• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ

|

ಬೆಂಗಳೂರು, ಫೆ. 14: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ "ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಾಳೆ (ಫೆ.15) ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ್ ಅವರು ಸಮಾರಂಭ ಉದ್ಘಾಟಿಸಲಿದ್ದಾರೆ. ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್ ಹಾಗೂ ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ಅವರು ಭಾಗವಹಿಸಲಿದ್ದಾರೆ.

   ಸುರತ್ಕಲ್ ಟೋಲ್ ಗೇಟ್ ನಲ್ಲಿ ಟೋಲ್ ಸಂಗ್ರಹಕ್ಕೆ ಅಸಮಾಧಾನ | Oneindia Kannada

   ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ. ಪ್ರಸಾದ್, ಚಿಕ್ಕಬಳ್ಳಾಪುರ ಸಂಸದ ಬಿ.ಎನ್. ಬಚ್ಚೇಗೌಡ, ದೇವನಹಳ್ಳಿ ಶಾಸಕ ನಾರಾಯಣಸ್ವಾಮಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ. ವೆಂಕಟರಮಣಯ್ಯ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಕೆ. ಶ್ರೀನಿವಾಸಮೂರ್ತಿ, ಹೊಸಕೋಟೆ ‌ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ಅವರು ಭಾಗವಹಿಸಲಿದ್ದಾರೆ.

   English summary
   The inaugural ceremony of the State Government Employees' Sports and Cultural Competition Program at the Beangaluru Rural District will be held on February 15, 2021 at 10 am at Kanthirawa Stadium, Bengaluru. Know more.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X