ಸಂತ್ರಸ್ಥರಿಗೆ 1 ರೂಪಾಯಿಯೂ ಸಿಕ್ಕಿಲ್ಲ: ಡಿಕೆ ಶಿವಕುಮಾರ್ ಅಸಮಾಧಾನ

ಬೆಂಗಳೂರು, ಜೂನ್ 9: ಕೊರೊನಾ ಲಾಕ್‌ಡೌನ್ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ.

ಲಾಕ್‌ ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ಥರಿಗೆ ಇಲ್ಲಿಯವರೆಗೂ ಒಂದು ರೂಪಾಯಿ ಸಹ ಸಿಕ್ಕಿಲ್ಲ ಎಂದು ಡಿಕೆ ಶಿವಕುಮಾರ್ ಆರೋಪ ಮಾಡಿದ್ದಾರೆ. ಪರಿಹಾರ ವಿತರಣೆಯ ಮಾನದಂಡವನ್ನು ಸರಳೀಕರಣಗೊಳಿಸಿ, ಸರ್ಕಾರವೇ ನೇರವಾಗಿ ಅವರ ಕೈಗೆ ಚೆಕ್ ವಿತರಣೆ ಮಾಡಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

ರೈತರಿಗೆ, ಕಾರ್ಮಿಕರಿಗೆ, ಅಸಂಘಟಿತ ಕಾರ್ಮಿಕ ಯಾರಿಗೂ ಹಣ ಸಿಕ್ಕಿಲ್ಲ. ಯಾರೂ ಅರ್ಜಿ ಹಾಕಿ ಹೋಗಿದ್ದಾರೆ ಅವರಿಗೆ ಸಹಾಯ ಮಾಡಬೇಕು. ಇಲ್ಲದಿದ್ದರೆ,

State Government Failed To Handle Lockdown Period Says DK Shivakumar

ಸಂತ್ರಸ್ತರ ಪರವಾಗಿ ನಾವು ಧ್ವನಿ ಎತ್ತಿ ಹೋರಾಟ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ ಟ್ವಿಟ್ಟರ್ ಖಾತೆಯಲ್ಲಿ ಡಿಕೆ ಶಿವಕುಮಾರ್ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಈಗಾಗಲೇ ಹಲವು ವಲಯಗಳಿಗೆ ಪರಿಹಾರ ಘೋಷಣೆ ಮಾಡಿದ್ದು, ಆ ಹಣ ಇನ್ನೂ ಸಂತ್ರಸ್ಥರಿಗೆ ಸೇರಿಲ್ಲ ಎಂದು ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+