ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸ್ಟಾರ್ ಹೋಟೆಲ್ ನಿರ್ಮಾಣ: ಇಲ್ಲಿದೆ ಡೀಟೆಲ್ಸ್!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ಹಾಗೂ ಬೆಂಗಳೂರಿಗೆ ಐದು ಹೊಸ ಪಾಲಿಕೆಗಳು ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿಯೇ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು ಭಾರೀ ಕುತೂಹಲ ಮೂಡಿಸಿದೆ. ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಸ್ಟಾರ್ ಹೋಟೆಲ್ ಮಾದರಿಯಲ್ಲಿ ರೆಸ್ಟೋರೆಂಟ್ ನಿರ್ಮಾಣಕ್ಕೆ ಭರ್ಜರಿ ಸಿದ್ಧತೆ ಶುರುವಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ನೂರಾರು ಜನ ಬಿಬಿಎಂಪಿಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಕೆಲಸ ಮಾಡುತ್ತಾರೆ. ಅಲ್ಲದೇ ನಿತ್ಯವೂ ಒಂದಿಲ್ಲೊಂದು ಕೆಲಸಕ್ಕಾಗಿ ಸಾವಿರಾರು ಜನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಬರುವುದು ಇದೆ. ಅವರಿಗೆ ಒಳ್ಳೆಯ ಊಟ ನೀಡುವುದಕ್ಕೆ ಭರ್ಜರಿ ಸಿದ್ಧತೆ ಶುರುವಾಗಿದೆ. ಬಿಬಿಎಂಪಿ ಕೇಂದ್ರ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು ಹಾಗೂ ಅಲ್ಲಿಗೆ ಬರುವವರಿಗೆ ಶುಚಿ, ರುಚಿ ಹಾಗೂ ಉತ್ತಮ ಬೆಲೆಯಲ್ಲಿ ಊಟ ಸೌಲಭ್ಯವನ್ನು ನೀಡುವ ಉದ್ದೇಶದಿಂದ ಸ್ಟಾರ್ ಮಾದರಿಯ ಹೋಟೆಲ್ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ.

ಈ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬಿಬಿಎಂಪಿಯ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗೆ ಬಿಬಿಎಂಪಿಯ ಮುಖ್ಯ ಆಯುಕ್ತರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ. ಅಮೃತ್‌ರಾಜ್ ಅವರು ತಿಳಿಸಿದ್ದಾರೆ.
ಎಲ್ಲಿ ಹೋಟೆಲ್, ಏನಿದು ಪ್ರಸ್ತಾವನೆ: ಬಿಬಿಎಂಪಿ ಕೇಂದ್ರ ಕಚೇರಿಯ ಒಳಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈಗಾಗಲೇ ಖಾಸಗಿ ಹೋಟೆಲ್‌ಗಳು ಇವೆ. ಆದರೆ ಇದೀಗ ಬಿಬಿಎಂಪಿಯ ವತಿಯಿಂದಲೇ ಹೋಟೆಲ್‌ವೊಂದು ನಿರ್ಮಾಣವಾಗಲಿದೆ. ಪಾಲಿಕೆಯ ಕೇಂದ್ರ ಕಚೇರಿಯ ಆವರಣದಲ್ಲಿ ನೆಲ ಮಹಡಿ ಹಾಗೂ ಮೊದಲನೇ ಮಹಡಿಯಲ್ಲಿ ರೆಸ್ಟೋರೆಂಟ್ ಪ್ರಾರಂಭಿಸುವುದಕ್ಕೆ ಮುಂದಾಗಿದ್ದು. ಇದಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರು ಅನುಮತಿ ನೀಡಿದ್ದಾರೆ.
ಪಾಲಿಕೆಯ ಕೇಂದ್ರ ಕಚೇರಿಯ ಆವರಣದಲ್ಲಿ ಸ್ಟಾರ್ ಹೋಟೆಲ್ ಮಾದರಿಯಲ್ಲೇ ರೆಸ್ಟೋರೆಂಟ್ ನಿರ್ಮಾಣವಾಗಲಿದೆ ಎಂದು ಎ. ಅಮೃತ್ ರಾಜ್ ಅವರು ಮಾಹಿತಿ ನೀಡಿದ್ದಾರೆ. ಎಷ್ಟು ವೆಚ್ಚದಲ್ಲಿ ಹಾಗೂ ಯಾವ ವಿನ್ಯಾಸದಲ್ಲಿ ಈ ಹೋಟೆಲ್ ನಿರ್ಮಾಣವಾಗಲಿದೆ ಎನ್ನುವುದಕ್ಕೆ ಸಂಬಂಧಿಸಿದಂತೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.
ಸಾವಿರಾರು ಜನರಿಗೆ ಅನುಕೂಲ: ಇನ್ನು ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿ ಆವರಣದಲ್ಲಿ ಹೋಟೆಲ್ ನಿರ್ಮಾಣವಾಗುವುದರಿಂದ ಸಾವಿರಾರು ಜನರಿಗೆ ಅನುಕೂಲವಾಗಲಿದೆ. ಅಲ್ಲದೇ ಶುಚಿ ಹಾಗೂ ರುಚಿಯಾದ ಆಹಾರ ಸಿಗಲಿದೆ ಎಂದು ಸಹ ನಿರೀಕ್ಷೆ ಮಾಡಲಾಗಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications