ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಈ ಬಾರಿ ಕೇವಲ 9 ಮಂದಿ ಡಿಬಾರ್

|
Google Oneindia Kannada News

ಬೆಂಗಳೂರು, ಏ.5: ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ ಕೇವಲ 9 ಮಂದಿ ಡಿಬಾರ್ ಆಗಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಏಪ್ರಿಲ್ 4ರಂದು ಹಿಂದಿ ಕೊನೆಯ ಪರೀಕ್ಷೆಯಾಗಿತ್ತು. ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಅತಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳು ಡಿಬಾರ್‌ ಆಗಿದ್ದಾರೆ. 2016-17ರಲ್ಲಿ 13 ಹಾಗೂ 2017-18ರಲ್ಲಿ 69 ಮಂದಿ ಡಿಬಾರ್‌ ಆಗಿದ್ದರು.

ಕರ್ನಾಟಕದ ಲೋಕಸಭಾ ಸದಸ್ಯರಲ್ಲಿ ಯಾರು ಎಷ್ಟು ಓದಿದ್ದಾರೆ?

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಿದ್ದರೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸಾಮೂಹಿಕವಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದವು.

SSLC exam only 9 cheating case

ಕೆಲ ಶಾಲೆಗಳಲ್ಲಿ ಮಕ್ಕಳು ಉತ್ತೀರ್ಣರಾಗುವಷ್ಟು ಅಂಕಗಳಿಗೆ ಉತ್ತರ ಹೇಳಿಕೊಟ್ಟಿರುವುದಲ್ಲದೆ, ನುರಿತ ವಿಷಯ ಶಿಕ್ಷಕರನ್ನು ಕರೆಸಿ ಉತ್ತರ ಹೇಳಿಕೊಟ್ಟಿರುವ ಬಗ್ಗೆಯೂ ವರದಿಗಳು ಪ್ರಕಟವಾಗಿದ್ದವು. ಜೊತೆಗೆ ವಿದ್ಯಾರ್ಥಿಯೊಬ್ಬ ಗಡ್ಡ ಬಿಟ್ಟಿದ್ದ ಕಾರಣ ಪರೀಕ್ಷೆ ಬರೆಯಲು ನಿರಾಕರಿಸಿದ ಘಟನೆಯೂ ಬೆಳಕಿಗೆ ಬಂದಿತ್ತು.

ಏ.10ರಿಂದ ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ, ನಿಷೇಧಾಜ್ಞೆ ಜಾರಿ ಏ.10ರಿಂದ ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ, ನಿಷೇಧಾಜ್ಞೆ ಜಾರಿ

ಕರ್ನಾಟಕ ಸೆಕ್ಯೂರ್‌ ಎಕ್ಸಾಮಿನೇಷನ್‌ ಸಿಸ್ಟಮ್‌ (ಕೆಎಸ್‌ಇಎಸ್‌) ಅನ್ವಯ ಪ್ರಶ್ನೆ ಪತ್ರಿಕೆ ರವಾನೆ ಹಾಗೂ ಪರೀಕ್ಷಾ ಅಕ್ರಮಗಳ ತಡೆಗೆ ಮಂಡಳಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿತ್ತು.

English summary
CCTV cameras and FIR on the first day deter malpractices while the SSLC examinations came to end on Thursday(April 4), KSEEB department declered only 9 cheating cases are registered this year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X