ಭೂ ಸ್ವಾಧೀನ ಕಾಯ್ದೆಗೆ ತಿದ್ದುಪಡಿ: ಸಚಿವ ಜಯಚಂದ್ರ
ಕರ್ನಾಟಕದಲ್ಲಿರುವ ಭೂ ಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ. ಕೇಂದ್ರದಲ್ಲಿ ಯುಪಿಎ ಸರ್ಕಾರ ಜಾರಿಗೆ ತಂದ ತಿದ್ದುಪಡಿ ಮಾದರಿಯಲ್ಲೇ ರಾಜ್ಯದಲ್ಲೂ ತಿದ್ದುಪಡಿ. ರಾಜ್ಯ ಕಾನೂನು ಸಚಿವ ಟಿ.ಬಿ. ಜಯಚಂದ್ರ ಹೇಳಿಕೆ.
ಬೆಂಗಳೂರು, ಜೂನ್ 22: ರಾಜ್ಯದಲ್ಲಿ ಈವರೆಗೆ ಅಸ್ತಿತ್ವದಲ್ಲಿದ್ದ ಕೆಐಎಡಿಬಿ ಭೂ ಸ್ವಾಧೀನ ಕಾನೂನಿಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ತಿಳಿಸಿದ್ದಾರೆ.
ಗುರುವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರ್ಷಗಳಿಂದ ಜಾರಿಯಲ್ಲಿದ್ದ ಭೂ ಸ್ವಾಧೀನ ಕಾನೂನಿನಲ್ಲಿ ಈವರೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ.

ಈ ಹಿಂದೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಮನಮೋಹನ್ ಸಿಂಗ್ ಸರ್ಕಾರವು ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಈಗ, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಭೂ ಸ್ವಾಧೀನ ಕಾಯ್ದೆಯನ್ನು ತಿದ್ದುಪಡಿ ತರಲುನಿರ್ಧರಿಸಲಾಗಿದೆ ಎಂದು ಜಯಚಂದ್ರ ತಿಳಿಸಿದರು.












Click it and Unblock the Notifications