ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ಗೆ ಕೊರೊನಾ ಸೋಂಕು

|
Google Oneindia Kannada News

ಬೆಂಗಳೂರು, ಸೆ. 19: ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದ ಹಲವೆಡೆ ಪ್ರವಾಸ ಕೈಗೊಂಡಿರುವ ಸಮಯದಲ್ಲಿ ಅವರು ಜ್ಚರದಿಂದ ಬಳಲುತ್ತಿದ್ದರು. ಹೀಗಾಗಿ ಕೋವಿಡ್ ಪರೀಕ್ಷೆಗೆ ಒಳಗಾದಾಗ ಸೋಂಕು ತಗುಲಿರುವುದು ಪತ್ತೆಯಾಗಿದೆ. ನಿನ್ನೆ ರಾತ್ರಿಯೇ ಬೆಂಗಳೂರಿನ ಯಲಹಂಕದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಪ್ರಮೋದ್ ಮುತಾಲಿಕ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಇತ್ತೀಚೆಗೆ ಮೈಸೂರು ಸಂಸದ ಪ್ರತಾಪ ಸಿಂಹ ಸೇರಿದಂತೆ ಹಲವರನ್ನು ಭೇಟಿಯಾಗಿದ್ದರು. ರಾಜ್ಯದಲ್ಲಿನ ಆಗುಹೋಗುಗಳ ಬಗ್ಗೆ ಸಮಾಲೋಚನೆ ನಡೆಸಿದ್ದರು. ಸತತ ಪ್ರಯಾಣದಿಂದ ಜ್ವರ ಬಂದಿದೆ ಎನ್ನಲಾಗಿತ್ತು. ಆದರೂ ಮುಂಜಾಗ್ರತಾ ಕ್ರಮವಾಗಿ ತಪಾಸಣೆಗೆ ಒಳಗಾದಾಗ ಸೋಂಕಿರುವುದು ಪತ್ತೆಯಾಗಿದೆ.

Sri Rama Sene Chief Pramod Muthalik Tests Covid 19 Positive

Recommended Video

Drugs ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ DK Shivakumar | Oneindia Kannada

ಪ್ರಮೋದ್ ಮುತಾಲಿಕ್ ಅವರು ಬೇಗ ಗುಣಮುಖರಾಗುವಂತೆ ಧಾರವಾಡದ ಲೈನ್ ಬಜಾರದಲ್ಲಿನ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬೆಂಬಲಿಗರು, ಅಭಿಮಾನಿಗಳು ಮಾಡುತ್ತಿದ್ದಾರೆ. ಮುತಾಲಿಕ್ ಅವರು ಶೀಘ್ರ ಕೋವಿಡ್‌ನಿಂದ ಗುಣಮುಖರಾಗಿ ಬರಲಿ ಎಂದು ಪ್ರಾರ್ಥನೆ ಮಾಡಲಿದ್ದಾರೆ.

English summary
Srirama Sena chief Pramod Muthalik has been confirmed covid-19. He was suffering from fever while on tour across the state. Pramodha Muthalik, who was admitted to a private hospital in Yelahanka, Bangalore last night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X