ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮ ಮಂದಿರ ಕುರಿತ ಮೋದಿ ಹೇಳಿಕೆಗೆ ಶ್ರೀರಾಮ ಸೇನೆ ವಿರೋಧ

|
Google Oneindia Kannada News

ಬೆಂಗಳೂರು, ಜನವರಿ 01: ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣದ ಬಗ್ಗೆ ನೀಡಿರುವ ಹೇಳಿಕೆಯನ್ನು ಶ್ರೀರಾಮ ಸೇನೆ ತೀವ್ರವಾಗಿ ವಿರೋಧಿಸಿದೆ.

ನರೇಂದ್ರ ಮೋದಿ ಸಂದರ್ಶನ: ರಾಮ ಮಂದಿರಕ್ಕೆ ಸುಗ್ರೀವಾಜ್ಞೆ ಇಲ್ಲ ನರೇಂದ್ರ ಮೋದಿ ಸಂದರ್ಶನ: ರಾಮ ಮಂದಿರಕ್ಕೆ ಸುಗ್ರೀವಾಜ್ಞೆ ಇಲ್ಲ

ಮೋದಿ ಅವರು ಇಂದು ಎಎನ್‌ಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ರಾಮ ಮಂದಿರದ ಬಗ್ಗೆ ಮಾತನಾಡಿ, ರಾಮ ಮಂದಿರ ನಿರ್ಮಾಣ ನ್ಯಾಯಾಲಯ ತೀರ್ಪಿನ ನಂತರವೇ ಆಗಬೇಕು. ನಿರ್ಣಯ ಬಂದ ನಂತರವೇ ಸುಗ್ರೀವಾಜ್ಞೆ ಬಗ್ಗೆ ಯೋಚಿಸಲಾಗುತ್ತದೆ ಎಂದಿದ್ದಾರೆ.

ಬಿಜೆಪಿಗೆ ಶಾಕ್, ರಾಮಮಂದಿರ ವಿಚಾರಕ್ಕೆ ಇನ್ನು ಬ್ರೇಕ್; ಇನ್ನೇನಿದ್ದರೂ 'ಪ್ಲ್ಯಾನ್ ಬಿ'!ಬಿಜೆಪಿಗೆ ಶಾಕ್, ರಾಮಮಂದಿರ ವಿಚಾರಕ್ಕೆ ಇನ್ನು ಬ್ರೇಕ್; ಇನ್ನೇನಿದ್ದರೂ 'ಪ್ಲ್ಯಾನ್ ಬಿ'!

ಆದರೆ ಈ ಹೇಳಿಕೆಯನ್ನು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ನ್ಯಾಯಾಲಯದ ತೀರ್ಪಿನ ನಂತರವೇ ರಾಮ ಮಂದಿರ ನಿರ್ಮಾಣವಾಗಬೇಕು ಎನ್ನುವುದಾದರೆ ಚಳುವಳಿಯ ಅಗತ್ಯವೇನಿದೆ ಎಂದು ಮುತಾಲಿಕ್ ಪ್ರಶ್ನಿಸಿದ್ದಾರೆ.

Sri Ram sena oppose Narendra Modi statment about Ram Mandir

ರಾಮ ಮಂದಿರ ನಿರ್ಮಾಣ ವಿಳಂಬ ಆಗುತ್ತಿರುವ ಕಾರಣ. ಮಂದಿರ ನಿರ್ಮಾಣಕ್ಕೆ ನ್ಯಾಯಾಲಯದ ತೀರ್ಪಿನ ವರೆಗೆ ಕಾಯದೆ. ಕೇಂದ್ರ ಸರ್ಕಾರವು ಸುಗ್ರೀವಾಜ್ಞೆ ಹೊರಡಿಸಿ ಮಂದಿರ ನಿರ್ಮಾಣ ಮಾಡಬೇಕು ಎನ್ನುವ ಒತ್ತಡ ಹೆಚ್ಚಾಗಿತ್ತು. ಆದರೆ ಇಂದು ಮೋದಿ ಅವರು ಆ ಆಸೆಗೆ ತಣ್ಣೀರೆರಚಿದ್ದಾರೆ.

English summary
Sri Ram Sena oppose Prime minster Narendra Modi statement about building Ram Mandir. Modi said no ordinance about Ram mandir. We will wait for court verdict.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X