ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಸ್‌ಡಿಪಿಐ ಸಂಘಟನೆ ನಿಷೇಧಕ್ಕೆ ಕೇಂದ್ರಕ್ಕೆ ಶಿಫಾರಸು: ಆರ್.ಅಶೋಕ್

|
Google Oneindia Kannada News

Recommended Video

R Ashok gave warning to BJP rebel candidate Sharat BacheGowda | Oneindia Kannada

ಬೆಂಗಳೂರು, ನವೆಂಬರ್ 20: ಎಸ್‌ಡಿಪಿಐ ಸಂಘಟನೆಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಈ ಸಂಬಂಧ ಕೇಂದ್ರ ಗೃಹ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗುವುದು, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದ್ದು, ಈ ಸಂಘಟನೆ ನಿಷೇಧ ಮಾಡಬೇಕೆಂಬ ಉದ್ದೇಶವಿದೆ ಮೊದಲಿನಿಂದಲೂ ಇದೆ ಎಂದು ಅಶೋಕ್ ಹೇಳಿದರು.

ತನ್ವೀರ್ ಸೇಠ್ ಹತ್ಯೆ ಯತ್ನ: RSS ರಾಜು ಕೊಲೆ ಆರೋಪಿಗಳ ವಿಚಾರಣೆತನ್ವೀರ್ ಸೇಠ್ ಹತ್ಯೆ ಯತ್ನ: RSS ರಾಜು ಕೊಲೆ ಆರೋಪಿಗಳ ವಿಚಾರಣೆ

ಶಾಸಕ ತನ್ವೀರ್ ಸೇಠ್‌ ಮೇಲೆ ನಡೆದ ಹತ್ಯೆ ಪ್ರಯತ್ನದಲ್ಲಿ ಎಸ್‌ಡಿಪಿಐ ಪಾತ್ರವಿದೆಯೆಂದು ತಿಳಿದು ಬಂದಿದ್ದು, ಸಿದ್ದರಾಮಯ್ಯ ಅವರು ಈ ಸಂಘಟನೆ ಮೇಲಿನ ಪ್ರಕರಣವನ್ನು ಹಿಂಪಡೆದಿದ್ದರು. ಈಗ ಅದಕ್ಕೆ ಬೆಲೆ ತೆರಬೇಕಾಗಿದೆ ಎಂದು ಅಶೋಕ್ ಹೇಳಿದರು.

State Government Recommend To Ban SDPI Organization: R Ashok

ಇದೇ ದಿನ ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ತನ್ವೀರ್ ಸೇಠ್ ಹತ್ಯೆ ಯತ್ನದಲ್ಲಿ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳ ಪಾತ್ರವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಾಜಿ ಸಚಿವ ತನ್ವೀರ್ ಸೇಠ್ ಹತ್ಯೆ ಯತ್ನ, 5 ಮಂದಿ ವಶಕ್ಕೆಮಾಜಿ ಸಚಿವ ತನ್ವೀರ್ ಸೇಠ್ ಹತ್ಯೆ ಯತ್ನ, 5 ಮಂದಿ ವಶಕ್ಕೆ

ತನ್ವೀರ್ ಸೇಠ್ ಮೇಲೆ ಹಲ್ಲೆ ಮಾಡಿದ ಫರ್ಹಾನ್ ಪಾಷಾ ಎಸ್‌ಡಿಪಿಐ ಸಂಘಟನೆಯೊಂದಿಗೆ ಬಹುಕಾಲದಿಂದ ನಂಟು ಹೊಂದಿದ್ದ ಎಂಬುದು ಪೊಲೀಸ್ ತನಿಖೆಯಲ್ಲಿ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

English summary
Minister R Ashok said state government will recommend to ban SDPI organization soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X