ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಸರ್ಕಾರ ಜೀವಂತವಾಗಿದೆಯೇ? ಸಿದ್ದರಾಮಯ್ಯ ಟೀಕಾ ಪ್ರಹಾರ

|
Google Oneindia Kannada News

ಬೆಂಗಳೂರು, ಜುಲೈ 3: ''ಮಾರ್ಚ್ 24ಕ್ಕೆ ಮುಂಚೆ ವಿಶ್ವದಲ್ಲಿ 4 ಲಕ್ಷದ 25 ಸಾವಿರ ಸಕ್ರಿಯ ಕೊರೊನಾ ಪ್ರಕರಣಗಳಿದ್ದವು, ಸುಮಾರು 19,000 ಮಂದಿ ಸಾವಿಗೀಡಾಗಿದ್ದರು.‌ ಆಗ ಭಾರತದಲ್ಲಿ 536 ಮಂದಿಗೆ ಕೊರೊನಾ ದೃಢಪಟ್ಟಿತ್ತು ಮತ್ತು 10 ಜನ ಕೊರೊನಾದಿಂದ ಸಾವಿಗೀಡಾಗಿದ್ದರು. ಆದರೆ ಈಗ ಭಾರತ ಕೊರೊನಾ ಸೋಂಕಿನಲ್ಲಿ ವಿಶ್ವದಲ್ಲೇ 4ನೇ ಸ್ಥಾನದಲ್ಲಿದೆ'' ಇದಕ್ಕೆ ಯಾರು ಹೊಣೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಇಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದಿದ್ದಾರೆ.

Recommended Video

Modi in Leh,ಚೀನಾ ಕ್ಯಾತೆ ಬಳಿಕ ಗಲ್ವಾನ್ ಕಣಿವೆ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ | Oneindia Kannada

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ''ಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆ ಇದೆ, ಬೆಡ್ ಸಿಗದೆ ರೋಗಿಗಳು ಸಾಯುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜೀವಂತವಾಗಿದೆಯೇ'' ಎಂದು ಪ್ರಶ್ನಿಸಿದ್ದಾರೆ.

ಕೋವಿಡ್ - 19 ನಿರ್ವಹಣೆ: ಸರಕಾರದ ಮುಂದೆ ಸಿದ್ದರಾಮಯ್ಯ ಇಟ್ಟ ಹೊಸ ಡಿಮಾಂಡ್ಕೋವಿಡ್ - 19 ನಿರ್ವಹಣೆ: ಸರಕಾರದ ಮುಂದೆ ಸಿದ್ದರಾಮಯ್ಯ ಇಟ್ಟ ಹೊಸ ಡಿಮಾಂಡ್

''ಮಾರ್ಚ್‌ನಿಂದ ಈ ವರೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಾಕಷ್ಟು ಸಮಯವಿದ್ದಾಗ್ಯೂ ಕೊರೊನಾ ವ್ಯಾಪಕವಾಗಿ ಹರಡಿದೆ. ಇದಕ್ಕೆ ಎರಡೂ ಸರ್ಕಾರಗಳ ನಿರ್ಲಕ್ಷ್ಯ ಮತ್ತು ತಪ್ಪು ನಿರ್ಧಾರಗಳೇ ಕಾರಣ.'' ಎಂದು ಟೀಕಿಸಿದ್ದಾರೆ. ಸಿದ್ದರಾಮಯ್ಯ ಪ್ರಸ್ತಾಪಿಸಿದ ಪ್ರಮುಖ ಅಂಶಗಳ ವಿವರ ಮುಂದೆ ಓದಿ...

