• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಐಎಂಎ ಹಗರಣ ಸಿಬಿಐಗೆ: ರಾಜ್ಯ ಸರ್ಕಾರ ಮಾಹಿತಿ

|

ಬೆಂಗಳೂರು, ಆಗಸ್ಟ್ 20: ಐಎಂಎ ಹಗರಣವನ್ನು ಸಿಬಿಐಗೆ ವಹಿಸಿರುವುದಾಗಿ ರಾಜ್ಯ ಸರ್ಕಾರವು ಇಂದು ಹೈಕೋರ್ಟ್ ಗೆ ಹೇಳಿದೆ.

ಐಎಂಎ ಹಗರಣ ಬಗ್ಗೆ ಗ್ರಾಹಕರು ಕೆಲವರು ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ರಾಜ್ಯ ಸರ್ಕಾರವನ್ನು ಮಾಹಿತಿ ಕೇಳಿತ್ತು. ಅದರಂತೆ ಮಾಹಿತಿ ನೀಡಿದ ಸರ್ಕಾರವು ಪ್ರಕರಣದ ಹೆಚ್ಚಿನ ತನಿಖೆಗೆ ಸಿಬಿಐಗೆ ವಹಿಸಿರುವುದಾಗಿ ಮಾಹಿತಿ ನೀಡಿದೆ.

ಬಹುಕೋಟಿ ರೂಪಾಯಿ ಐಎಂಎ ಹಗರಣದ ತನಿಖೆ ಸಿಬಿಐಗೆ?

ಈಗಾಗಲೇ ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸ್‌ನ ವಿಶೇಷ ತನಿಖಾ ದಳ (ಎಸ್‌ಐಟಿ) ನಿರ್ವಹಿಸುತ್ತಿದ್ದು, ತನಿಖೆಯಲ್ಲಿ ಸಾಕಷ್ಟು ಪ್ರಗತಿಯನ್ನು ಸಾಧಿಸಿತ್ತು. ಆದರೆ ಇದೀಗ ಏಕಾ-ಏಕಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ.

ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಸಿಬಿಐಗೆ ವಹಿಸುತ್ತಿರುವ ಎರಡನೇ ಪ್ರಕರಣ ಇದಾಗಿದೆ. ಕುಮಾರಸ್ವಾಮಿ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಫೋನ್ ಟ್ಯಾಪಿಂಗ್ ಪ್ರಕರಣದ ತನಿಖೆಯನ್ನು ಸರ್ಕಾರವು ನಿನ್ನೆಯಷ್ಟೆ ಸಿಬಿಐಗೆ ವಹಿಸಿ ಆದೇಶ ಹೊರಡಿಸಿದೆ.

ಐಎಂಎ ಹಗರಣದ ತನಿಖೆ ಎಸ್‌ಎಫ್‌ಒ ಹೆಗಲಿಗೆ?

ಐಎಂಎ ಹಗರಣವು ಬಹುಕೋಟಿ ಹಗರಣವಾಗಿದ್ದು, ಕೆಲವು ಕಾಂಗ್ರೆಸ್ ಮುಖಂಡರು ಪ್ರಕರಣದಲ್ಲಿ ನೇರವಾಗಿ ಹಾಗೂ ಪರೋಕ್ಷವಾಗಿ ಶಾಮೀಲಾಗಿರುವ ಅನುಮಾನ ಇದೆ. ಕೆಲವು ಪ್ರಭಾವಿ ಕಾಂಗ್ರೆಸ್ ಶಾಸಕರನ್ನು ಈಗಾಗಲೇ ಎಸ್‌ಐಟಿ ವಿಚಾರಣೆ ಸಹ ಮಾಡಿದೆ. ಕೆಲವು ಐಎಎಸ್ ಅಧಿಕಾರಿಗಳು, ಐಪಿಎಸ್ ಅಧಿಕಾರಿಗಳೂ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ.

English summary
State government today told high court that IMA scam case is handed over to CBI.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X