Get Updates
Get notified of breaking news, exclusive insights, and must-see stories!

6ನೇ ವೇತನ ಆಯೋಗ ವರದಿ ಸಲ್ಲಿಕೆ: ಭರ್ಜರಿ ಕೊಡುಗೆ ನಿರೀಕ್ಷೆ

ಬೆಂಗಳೂರು, ಜನವರಿ 31 : ರಾಜ್ಯ ಸರ್ಕಾರದ 5.45 ಲಕ್ಷ ನೌಕರರು ಕುತೂಹಲದಿಂದ ಕಾಯುತ್ತಿರುವ6 ನೇ ವೇತನ ಆಯೋಗದ ವರದಿ ಬುಧವಾರ ಬೆಳಗ್ಗೆ 10.30 ಕ್ಕೆ ಸಲ್ಲಿಕೆಯಾಗಲಿದೆ.
ಎಂ.ಆರ್.ಶ್ರೀನಿವಾಸ್ ಮೂರ್ತಿ ನೇತೃತ್ವದ ಸಮಿತಿ 6 ನೇ ವೇತನ ಆಯೋಗದ ವರದಿ ಮಂಡನೆಯಾಗಲಿದೆ. ಸಮಿತಿ ಬುಧವಾರ ಬೆಳಗ್ಗೆ 10.30 ರವೇಳೆಗೆ 6 ನೇ ವೇತನ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಲಿದೆ.

ವೇತನ ಪರಿಷ್ಕರಣೆಯ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡುವ ಸಾಧ್ಯತೆಗಳಿದ್ದು, ಈ ಮೂಲಕ 6 ಲಕ್ಷ ಸರ್ಕಾರಿ ನೌಕರರ ಮತ್ತು ಅವರ ಕುಟುಂಬದವರ ಮತ ಬ್ಯಾಂಕ್ ಭದ್ರ ಪಡಿಸುವ ತೀರ್ಮಾನ ಮಾಡಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ನಿವೃತ್ತರಾಗಲಿರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದ್ದಯ, ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿರುವ 5 ಲಕ್ಷಕ್ಕೂ ಹೆಚ್ಚು ನೌಕರರ ನಿವೃತ್ತಿ ವಯಸ್ಸನ್ನು ಎರಡು ವರ್ಷ ಹೆಚ್ಚಿಸಲು ಚಿಂತನೆ ನಡೆಸಿದೆ.

ವರದಿಯಲ್ಲಿರುವ ಪ್ರಮುಖ ಅಂಶಗಳು: 6 ನೇ ವೇತನ ಆಯೋಗದ ಸಂಭವನೀಯ ವರದಿಯಲ್ಲಿ ಕೆಸಲ ಸಮಯದಲ್ಲಿ ಬದಲಾವಣೆಯನ್ನು ಮಾಡಬಹುದು. ನೌಕರರಿಗೆ ವಾರಕ್ಕೆ ಎರಡು ರಜೆ, ಕೆಲ ಜಯಂತಿಗಳಿಗೆ ಇರುವ ರಜೆಗಳನ್ನು ರದ್ದು ಮಾಡಲು ಶಿಫಾರಸು ಮಾಡಲಾಗಿದೆ.

state 6th pay commission will submit report Wednesday

ಈ ಬಾರಿ ನೌಕರರ ವೇತನದಲ್ಲಿ ಭಾರಿ ಹೆಚ್ಚಳ ಸಾಧ್ಯತೆ ಇದೆ. ಅಂದರೆ ಕೇಂದ್ರ ಸರ್ಕಾರಿ ನೌಕರರ ಹತ್ತಿರದ ಸಂಬಳಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಬಳ ನಿಗದಿಯಾಗುವ ಸಾಧ್ಯತೆ ಇದ್ದು, ಕನಿಷ್ಠ ಮೂಲ ವೇತನ 16,350 ರೂ ಮತ್ತು ಗರಿಷ್ಠ ಮೂಲ ವೇತನ 1,32,925 ರೂ ನಿಗದಿಯಾಬಹುದು.

ಐಎಎಸ್ ಅಲ್ಲದ ಅಧಿಕಾರಿಗಳಿಗೆ 95,325 ರೂ, ಗ್ರೂಪ್ ಎ ನೌಕರರಿಗೆ 45,625 ರೂ, ಗ್ರೂಪ್ ಬಿ ನೌಕರರಿಗೆ 39,425 ರೂ, ಎಫ್ ಡಿ ಎ ನೌಕರರಿಗೆ 25,125 ರೂ, ಸಿ ಗ್ರೂಪ್ ನೌಕರರಿಗೆ 19,850 ಮತ್ತು ಡಿ ಗ್ರೂಪ್ ನೌಕರರಿಗೆ 16,350 ರೂ ಎಂದು ಮೂಲ ಸಂಬಳ ನಿಗದಿಮಾಡಲಾಗಿದೆ ಎಂದು ತಿಳಿದುಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+