ಪರೀಕ್ಷೆಯ ಪ್ರಮಾಣ ಬಹಳ ಕಮ್ಮಿ

ಪರೀಕ್ಷೆಯ ಪ್ರಮಾಣ ಬಹಳ ಕಮ್ಮಿ

''ವಿಶ್ವದ ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೊರೊನಾ ಪರೀಕ್ಷೆಗೆ ಒಳಪಡಿಸುತ್ತಿರುವ ಜನರ ಪ್ರಮಾಣ ತುಂಬಾ ಕಡಿಮೆಯಿದೆ. ಅಮೆರಿಕಾದಲ್ಲಿ ಪ್ರತಿ 10 ಲಕ್ಷ ಮಂದಿಗೆ 1 ಲಕ್ಷ ಜನರನ್ನು, ಇಟಲಿಯಲ್ಲಿ 90 ಸಾವಿರ, ಇಂಗ್ಲೆಂಡ್‌ನಲ್ಲಿ 75 ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಭಾರತದಲ್ಲಿ ಪ್ರತಿ 10 ಲಕ್ಷ ಮಂದಿಗೆ 6,943 ಜನರನ್ನು, ಕರ್ನಾಟಕದಲ್ಲಿ 9,741 ಜನರನ್ನು ಪರೀಕ್ಷೆ ಒಳಪಡಿಸಲಾಗುತ್ತಿದೆ. ಇದರಿಂದ ಸೋಂಕಿತರ ಪತ್ತೆ ವಿಳಂಬವಾಗಿ ಸೋಂಕು ಇನ್ನಷ್ಟು ವ್ಯಾಪಕವಾಗಿ ಹರಡಿದೆ. ಮೋದಿ ಕೊರೊನಾ ನಿಯಂತ್ರಣದಲ್ಲಿ ಭಾರತ ನಂ.1 ಎನ್ನುತ್ತಿದ್ದರು, ಇತರೆ ದೇಶಗಳೊಂದಿಗೆ ಎಲ್ಲಿದೆ ಸಾಮ್ಯತೆ?'' ಎಂದು ಕೇಳಿದ್ದಾರೆ.

ಅಮಾನವೀಯ ಶವ ಸಂಸ್ಕಾರ

ಅಮಾನವೀಯ ಶವ ಸಂಸ್ಕಾರ

''ಮೊನ್ನೆ ಬಳ್ಳಾರಿಯಲ್ಲಿ ಕೊರೊನಾದಿಂದ ಮೃತಪಟ್ಟ ನಾಲ್ವರ ಶವಗಳನ್ನು ಅಮಾನವೀಯವಾಗಿ ಒಂದೇ ಗುಂಡಿಯಲ್ಲಿ ಶವ ಸಂಸ್ಕಾರ ಮಾಡಲಾಯಿತು. ಆರೋಗ್ಯ ಸಚಿವರ ಜಿಲ್ಲೆಯಲ್ಲೇ ಇಷ್ಟು ನಿರ್ಲಕ್ಷ್ಯವಾದರೆ ಹೇಗೆ? ಇಷ್ಟು ದಿನಗಳಾದರೂ ಸರ್ಕಾರ ಶವ ಸಂಸ್ಕಾರಕ್ಕೆ ಕನಿಷ್ಠ ಒಂದು ನಿಯಮ ರೂಪಿಸದೆ ಇರುವುದು ದುರಾದೃಷ್ಟದ ಸಂಗತಿ?'' ಎಂದು ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ.

ಬಾಯಿ ಬಿಟ್ಟರೆ ಬಣ್ಣಗೇಡು: ಮೋದಿ ಭಾಷಣದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯಬಾಯಿ ಬಿಟ್ಟರೆ ಬಣ್ಣಗೇಡು: ಮೋದಿ ಭಾಷಣದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

ಬಿಜೆಪಿ ಸರ್ಕಾರ ಜೀವಂತವಾಗಿದೆಯೇ?

ಬಿಜೆಪಿ ಸರ್ಕಾರ ಜೀವಂತವಾಗಿದೆಯೇ?

''ತುಮಕೂರಿನ ಮಹಿಳೆಯೊಬ್ಬರು ಕೊರೊನಾ ಚಿಕಿತ್ಸೆಗೆ ಹಾಸಿಗೆ ಸಿಗದೆ ನಾಲ್ಕೈದು ಗಂಟೆ ಒದ್ದಾಡಿದ್ದಾರೆ. ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ದುಃಖವಾಯಿತು. ಕೊರೊನಾ ಸೋಂಕು ಕಂಡುಬಂದು 3 ತಿಂಗಳಾಯಿತು, ಇನ್ನೂ ಅಗತ್ಯ ಪ್ರಮಾಣದ ಹಾಸಿಗೆಗಳು ಲಭ್ಯವಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜೀವಂತವಾಗಿದೆಯೇ?'' ಎಂದು ಗುಡುಗಿದ್ದಾರೆ.

