SSLC ಪರೀಕ್ಷೆ-2: ಫೇಲಾದವರಿಗೆ ಇನ್ನೊಂದು ಅವಕಾಶ; ವೇಳಾಪಟ್ಟಿ ಮತ್ತು ಶುಲ್ಕದ ವಿವರ ಇಲ್ಲಿದೆ

ಬೆಂಗಳೂರು: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2026 ಫಲಿತಾಂಶ ಪ್ರಕಟವಾಗಿದೆ. ಇದರ ಬೆನ್ನಲ್ಲೆ ಕಡಿಮೆ ಅಂಕ ಪಡೆದವರು ಮತ್ತು ಅನುತ್ತೀರ್ಣ ಆದವರಿಗೆ ಪರೀಕ್ಷೆ 2ಕ್ಕೆ ಅರ್ಜಿ ಸಲ್ಲಿಕೆ ಶಿಕ್ಷಣ ಇಲಾಖೆ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಅರ್ಜಿ ಶುಲ್ಕ, ದಿನಾಂಕ ವಿವರ ಇಲ್ಲಿದೆ.

2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ ಬಳಿಕ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ (Scan Copy), ಮರುಎಣಿಕೆ ಮತ್ತು ಮರುಮೌಲ್ಯಮಾಪನಕ್ಕೆ (Revaluation) ಅರ್ಜಿ ಸಲ್ಲಿಸಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಅಧಿಕೃತ ವೇಳಾಪಟ್ಟಿ ನೀಡಲಾಗಿದೆ. ಪರೀಕ್ಷೆಯಲ್ಲಿ ಪಡೆದ ಅಂಕಗಳ ಬಗ್ಗೆ ಅತೃಪ್ತಿ ಇರುವ ಅಥವಾ ಫಲಿತಾಂಶದ ಬಗ್ಗೆ ಅನುಮಾನವಿರುವ ವಿದ್ಯಾರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

SSLC Exam 2

ಸ್ಕ್ಯಾನ್ ಪ್ರತಿಗಾಗಿ ಅರ್ಜಿ ಸಲ್ಲಿಸಿ

ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಏಪ್ರಿಲ್ 23 ರಿಂದ ಏಪ್ರಿಲ್ 26ರ ಒಳಗಾಗಿ ದಂಡ ರಹಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವೇಳೆ ನಿಗದಿತ ಸಮಯದಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದರೆ, ಏಪ್ರಿಲ್ 27 ಮತ್ತು 28ರಂದು ಪ್ರತಿ ವಿಷಯಕ್ಕೆ 100 ರೂ. ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

SSLC Results 2026: ಬಂತು ಎಸ್‌ಎಸ್‌ಎಲ್‌ಸಿ ರಿಸಲ್ಟ್; ಈ ಬಾರಿ ಶೇ 90ರಷ್ಟು ಸಾಧನೆ
SSLC Results 2026: ಬಂತು ಎಸ್‌ಎಸ್‌ಎಲ್‌ಸಿ ರಿಸಲ್ಟ್; ಈ ಬಾರಿ ಶೇ 90ರಷ್ಟು ಸಾಧನೆ

ಇನ್ನೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಆಫ್‌ಲೈನ್ ಚಲನ್ ಪಡೆಯಲು ಏಪ್ರಿಲ್ 29 ಕೊನೆಯ ದಿನವಾಗಿದೆ. ಪ್ರತಿ ವಿಷಯದ ಸ್ಕ್ಯಾನ್ ಪ್ರತಿಗಾಗಿ ಆನ್‌ಲೈನ್‌ನಲ್ಲಿ 410 ರೂ. ಹಾಗೂ ಬೆಂಗಳೂರು ಒನ್ ಅಥವಾ ಇತರ ಕೇಂದ್ರಗಳಲ್ಲಿ 420 ರೂ. ಶುಲ್ಕ ನಿಗದಿಪಡಿಸಲಾಗಿದೆ.

ಮರುಮೌಲ್ಯಮಾಪನ ಮತ್ತು ಮರುಎಣಿಕೆ

ಸ್ಕ್ಯಾನ್ ಪ್ರತಿಗಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಮಾತ್ರ ಮರು ಮೌಲ್ಯಮಾಪನ ಅಥವಾ ಮರುಎಣಿಕೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಏಪ್ರಿಲ್ 28 ರಿಂದ ಮೇ 4ರವರೆಗೆ ಕಾಲಾವಕಾಶ ನೀಡಲಾಗಿದೆ. ಆಫ್‌ಲೈನ್ ಮೂಲಕ ಚಲನ್ ಪಡೆದು ಶುಲ್ಕ ಪಾವತಿಸಲು ಮೇ 5 ಕೊನೆಯ ದಿನಾಂಕವಾಗಿದೆ. ಮರು ಮೌಲ್ಯಮಾಪನದ ಪ್ರತಿ ವಿಷಯಕ್ಕೆ ಆನ್‌ಲೈನ್‌ನಲ್ಲಿ 810 ರೂ. ಶುಲ್ಕವಿದ್ದು, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳ ಮೂಲಕ ಪಾವತಿಸಿದರೆ 820 ರೂ.ಗಳ ಶುಲ್ಕ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ

ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅಥವಾ ಹತ್ತಿರದ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳ ಮೂಲಕ ನಿಗದಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಬಹುದು. ಸ್ಕ್ಯಾನ್ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡ ನಂತರವಷ್ಟೇ ಮರುಮೌಲ್ಯಮಾಪನಕ್ಕೆ ಹೋಗಬೇಕೆ ಅಥವಾ ಬೇಡವೇ ಎಂಬ ನಿರ್ಧಾರವನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳಬಹುದಾಗಿದೆ. ನಿಗದಿತ ದಿನಾಂಕದ ನಂತರ ಬರುವ ಯಾವುದೇ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಂಡಳಿಯು ಸ್ಪಷ್ಟಪಡಿಸಿದೆ.

SSLC 3ನೇ ಪರೀಕ್ಷೆ ಇಲ್ಲ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ರ ಫಲಿತಾಂಶ ಪ್ರಟವಾಗಿದ್ದು, ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳಿಗಾಗಿ ಪರೀಕ್ಷೆ 2 ನಡೆಯುವ ವೇಳಾಪಟ್ಟಿ, ಶುಲ್ಕದ ಮಾಹಿತಿ ನೀಡಲಾಗಿದೆ. ವಿದ್ಯಾರ್ಥಿಗಳಿಗಾಗಿ ಪ್ರತಿ ವರ್ಷ ನಡೆಸುತ್ತಿದ್ದ SSLC ಪರೀಕ್ಷೆ 3ನ್ನು ಈ ವರ್ಷದಿಂದ ಶಿಕ್ಷಣ ಇಲಾಖೆ ಕೈ ಬಿಟ್ಟಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+