ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

SSLC Exam ಯಶಸ್ವಿಯಾಗಿ ನಡೆಸಲು ಶ್ರಮಿಸಿದ ಸಮಸ್ತ ಸಿಬ್ಬಂದಿಗಳಿಗೆ ಧನ್ಯವಾದ ಅರ್ಪಿಸಿದ ಸಿಎಂ

|
Google Oneindia Kannada News

ಬೆಂಗಳೂರು, ಜುಲೈ 3: ಇಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಗಿದಿದೆ. ಕೊರೊನಾ ವೈರಸ್‌ ಸೋಂಕಿನ ನಡುವೆ ಪರೀಕ್ಷೆ ನಡೆಯುತ್ತಿದ್ದು, ಆತಂಕದಲ್ಲಿ ಶುರು ಮಾಡಲಾಗಿತ್ತು. ಇಂದಿಗೆ ಎಲ್ಲ ವಿಷಯಗಳು ಮುಗಿದಿದೆ.

ಎಸ್ಎಸ್ಎಲ್‌ಸಿ ಪರೀಕ್ಷೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ''ಕೋವಿಡ್ ಸಂದರ್ಭದಲ್ಲೂ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿರುವ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವನ್ನು ಹಾರೈಸುತ್ತೇನೆ.'' ಎಂದಿದ್ದಾರೆ.

ಎಸ್ಎಸ್ಎಲ್‌ಸಿ, ಪಿಯುಸಿ ಫಲಿತಾಂಶ ದಿನಾಂಕ ಹೇಳಿದ ಶಿಕ್ಷಣ ಸಚಿವಎಸ್ಎಸ್ಎಲ್‌ಸಿ, ಪಿಯುಸಿ ಫಲಿತಾಂಶ ದಿನಾಂಕ ಹೇಳಿದ ಶಿಕ್ಷಣ ಸಚಿವ

''ಎಸ್ ಎಸ್ ಎಲ್‌ ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಶ್ರಮಿಸಿದ ಸಂಪುಟ ಸಹೋದ್ಯೋಗಿ ಸುರೇಶ್ ಕುಮಾರ್ ಶಿಕ್ಷಣ, ಆರೋಗ್ಯ ಮತ್ತು ಪೊಲೀಸ್ ಇಲಾಖೆಯ ಸಮಸ್ತ ಸಿಬ್ಬಂದಿಗೆ ಅಭಿನಂದನೆಗಳು. ಹಾಗೆಯೇ, ಪರೀಕ್ಷೆ ಸುಸೂತ್ರವಾಗಿ ನಡೆಯಲು ಸಹಕರಿಸಿದ ಪೋಷಕರು, ಸ್ವಯಂ ಸೇವಾ ಸಂಸ್ಥೆಗಳು, ವಿವಿಧ ಸಂಘಟನೆಗಳು ಹಾಗೂ ಸ್ವಯಂ ಸೇವಕರಿಗೆ ಧನ್ಯವಾದಗಳು'' ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

CM yediyurappa Tweets About SSLC Exam

''ನಮ್ಮ‌ಮೇಲೆ ಭರವಸೆ‌ ಇಟ್ಟ ಎಲ್ಲಾ SSLC ಮಕ್ಕಳ‌ ಪೋಷಕರಿಗೆ ಹೃತ್ಪೂರ್ವಕ ಧನ್ಯವಾದಗಳು.ಪ್ರಾರಂಭದಿಂದಲೂ ನನಗೆ ವಿಶ್ವಾಸ ತುಂಬಿ SSLC ಪರೀಕ್ಷೆಗಳು ಯಶಸ್ವಿಯಾಗುವಂತೆ ಮಾಡಿರುವ ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪನವರಿಗೆ ನನ್ನ ಧನ್ಯವಾದಗಳು.'' ಎಂದು ಸುರೇಶ್ ಕುಮಾರ್ ಫೇಸ್‌ಬುಕ್‌ ಮೂಲಕ ಧನ್ಯವಾದ ತಿಳಿಸಿದ್ದಾರೆ.

English summary
SSLC exam karnataka 2020: Chief Minister Yediyurappa tweets about SSLC exam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X