಕೆ ನ್ಯಾಯಾಲಯದ ತೀರ್ಪಿನ ವರೆಗೆ ಕಾಯದೆ. ಕೇಂದ್ರ ಸರ್ಕಾರವು ಸುಗ್ರೀವಾಜ್ಞೆ ಹೊರಡಿಸಿ ಮಂದಿರ ನಿರ್ಮಾಣ ಮಾಡಬೇಕು ಎನ್ನುವ ಒತ್ತಡ ಹೆಚ್ಚಾಗಿತ್ತು. ಆದರೆ ಇಂದು ಮೋದಿ ಅವರು ಆ ಆಸೆಗೆ ತಣ್ಣೀರೆರಚಿದ್ದಾರೆ.











Click it and Unblock the Notifications