ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್‌ಗೆ ಶ್ರುತಿ ಹರಿಹರನ್ ಅರ್ಜಿ

|
Google Oneindia Kannada News

ಬೆಂಗಳೂರು, ನವೆಂಬರ್ 13 : ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ನಟಿ ಶ್ರುತಿ ಹರಿಹರನ್ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಅರ್ಜಿಯ ವಿಚಾರಣೆ ಬುಧವಾರ ನಡೆಯುವ ಸಾಧ್ಯತೆ ಇದೆ.

ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ನಟ ಅರ್ಜುನ್ ಸರ್ಜಾ ಮ್ಯಾನೇಜರ್ ಶಿವಾರ್ಜುನ್ ಅವರು ನೀಡಿದ ದೂರಿನ ಅನ್ವಯ ಶ್ರುತಿ ಹರಿಹರನ್ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಈ ಎಫ್‌ಐಆರ್ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಲಾಗಿದೆ.

ಲೈಂಗಿಕ ಕಿರುಕುಳ ಆರೋಪ: ಪೊಲೀಸ್ ಠಾಣೆಗೆ ಹಾಜರಾದ ಅರ್ಜುನ್ ಸರ್ಜಾಲೈಂಗಿಕ ಕಿರುಕುಳ ಆರೋಪ: ಪೊಲೀಸ್ ಠಾಣೆಗೆ ಹಾಜರಾದ ಅರ್ಜುನ್ ಸರ್ಜಾ

Sruthi Hariharan moves high court seeking fir quash

ಫೇಸ್‌ಬುಕ್, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಅರ್ಜುನ್ ಸರ್ಜಾ ವ್ಯಕ್ತಿತ್ವಕ್ಕೆ ಧಕ್ಕೆ ತರಲಾಗುತ್ತಿದೆ. ಆದ್ದರಿಂದ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿತ್ತು.

ಎಫ್‌ಐಆರ್‌ ರದ್ದು ಕೋರಿ ಕೋರ್ಟ್‌ ಮೊರೆ ಹೋದ ಅರ್ಜುನ್ ಸರ್ಜಾಎಫ್‌ಐಆರ್‌ ರದ್ದು ಕೋರಿ ಕೋರ್ಟ್‌ ಮೊರೆ ಹೋದ ಅರ್ಜುನ್ ಸರ್ಜಾ

ಐಟಿ ಕಾಯ್ದೆ 200ರ ಅಡಿ ಶ್ರುತಿ ಹರಿಹರನ್ ಮತ್ತು ಇತರರ ವಿರುದ್ಧ ದೂರು ದಾಖಲು ಮಾಡಿಕೊಂಡು ಎಫ್ಐಆರ್ ಹಾಕಲಾಗಿದೆ. ನಟ ಅರ್ಜುನ್ ಸರ್ಜಾ ಮತ್ತು ಅವರ ಕುಟುಂಬದ ವಿರುದ್ಧ ಒಳಸಂಚು ರೂಪಿಸಿ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಒಟ್ಟಿಗೆ ಮಜಾ ಮಾಡೋಣ ಎಂದು ಕರೆದ ಸರ್ಜಾ: ಶ್ರುತಿ ಹರಿಹರನ್ ದೂರುಒಟ್ಟಿಗೆ ಮಜಾ ಮಾಡೋಣ ಎಂದು ಕರೆದ ಸರ್ಜಾ: ಶ್ರುತಿ ಹರಿಹರನ್ ದೂರು

ನಟ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಮೀಟೂ ಆರೋಪ ಮಾಡಿದ್ದರು. 'ವಿಸ್ಮಯ' ಚಿತ್ರದ ಚಿತ್ರೀಕರಣದ ಸಮಯದಲ್ಲಿ ಕೆಟ್ಟ ಅನುಭವವಾಗಿದೆ ಎಂದು ದೂರಿದ್ದರು.

ಅರ್ಜುನ್ ಸರ್ಜಾ ಅವರು ಶ್ರುತಿ ಹರಿಹರನ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ದಾಖಲು ಮಾಡಿದ್ದು, ಅದರ ವಿಚಾರಣೆಯೂ ನ್ಯಾಯಾಲಯದಲ್ಲಿ ನಡೆಯುತ್ತಿದೆ.

English summary
Sruthi Hariharan moved the High Court of Karnataka seeking quash of FIR registered against her in Cyber Crime police station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X