2015-16 ರ ವಿಶೇಷ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಿಕ್ಷಕರು

ಬೆಂಗಳೂರು, ಸೆಪ್ಟೆಂಬರ್, 05 : ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ 2015-16 ನೇ ಸಾಲಿನ ವಿಶೇಷ ಶಿಕ್ಷಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ರಾಜ್ಯದ ಹಲವಾರು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಈ ವಿಶೇಷ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶೈಕ್ಷಣಿಕ, ವೈಜ್ಞಾನಿಕ ಕ್ಷೇತ್ರದಲ್ಲಿ ಶಿಕ್ಷಕರು ಮಾಡಿದ ಸಾಧನೆಯನ್ನು ಗಣನೆಗೆ ತೆಗೆದುಕೊಂಡು ಈ ಪ್ರಶಸ್ತಿ ಪಟ್ಟಿ ನೀಡಲಾಗಿದ್ದು, ಜೊತೆಗೆ ಈ ಅವಧಿಯಲ್ಲಿ ರಾಜೀವ್ ಗಾಂಧಿ ಸ್ಮಾರಕ್ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಘೋಷಿಸಲಾಗಿದೆ.[ಅಮೆರಿಕಾ ಪ್ರಶಸ್ತಿ ಪಡೆದ ಬೆಂಗಳೂರು ಮೂಲದ ಶಿಕ್ಷಕಿ]

State Government announce Special Teachers Award 2015-16

ಪ್ರಶಸ್ತಿ ವಿಜೇತ ಪ್ರಾಥಮಿಕ ಶಾಲಾ ಶಿಕ್ಷಕರು :

ಪ್ರಾಥಮಿಕ ಶಾಲಾ ವಿಭಾಗದಲ್ಲಿ ರಾಜೀವ್ ಗಾಂಧಿ ಸ್ಮಾರಕ್ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗಾಗಿ ಹಾಸನ ಜಿಲ್ಲೆಯ ಸೋಮಶೇಖರ್ ಟಿ.ಎಂ, ವೈಜ್ಞಾನಿಕ ಕ್ಷೇತ್ರದಲ್ಲಿ ತುಮಕೂರು ಜಿಲ್ಲೆಯ ಕಮಲಮ್ಮ ಎನ್, ಕೊಡಗು ಜಿಲ್ಲೆಯ ಭಾಗ್ಯವತಿ ಟಿ.ವಿ, ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶೋಭಾ ವ್ಹಿ ಪಾಲನ್ಕರ್ ಹಾಗೂ ಬೆಳಗಾವಿ ಜಿಲ್ಲೆಯ ಯಲ್ಲಪ್ಪ ಬಸಪ್ಪ ಕಡಕೋಳ ಅವರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ವಿಜೇತ ಪ್ರೌಢಶಾಲಾ ಶಿಕ್ಷಕರು :

ರಾಜೀವ್ ಗಾಂಧಿ ಸ್ಮಾರಕ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಉತ್ತರ ಕನ್ನಡ ಜಿಲ್ಲೆಯ ಕೃಷ್ಣಮೂರ್ತಿ ಎಲ್, ಭಟ್ಟ, ವೈಜ್ಞಾನಿಕ ಕ್ಷೇತ್ರದಲ್ಲಿ ರಾಯಚೂರು ಜಿಲ್ಲೆಯ ಗಡಿಶೆಟ್ಟಪ್ಪ ಸುಂಕದ ಹಾಗೂ ಶಿವಮೊಗ್ಗ ಜಿಲ್ಲೆಯ ಬಿ.ಎಂ ರಘು, ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತರ ಕನ್ನಡ ಜಿಲ್ಲೆಯ ನಾಗಪತಿ ವೆಂಕಟ್ರಮಣ ಹೆಗಡೆ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ಬಿ.ಹೆಚ್ ಜಕ್ಲಿ ಅವರು ಪಡೆದಿದ್ದಾರೆ ಎಂದು ರಾಷ್ಟ್ರೀಯ ಶಿಕ್ಷಕರ ಪ್ರತಿಷ್ಠಾನದ ಸಹ ನಿರ್ದೇಶಕರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+