ಕಬ್ಬನ್ ಉದ್ಯಾನ ವ್ಯಾಪ್ತಿಯಲ್ಲಿ ನಿಯಮಬಾಹಿರ ಕಟ್ಟಡ ನಿರ್ಮಾಣ: ನೋಟಿಸ್
ಬೆಂಗಳೂರು,ಜನವರಿ 22: ಕಬ್ಬನ್ ಉದ್ಯಾನದ ವ್ಯಾಪ್ತಿಯೊಳಗೆ ನಿಯಮ ಬಾಹಿರವಾಗಿ ಕಟ್ಟಡ ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದು, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನೋಟಿಸ್ ನೀಡಿದೆ.
ಕಬ್ಬನ್ ಪಾರ್ಕ್ನಲ್ಲಿ ನಿಯಮಬಾಹಿರ ನಿರ್ಮಾಣ ಚಟುವಟಿಕೆಗಳು ನಡೆಯುತ್ತಿದೆ ಎಂಬ ಆರೋಪದಡಿ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದಿಂದ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಇದೀಗ, ಈ ಕುರಿತು ಸರ್ಕಾರ ಮತ್ತು ತೋಟಗಾರಿಕೆ ಇಲಾಖೆಗೆ ಹೈಕೋರ್ಟ್ ನೋಟಿಸ್ ಕಳುಹಿಸಿದೆ.
'2001ರ ಆಗಸ್ಟ್ 13ರಂದು ಹೈಕೋರ್ಟ್ ಹೊರಡಿಸಿರುವ ಆದೇಶದ ಪ್ರಕಾರ, ಯಾವುದೇ ನಿರ್ಮಾಣ ಕಾರ್ಯಕ್ಕೂ ನ್ಯಾಯಾಲಯದ ಅನುಮತಿ ಪಡೆಯಬೇಕು. ಆದರೆ, ಅನುಮತಿ ಇಲ್ಲದೆ ಕಾಮಗಾರಿ ನಡೆಸಲಾಗುತ್ತಿದೆ. ಅಲ್ಲದೇ ಇದು ಕರ್ನಾಟಕ ಉದ್ಯಾನಗಳ ಸಂರಕ್ಷಣೆ ಕಾಯ್ದೆಯ ಉಲ್ಲಂಘನೆ' ಎಂದು ದೂರಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ, ತೋಟಗಾರಿಕೆ ಇಲಾಖೆಗೆ ಹೈಕೋರ್ಟ್ ನೋಟಿಸ್ ನೀಡಿದೆ.

ಹೈಕೋರ್ಟ್ ಅನುಮತಿ ಪಡೆಯದೇ ನಿರ್ಮಾಣ ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ ಎಂದು ಸಂಘ ತನ್ನ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಉಲ್ಲೇಖಿಸಿದೆ. ಹಾಗಾಗಿ, ಅಕ್ರಮ ನಿರ್ಮಾಣಗಳಿಗೆ ತಡೆಯಾಜ್ಞೆ ನೀಡಲು ಸಂಘ ಮನವಿಮಾಡಿದೆ.
ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ, ಜಲ ಮಂಡಳಿ, ಸೆಂಚುರಿ ಕ್ಲಬ್, ಕರ್ನಾಟಕ ರಾಜ್ಯ ಲಾನ್ ಟೆನಿಸ್ ಅಸೋಸಿಯೇಷನ್, ಸಚಿವಾಲಯ ಕ್ಲಬ್, ದಿ ಪ್ರೆಸ್ ಕ್ಲಬ್ ಮತ್ತು ಯಂಗ್ ಮೆನ್ಸ್ ಕ್ರಿಶ್ಚಿಯನ್ ಅಸೋಸಿಯೇಷನ್ನಿಂದ ಅಕ್ರಮವಾಗಿ ನಿರ್ಮಾಣ ಕಾಮಗಾರಿ ನಿರ್ವಹಿಸಲಾಗುತ್ತಿದೆ ಎಂದು ಆರೋಪಿಸಿ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ಅರ್ಜಿ ಸಲ್ಲಿಸಿದೆ. ಈ ಸಂಬಂಧ ಲೋಕಾಯುಕ್ತಕ್ಕೂ ಹಲವು ಬಾರಿ ದೂರು ಸಲ್ಲಿಸಲಾಗಿದೆ. ನಂತರವೂ ನಿರ್ಮಾಣ ಕಾಮಗಾರಿ ಮುಂದುವರಿದಿದೆ ಎಂದು ಆರೋಪಿಸಲಾಗಿದೆ.
Recommended Video
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications