ಮುಂಗಾರು ದುರ್ಬಲ, ಮೋಡ ಬಿತ್ತನೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್
ಬೆಂಗಳೂರು, ಜುಲೈ 06 : ರಾಜ್ಯದಲ್ಲಿ ಈ ವರ್ಷ ಮುಂಗಾರು ದುರ್ಬಲಗೊಂಡ ಹಿನ್ನೆಲೆಯಲ್ಲಿ ಮೋಡ ಬಿತ್ತನೆಗೆ ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ.
ಕಾವೇರಿ, ಮಲಪ್ರಭಾ, ತುಂಗಭದ್ರಾ ಜಲಾನಯನ ವ್ಯಾಪ್ತಿಯಲ್ಲಿ 60 ದಿನಗಳ ಕಾಲ ಮೋಡಬಿತ್ತನೆ ನಡೆಸಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, "ಮೋಡಬಿತ್ತನೆ ಮಾಡಲು ಹೊಯ್ಸಳ ಪ್ರವೈಟ್ ಪ್ರಾಜೆಕ್ಟ್ ಸಂಸ್ಥೆಗೆ 30 ಕೋಟಿ ರು. ಮೊತ್ತಕ್ಕೆ ಗುತ್ತಿಗೆ ನೀಡಲಾಗಿದೆ" ಎಂದು ಹೇಳಿದರು.
ತತಕ್ಷಣದಿಂದಲೇ ಮೋಡ ಬಿತ್ತನೆ ಪ್ರಾರಂಭಿಸಲು ಅಭಿವೃದ್ಧಿ ಆಯುಕ್ತರಿಗೆ ಸೂಚನೆ ನೀಡಲಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇತೃತ್ವದಲ್ಲಿ ಮೋಡಬಿತ್ತನೆ ನಡೆಯಲಿದ್ದು ಸ್ಥಳ ಗುರುತಿಸುವಿಕೆಯೂ ಆಗಲಿದೆ ಎಂದು ತಿಳಿಸಿದರು.












Click it and Unblock the Notifications