ಏ.10ರಿಂದ ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ, ನಿಷೇಧಾಜ್ಞೆ ಜಾರಿ
ಬೆಂಗಳೂರು, ಏ.5: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏ.4ರಂದು ಮುಕ್ತಾಯವಾಗಿದೆ. ಏ.10ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಪರೀಕ್ಷಾ ಮೌಲ್ಯಮಾಪನ ಕೇಂದ್ರಗಳ 200 ಮೀಟರ್ ವ್ಯಾಪ್ತಿಯ ಪ್ರದೇಶಕ್ಕೆ ಅನ್ವಯಿಸುವಂತೆ ನಿಷೇಧಾಜ್ಞೆ ಹೊರಡಿಸಲಾಗಿದೆ. ಬೆಂಗಳೂರಲ್ಲಿ ಒಟ್ಟು 8 ಕೇಂದ್ರದಲ್ಲಿ ಮೌಲ್ಯಮಾಪನ ನಡೆಯಲಿದೆ.
ಸುಮಾರು 72 ಸಾವಿರ ಮೌಲ್ಯಮಾಪಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಎಷ್ಟು ಸಾಧ್ಯವೊ ಅಷ್ಟು ಬೇಗ ಮೌಲ್ಯಮಾಪನ ಮುಗಿಸಲು ಮಂಡಳಿ ಉದ್ದೇಶಿಸಿದೆ. ಆದರೆ, ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡವರು ಎರಡು ಹಂತಗಳಲ್ಲಿ ತರಬೇತಿಗೆ ಹಾಜರಾಗಬೇಕಾಗುತ್ತದೆ.

ಅಲ್ಲದೆ, ಏ. 18ರಂದು ನಡೆಯಲಿರುವ ಚುನಾವಣೆ ಸಂದರ್ಭದಲ್ಲಿ ಮೂರು ದಿನ ಅವರ ಸೇವೆ ಬಳಕೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಆದರೂ, ನಿಗದಿತ ಅವಧಿಯಲ್ಲೇ ಮೌಲ್ಯಮಾಪನ ಪ್ರಕ್ರಿಯೆ ಮುಗಿಸಿ ಶೀಘ್ರ ಫಲಿತಾಂಶ ಪ್ರಕಟಿಸುವ ನಿಟ್ಟಿನಲ್ಲಿ ಮಂಡಳಿ ಕಾರ್ಯೋನ್ಮುಖವಾಗಲಿದೆ ಎಂದು ಪ್ರೌಢಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.











Click it and Unblock the Notifications