ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಬಿಎಂಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣ

|
Google Oneindia Kannada News

ಬೆಂಗಳೂರು, ಜೂನ್ 15 : ಎಸ್ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳು ಬಿಎಂಟಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಲಾಕ್ ಡೌನ್ ಕಾರಣ ಮುಂದೂಡಲಾಗಿದ್ದ ಪರೀಕ್ಷೆ ಜೂನ್ 25ರಿಂದ ಜುಲೈ 4ರ ತನಕ ನಡೆಯಲಿದೆ.

Recommended Video

Sushanth Singh Rajput's dad collapsed after hearing his son's news | Oneindia Kannada

ಸೋಮವಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಈ ಕುರಿತು ಪ್ರಕಟಣೆ ಹೊರಡಿಸಿದೆ. ಹಾಲ್‌ ಟಿಕೆಟ್ ತೋರಿಸಿ ವಿದ್ಯಾರ್ಥಿಗಳು ಜೂನ್‌ 25ರಿಂದ ಜುಲೈ 4ರ ತನಕ ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಹೇಳಿದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ

5ನೇ ಹಂತದ ಲಾಕ್ ಡೌನ್ ಜಾರಿಯಲ್ಲಿದ್ದರೂ ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್‌ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಬಸ್‌ಗಳು ಸಂಚಾರ ನಡೆಸುತ್ತಿದ್ದು, ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳು ಬಸ್‌ನಲ್ಲಿ ಸಂಚಾರ ನಡೆಸಬಹುದು.

ಕೇಂದ್ರಾಡಳಿತ ಪ್ರದೇಶದಲ್ಲೂ 10ನೇ ತರಗತಿ ಪರೀಕ್ಷೆ ರದ್ದು ಕೇಂದ್ರಾಡಳಿತ ಪ್ರದೇಶದಲ್ಲೂ 10ನೇ ತರಗತಿ ಪರೀಕ್ಷೆ ರದ್ದು

SSLC Students Can Travel In BMTC For Free During Exams

ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದ ತನಕ ಹೋಗುವಾಗ, ವಾಪಸ್ ಬರುವಾಗ ಪರೀಕ್ಷಾ ಪ್ರವೇಶ ಪತ್ರ, ವಿದ್ಯಾರ್ಥಿ ಸ್ಮಾರ್ಟ್‌ ಕಾರ್ಡ್ ತೋರಿಸಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.

ಎಸ್. ಎಸ್. ಎಲ್‌. ಸಿ ಪರೀಕ್ಷೆ ರದ್ದು ಮಾಡಿ; ಸಚಿವರಿಗೆ ಸಿದ್ದರಾಮಯ್ಯ ಪತ್ರಎಸ್. ಎಸ್. ಎಲ್‌. ಸಿ ಪರೀಕ್ಷೆ ರದ್ದು ಮಾಡಿ; ಸಚಿವರಿಗೆ ಸಿದ್ದರಾಮಯ್ಯ ಪತ್ರ

ಲಾಕ್ ಡೌನ್ ಪರಿಣಾಮ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೂಡಲಾಗಿತ್ತು. ಮಾರ್ಚ್‌ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳು ಈಗ ಜೂನ್‌ನಲ್ಲಿ ನಡೆಯುತ್ತಿವೆ. ಬೆಂಗಳೂರು ನಗರದಲ್ಲಿ ಮೆಟ್ರೋ ಸೇವೆಯೂ ಸ್ಥಗಿತಗೊಂಡಿರುವ ಕಾರಣ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ಬಸ್, ಖಾಸಗಿ ವಾಹನ ಅವಲಂಬಿಸುವುದು ಅನಿವಾರ್ಯವಾಗಿದೆ.

English summary
Bangalore Metropolitan Transport Corporation (BMTC) said that students can travel in BMTC bus for free during the SSLC exams. Exam scheduled from June 25 to July 4, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X