ಕನಿಷ್ಠ 30,000 ಹಾಸಿಗೆಗಳು ಲಭ್ಯವಿರಬೇಕಿತ್ತು

ಕನಿಷ್ಠ 30,000 ಹಾಸಿಗೆಗಳು ಲಭ್ಯವಿರಬೇಕಿತ್ತು

''ಸರ್ಕಾರವೇ ನೀಡಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಒಟ್ಟು ಹಾಸಿಗೆಗಳ ಪ್ರಮಾಣ 4,663, ಇದರಲ್ಲಿ 2,694 ಹಾಸಿಗೆಗಳು ಬಳಕೆಯಾಗುತ್ತಿದ್ದು, 1,969 ಹಾಸಿಗೆಗಳು ಲಭ್ಯವಿದೆಯಂತೆ. ನನ್ನ ಪ್ರಕಾರ ಈ ವೇಳೆಗೆ ರಾಜ್ಯದಲ್ಲಿ ಕನಿಷ್ಠ 30,000 ಹಾಸಿಗೆಗಳು ಲಭ್ಯವಿರಬೇಕಿತ್ತು. ನಮ್ಮ ರಾಜ್ಯದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳೇ 6000ಕ್ಕೂ ಹೆಚ್ಚಿದೆ, ಬೆಂಗಳೂರು ನಗರವೊಂದರಲ್ಲೇ ನಿತ್ಯ 900 ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಎಲ್ಲಾ ಕೊರೊನಾ ಚಿಕಿತ್ಸಾ ಕೇಂದ್ರಗಳ ಹಾಸಿಗೆಗಳು ಭರ್ತಿಯಾದರೆ ಉಳಿದವರ ಗತಿಯೇನು?'' ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ 40 ಸಾವಿರ ಸೋಂಕು

ಬೆಂಗಳೂರಿನಲ್ಲಿ 40 ಸಾವಿರ ಸೋಂಕು

''ಮಣಿಪಾಲ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ. ಸುದರ್ಶನ್ ಬಲ್ಲಾಳ್ ಅವರು ಮುಂದಿನ ಒಂದೂವರೆ ತಿಂಗಳಿನಲ್ಲಿ ಬೆಂಗಳೂರು ನಗರವೊಂದರಲ್ಲೇ 40,000 ಜನ ಸೋಂಕಿಗೆ ಒಳಗಾಗಲಿದ್ದಾರೆ ಎಂದಿದ್ದಾರೆ. ಈ ರೀತಿ ಹಿಂದೆಯೂ ಹಲವು ತಜ್ಞರು ಎಚ್ಚರಿಕೆ ನೀಡಿದ್ದರ ಹೊರತಾಗಿಯೂ ಸರ್ಕಾರ ಯಾರ ಮಾತನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ'' ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಪಿಎಂ ಕೇರ್ ಲೆಕ್ಕ ಕೊಡಿ ಸ್ವಾಮಿ

ಪಿಎಂ ಕೇರ್ ಲೆಕ್ಕ ಕೊಡಿ ಸ್ವಾಮಿ

''ಈ ವರೆಗೆ ಪಿಎಂ‌ ಕೇರ್ಸ್‌ಗೆ ಸುಮಾರು ರೂ.60,000 ಕೋಟಿ ಸಂಗ್ರಹವಾಗಿದೆ. ಇದು ಜನರ ದೇಣಿಗೆ, ಈ ಹಣದ ಬಗ್ಗೆ ಸರ್ಕಾರ ಜನರಿಗೆ ಲೆಕ್ಕ ಕೊಡಬೇಕಲ್ಲವೇ? ಕೇಂದ್ರದಿಂದ ರಾಜ್ಯಕ್ಕೆ ಎಷ್ಟು ಹಣ ಬಂದಿದೆ ಎಂದು ರಾಜ್ಯ ಸರ್ಕಾರವೂ ಜನರಿಗೆ ಹೇಳಬೇಕು. ಈ ಕಾರಣಕ್ಕಾಗಿಯೇ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ನಾನು ಒತ್ತಾಯಿಸಿದ್ದು'' ಎಂದು ಆಗ್ರಹಿಸಿದ್ದಾರೆ.

English summary
Why did govt not anticipate the need for increased beds inspite of warning by experts? By now, at least 30,000 beds should have been arranged - Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X