ಎಸ್‌ಡಿಪಿಐ ಸಂಘಟನೆ ನಿಷೇಧಕ್ಕೆ ಕೇಂದ್ರಕ್ಕೆ ಶಿಫಾರಸು: ಆರ್.ಅಶೋಕ್

Recommended Video

      R Ashok gave warning to BJP rebel candidate Sharat BacheGowda | Oneindia Kannada

      ಬೆಂಗಳೂರು, ನವೆಂಬರ್ 20: ಎಸ್‌ಡಿಪಿಐ ಸಂಘಟನೆಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

      ಈ ಸಂಬಂಧ ಕೇಂದ್ರ ಗೃಹ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗುವುದು, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದ್ದು, ಈ ಸಂಘಟನೆ ನಿಷೇಧ ಮಾಡಬೇಕೆಂಬ ಉದ್ದೇಶವಿದೆ ಮೊದಲಿನಿಂದಲೂ ಇದೆ ಎಂದು ಅಶೋಕ್ ಹೇಳಿದರು.

      ಶಾಸಕ ತನ್ವೀರ್ ಸೇಠ್‌ ಮೇಲೆ ನಡೆದ ಹತ್ಯೆ ಪ್ರಯತ್ನದಲ್ಲಿ ಎಸ್‌ಡಿಪಿಐ ಪಾತ್ರವಿದೆಯೆಂದು ತಿಳಿದು ಬಂದಿದ್ದು, ಸಿದ್ದರಾಮಯ್ಯ ಅವರು ಈ ಸಂಘಟನೆ ಮೇಲಿನ ಪ್ರಕರಣವನ್ನು ಹಿಂಪಡೆದಿದ್ದರು. ಈಗ ಅದಕ್ಕೆ ಬೆಲೆ ತೆರಬೇಕಾಗಿದೆ ಎಂದು ಅಶೋಕ್ ಹೇಳಿದರು.

      State Government Recommend To Ban SDPI Organization: R Ashok

      ಇದೇ ದಿನ ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ತನ್ವೀರ್ ಸೇಠ್ ಹತ್ಯೆ ಯತ್ನದಲ್ಲಿ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳ ಪಾತ್ರವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

      ತನ್ವೀರ್ ಸೇಠ್ ಮೇಲೆ ಹಲ್ಲೆ ಮಾಡಿದ ಫರ್ಹಾನ್ ಪಾಷಾ ಎಸ್‌ಡಿಪಿಐ ಸಂಘಟನೆಯೊಂದಿಗೆ ಬಹುಕಾಲದಿಂದ ನಂಟು ಹೊಂದಿದ್ದ ಎಂಬುದು ಪೊಲೀಸ್ ತನಿಖೆಯಲ್ಲಿ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+