ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಬ್ಬನ್ ಉದ್ಯಾನ ವ್ಯಾಪ್ತಿಯಲ್ಲಿ ನಿಯಮಬಾಹಿರ ಕಟ್ಟಡ ನಿರ್ಮಾಣ: ನೋಟಿಸ್

|
Google Oneindia Kannada News

ಬೆಂಗಳೂರು,ಜನವರಿ 22: ಕಬ್ಬನ್ ಉದ್ಯಾನದ ವ್ಯಾಪ್ತಿಯೊಳಗೆ ನಿಯಮ ಬಾಹಿರವಾಗಿ ಕಟ್ಟಡ ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದು, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನೋಟಿಸ್ ನೀಡಿದೆ.

ಕಬ್ಬನ್ ​ಪಾರ್ಕ್​​ನಲ್ಲಿ ನಿಯಮಬಾಹಿರ ನಿರ್ಮಾಣ ಚಟುವಟಿಕೆಗಳು ನಡೆಯುತ್ತಿದೆ ಎಂಬ ಆರೋಪದಡಿ ಕಬ್ಬನ್ ​ಪಾರ್ಕ್​​ ನಡಿಗೆದಾರರ ಸಂಘದಿಂದ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಇದೀಗ, ಈ ಕುರಿತು ಸರ್ಕಾರ ಮತ್ತು ತೋಟಗಾರಿಕೆ ಇಲಾಖೆಗೆ ಹೈಕೋರ್ಟ್ ನೋಟಿಸ್ ಕಳುಹಿಸಿದೆ.

ಕಬ್ಬನ್‌ಪಾರ್ಕ್‌ನಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಆರಂಭ ಕಬ್ಬನ್‌ಪಾರ್ಕ್‌ನಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಆರಂಭ

'2001ರ ಆಗಸ್ಟ್ 13ರಂದು ಹೈಕೋರ್ಟ್ ಹೊರಡಿಸಿರುವ ಆದೇಶದ ಪ್ರಕಾರ, ಯಾವುದೇ ನಿರ್ಮಾಣ ಕಾರ್ಯಕ್ಕೂ ನ್ಯಾಯಾಲಯದ ಅನುಮತಿ ಪಡೆಯಬೇಕು. ಆದರೆ, ಅನುಮತಿ ಇಲ್ಲದೆ ಕಾಮಗಾರಿ ನಡೆಸಲಾಗುತ್ತಿದೆ. ಅಲ್ಲದೇ ಇದು ಕರ್ನಾಟಕ ಉದ್ಯಾನಗಳ ಸಂರಕ್ಷಣೆ ಕಾಯ್ದೆಯ ಉಲ್ಲಂಘನೆ' ಎಂದು ದೂರಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ, ತೋಟಗಾರಿಕೆ ಇಲಾಖೆಗೆ ಹೈಕೋರ್ಟ್ ನೋಟಿಸ್ ನೀಡಿದೆ.

State Gets Notice Over Illegal Buildings In Cubbon Park

ಹೈಕೋರ್ಟ್ ಅನುಮತಿ ಪಡೆಯದೇ ನಿರ್ಮಾಣ ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ ಎಂದು ಸಂಘ ತನ್ನ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಉಲ್ಲೇಖಿಸಿದೆ. ಹಾಗಾಗಿ, ಅಕ್ರಮ ನಿರ್ಮಾಣಗಳಿಗೆ ತಡೆಯಾಜ್ಞೆ ನೀಡಲು ಸಂಘ ಮನವಿಮಾಡಿದೆ.

Recommended Video

ಸಿದ್ದು ನರಿ ಬುದ್ದಿ ನೋಡಿ ರಾಹುಲ್ ಶಾಕ್!! | Oneindia Kannada

ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ, ಜಲ ಮಂಡಳಿ, ಸೆಂಚುರಿ ಕ್ಲಬ್, ಕರ್ನಾಟಕ ರಾಜ್ಯ ಲಾನ್ ಟೆನಿಸ್ ಅಸೋಸಿಯೇಷನ್, ಸಚಿವಾಲಯ ಕ್ಲಬ್, ದಿ ಪ್ರೆಸ್ ಕ್ಲಬ್ ಮತ್ತು ಯಂಗ್ ಮೆನ್ಸ್ ಕ್ರಿಶ್ಚಿಯನ್ ಅಸೋಸಿಯೇಷನ್‌ನಿಂದ ಅಕ್ರಮವಾಗಿ ನಿರ್ಮಾಣ ಕಾಮಗಾರಿ ನಿರ್ವಹಿಸಲಾಗುತ್ತಿದೆ ಎಂದು ಆರೋಪಿಸಿ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ಅರ್ಜಿ ಸಲ್ಲಿಸಿದೆ. ಈ ಸಂಬಂಧ ಲೋಕಾಯುಕ್ತಕ್ಕೂ ಹಲವು ಬಾರಿ ದೂರು ಸಲ್ಲಿಸಲಾಗಿದೆ. ನಂತರವೂ ನಿರ್ಮಾಣ ಕಾಮಗಾರಿ ಮುಂದುವರಿದಿದೆ ಎಂದು ಆರೋಪಿಸಲಾಗಿದೆ.

English summary
The Karnataka High Court on Thursday issued notice to the state government, civic agencies and private organisations on a PIL against alleged unauthorised constructions by those organisations, who have occupied leased land in the Cubbon Park premises.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X