ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್ ಲಸಿಕೆ ವಿತರಣೆಗೆ ರಾಜ್ಯದಲ್ಲಿ ಸಿದ್ಧತೆ ಪೂರ್ಣ: ಸುಧಾಕರ್

|
Google Oneindia Kannada News

ಬೆಂಗಳೂರು, ಡಿ 2: ಭಾರತ್ ಬಯೋಟೆಕ್ ಸಹಯೋಗದಲ್ಲಿ ಕೊವ್ಯಾಕ್ಸಿನ್ ಕೋವಿಡ್ ಲಸಿಕೆಯ 3 ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಉಪಸ್ಥಿತರಿದ್ದರು.

ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ರಾಜ್ಯಕ್ಕೆ ಇದು ಹೆಮ್ಮೆಯ ವಿಷಯವಾಗಿದೆ. ದೇಶದ 12 ರಾಜ್ಯಗಳ 25 ಭಾಗಗಳಲ್ಲಿ ಪ್ರಯೋಗ ನಡೆಯುತ್ತಿದ್ದು, ಸುಮಾರು 26 ಸಾವಿರ ಜನರಿಗೆ ಲಸಿಕೆ ನೀಡಲಾಗುತ್ತಿದೆ. ರಾಜ್ಯದಲ್ಲಿ 1,600-1,800 ಜನರಿಗೆ ಲಸಿಕೆಯನ್ನು ಪ್ರಾಯೋಗಿಕವಾಗಿ ನೀಡಲು ನಿರ್ಧರಿಸಲಾಗಿದೆ. ಲಸಿಕೆ ನೀಡುವ ಸಮಯದಲ್ಲಿ ಊಹಾಪೋಹಗಳು ಕೇಳಿಬರುತ್ತವೆ. ಆದರೆ ಇದಕ್ಕೆ ಯಾರೂ ಕಿವಿಗೊಡಬಾರದು ಎಂದರು.

ಕರ್ನಾಟಕ; ಕೋವಿಡ್ ಲಸಿಕೆ ಪರಿಚಯದ ಸಿದ್ಧತೆ ಕರ್ನಾಟಕ; ಕೋವಿಡ್ ಲಸಿಕೆ ಪರಿಚಯದ ಸಿದ್ಧತೆ

ರಾಜ್ಯದಲ್ಲಿ ಕೊವ್ಯಾಕ್ಸಿನ್ ಲಸಿಕೆ ಯಶಸ್ವಿಯಾಗಲಿದ್ದು, ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಭಾರತೀಯ ಕಂಪನಿಗಳೇ ಲಸಿಕೆ ನೀಡುವ ಮಟ್ಟಿಗೆ ಬಂದಿವೆ

ಭಾರತೀಯ ಕಂಪನಿಗಳೇ ಲಸಿಕೆ ನೀಡುವ ಮಟ್ಟಿಗೆ ಬಂದಿವೆ

ಪ್ರಪಂಚದಲ್ಲಿ ಶೇ.15 ರಿಂದ ಶೇ.20 ರಷ್ಟು ಭಾರತೀಯ ಕಂಪನಿಗಳೇ ಲಸಿಕೆ ನೀಡುವ ಮಟ್ಟಿಗೆ ಬೆಳೆದಿದೆ. ಲಸಿಕೆಯಿಂದ ಕೆಲ ಅಡ್ಡ ಪರಿಣಾಮಗಳು ಬರಬಹುದು. ಆದರೆ ಇದನ್ನು ನಮ್ಮ ತಜ್ಞರು ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ಆದ್ದರಿಂದ ಯಾವುದೇ ಆತಂಕ ಇಲ್ಲ ಎಂದು ಸಚಿವ ಸುಧಾಕರ್ ಸ್ಪಷ್ಟಪಡಿಸಿದರು.

ಲಸಿಕೆ ಸಂಶೋಧನೆಗೆ 900 ಕೋಟಿ ರೂ ಮೀಸಲು

ಲಸಿಕೆ ಸಂಶೋಧನೆಗೆ 900 ಕೋಟಿ ರೂ ಮೀಸಲು

ಪ್ರಧಾನಿ ನರೇಂದ್ರ ಮೋದಿಯವರು ಲಸಿಕೆ ಸಂಶೋಧನೆಗೆ 900 ಕೋಟಿ ರೂ. ಮೀಸಲಿಟ್ಟಿದ್ದಾರೆ. ಲಸಿಕೆ ಪ್ರಯೋಗ ನಡೆಯುತ್ತಿರುವ ಸಂಸ್ಥೆಗಳಿಗೆ ಖುದ್ದಾಗಿ ಪ್ರಧಾನಿ ಮೋದಿಯವರೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಕೋವಿಡ್ ಚಿಕಿತ್ಸೆಗಾಗಿ 300 ಕೋಟಿ ರೂ. ಗೂ ಹೆಚ್ಚು ಹಣ ಬಿಡುಗಡೆ ಮಾಡಿ ಉಚಿತ ಚಿಕಿತ್ಸೆ ನೀಡಿದೆ. ದಿನಕ್ಕೆ 1.25 ಲಕ್ಷ ಪರೀಕ್ಷೆ ಮಾಡುತ್ತಿದ್ದು, ಈವರೆಗೆ 1.20 ಕೋಟಿ ಉಚಿತ ಪರೀಕ್ಷೆ ಮಾಡಲಾಗಿದೆ ಎಂದು ಸಚಿವ ಸುಧಾಕರ್ ವಿವರಿಸಿದರು.

ರಾಜ್ಯದಲ್ಲಿ ಲಸಿಕೆ ವಿತರಣೆಗೆ ಸಿದ್ಧತೆ ಪೂರ್ಣಗೊಂಡಿದೆ

ರಾಜ್ಯದಲ್ಲಿ ಲಸಿಕೆ ವಿತರಣೆಗೆ ಸಿದ್ಧತೆ ಪೂರ್ಣಗೊಂಡಿದೆ

ರಾಜ್ಯದಲ್ಲಿ ಲಸಿಕೆ ವಿತರಣೆಗೆ ಸಿದ್ಧತೆ ಪೂರ್ಣಗೊಂಡಿದೆ. 29,451 ಲಸಿಕೆ ವಿತರಣೆ ಕೇಂದ್ರ ಹಾಗೂ 10,008 ಸಿಬ್ಬಂದಿಯನ್ನು ಗುರುತಿಸಲಾಗಿದೆ. ಲಸಿಕೆ ಸಂಗ್ರಹ ಹಾಗೂ ವಿತರಣೆಗೆ 2,855 ಕೋಲ್ಡ್ ಚೇನ್ ಕೇಂದ್ರಗಳು ಲಭ್ಯವಿದೆ. ಹೊಸದಾಗಿ ಬೆಂಗಳೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ಕೊವಿಡ್ 19 ವಾರಿಯರ್ಸ್ ಗಳಿಗೆ ಮೊದಲಿಗೆ ಲಸಿಕೆ

ಕೊವಿಡ್ 19 ವಾರಿಯರ್ಸ್ ಗಳಿಗೆ ಮೊದಲಿಗೆ ಲಸಿಕೆ

ಕೊವಿಡ್ 19 ಲಸಿಕೆ ದೊರೆತ ಬಳಿಕ ಮೊದಲಿಗೆ ಕೊವಿಡ್ 19 ವಾರಿಯರ್ಸ್ ಗಳಿಗೆ ನೀಡಲಾಗುವುದು. ಕೊರೊನಾ ನಿಯಂತ್ರಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಮೊದಲಿಗೆ ಲಸಿಕೆ ನೀಡಲಾಗುವುದು. ನಂತರ 50 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

English summary
Karnataka is fully prepared for the distribution of Covid-19 vaccine, said Health & Medical Education Minister Dr.K.Sudhakar. After launch of 3rd phase clinical trials of Bharat Biotech's Covaxin in Vydehi Institute of Medical Science and Research Centre.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X