ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಸಕ ಸ್ಥಾನಕ್ಕೆ ಬಿ ಶ್ರೀರಾಮುಲು ರಾಜೀನಾಮೆ

By Srinath
|
Google Oneindia Kannada News

sriramulu-resigns-as-mla-to-contest-bellary-ls-seat-on-bjp-ticket
ಬೆಂಗಳೂರು, ಮಾರ್ಚ್ 19: ತಾವು ಮರಳಿ ಬಿಜೆಪಿ ಸೇರುವ ಸಂಬಂಧವೆದ್ದಿದ್ದ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಎಸ್ಸಾರ್ ಕಾಂಗ್ರೆಸ್ ಶಾಸಕ ಬಿ ಶ್ರೀರಾಮುಲು ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆ ವಿಧಾನಸೌಧದಲ್ಲಿ ವಿಧಾನ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಭೇಟಿಯಾದ ರಾಮುಲು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವುದಾಗಿ ಘೋಷಿಸಿದರು.

ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರನ್ನು ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಅವರ ಕಚೇರಿಯಲ್ಲಿ ಭೇಟಿ ಮಾಡಿದ ರಾಮುಲು ಬೆಳಗ್ಗೆ 10.40ಕ್ಕೆ ತಮ್ಮ ತ್ಯಾಗಪತ್ರ ಸಲ್ಲಿಸಿದರು. ದೇಶದ ಭವ್ಯ ಭವಿಷ್ಯಕ್ಕಾಗಿ ತಾವು ಬಿಜೆಪಿ ಸೇರುತ್ತಿರುವುದಾಗಿಯೂ, ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರ ಕೈಬಲಪಡಿಸುವುದಾಗಿಯೂ ಶ್ರೀರಾಮುಲು ಇದೇ ಸಂದರ್ಭದಲ್ಲಿ ಹೇಳಿದರು.

ಈ ಮಧ್ಯೆ, ರೆಡ್ಡಿ ಬ್ರದರ್ಸ್ ಪೈಕಿ ಕೆಎಂಎಫ್ ಅಧ್ಯಕ್ಷ ಜಿ ಸೋಮಶೇಖರ ರೆಡ್ಡಿ, ಬಿಜೆಪಿ ಶಾಸಕ ಕರುಣಾಕರ ರೆಡ್ಡಿ, ಸಂಸದೆ ಜೆ ಶಾಂತಾ ಅವರುಗಳ ನಡೆಯೇನು? ಬಿಎಸ್ಸಾರ್ ಕಾಂಗ್ರೆಸ್ ಪಕ್ಷದ ಇತರೆ ಶಾಸಕರ ಮುಂದಿನ ನಡೆಯೇನು? ಎಂಬುದು ನಿಗೂಢವಾಗಿದೆ.

ಇತ್ತೀಚೆಗಷ್ಟೇ ಶ್ರೀರಾಮುಲು ಅವರು ಬಿಎಸ್ಸಾರ್ ಕಾಂಗ್ರೆಸ್ ಪಕ್ಷದಿಂದ ಭಾರತೀಯ ಜನತಾ ಪಕ್ಷವನ್ನ ಸೇರಿಕೊಂಡಿದ್ದರು. ಭಾರತೀಯ ಜನತಾ ಪಕ್ಷದ ಮೂಲಕವೇ ರಾಜಕೀಯ ಪ್ರವೇಶ ಮಾಡಿದ್ದ ಮಾಜಿ ಸಚಿವ ಶ್ರೀರಾಮುಲು ಅವರು ರೆಡ್ಡಿ ಸಹೋದರರು ಜೈಲಿಗೆ ಹೋದ ಬಳಿಕ ಬಿಜೆಪಿಯಿಂದ ಸಿಡಿದು ಬಿಎಸ್ಸಾರ್ ಕಾಂಗ್ರೆಸ್ ಹುಟ್ಟುಹಾಕಿದ್ದರು.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಶ್ರೀರಾಮುಲು ಅವರನ್ನು ಬಿಜೆಪಿ ತನ್ನ ಪಕ್ಷಕ್ಕೆ ಆಹ್ವಾನಿಸಿತ್ತು. ರಾಮುಲು ಸಹ ತಾವು ಬಿಜೆಪಿಗೆ ಮರಳುವುದನ್ನು ಬಯಸಿದ್ದರು. ಆದರೆ ಕೇಂದ್ರ ನಾಯಕಿ ಸುಷ್ಮಾ ಸ್ವರಾಜ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದಾಗ್ಯೂ, ಶ್ರೀರಾಮುಲು ಅವರನ್ನು ಸೇರಿಸಿಕೊಳ್ಳಲು ನಿರ್ಧರಿಸಿದ ಬಿಜೆಪಿ ಅವರಿಗೆ ಬಳ್ಳಾರಿ ಟಿಕೆಟ್ ಸಹ ನೀಡಿದೆ.

English summary
Lok Sabha Election 2014- Sriramulu who returned to BJP recently is all set to contest Bellary LS Seat. In the meanwhile today he resigned as MLA of Bellary Lok Sabha constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X