RCB: ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದು

RCB: ಐಪಿಎಲ್‌ 2025 ಫೈನಲ್ ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದು ಆರ್‌ಸಿಬಿ 17 ವರ್ಷಗಳ ಬಳಿಕ ಮೊದಲ ಬಾರಿ ಟ್ರೋಫಿ ತನ್ನದಾಗಿಸಿಕೊಂಡಿತು. ಅಂದು ಇಡೀ ದೇಶವೇ ಬೆಂಗಳೂರು ತಂಡದ ಗೆಲುವನ್ನ ಸಂಭ್ರಮಿಸಿತು. ಆದರೆ, ಮಾರನೇ ದಿನ ಜೂನ್‌ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವ ಕಾರ್ಯಕ್ರಮ ಇಟ್ಟುಕೊಳ್ಳಲಾಗಿದ್ದು, ಈ ವೇಳೆ ಚಿನ್ನಸ್ವಾಮಿ ಬಳಿ ಕಾಲ್ತಳಿತ ಸಂಭವಿಸಿ 11 ಜನ ಪ್ರಾಣ ಕಳೆದುಕೊಂಡಿದ್ದರು.

ದುರಂತದ ಬಳಿಕ ತುಂಬಾ ಘಟನೆಗಳು ಆದ್ವು. ಅದರಲ್ಲೂ ಪ್ರಕರಣ ಸಂಬಂಧ ರಾಜ್ಯದ ಸರ್ಕಾರ ಆರ್‌ಸಿಬಿ, ಕೆಎಸ್‌ಸಿಎ ವಿರುದ್ಧ ದೂರು ದಾಖಲಿಸಿತ್ತು. ಅಲ್ಲದೆ, ಹಲವು ಪೊಲೀಸ್‌ ಅಧಿಕಾರಿಗಳನ್ನು ಸಹ ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ ನಾಲ್ವರ ಅಮಾನತು ರದ್ದುಪಡಿಸಿ ಸೇವೆಗೆ ಮರು ಹಾಜರಾಗಲು ಆದೇಶ ಹೊರಡಿಸಿದೆ. ಹಾಗಾದ್ರೆ ಯಾರಿಗೆಲ್ಲಾ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

State Government Revokes Suspension Orders of B Dayananda and Three Other police Officers

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 17 ವರ್ಷಗಳ ಬಳಿಕ ಮೊಟ್ಟ ಮೊದಲ ಬಾರಿ ಟ್ರೊಫಿ ಗೆದ್ದ ಹಿನ್ನೆಲೆ ಬೆಂಗಳೂರಿನಲ್ಲಿ ವಿಜಯೋತ್ಸವ ಇಟ್ಟುಕೊಳ್ಳಲಾಗಿತ್ತು. ಈ ವೇಳೆ ಕಾಲ್ತುಳಿತ ಸಂಭವಿಸಿದ 11 ಜನ ಪ್ರಾಣ ಕಳೆದುಕೊಂಡಿದ್ದರು. ಈ ಸಂಬಂಧ ಅಮಾನತುಗೊಳಿಸಿದ್ದ ಒರ್ವರನ್ನು ಹೊರತುಪಡಿಸಿ ನಾಲ್ವರು ಪೊಲೀಸ್‌ ಅಧಿಕಾರಿಗಳನ್ನು ಸೇವೆಗೆ ಮತ್ತೆ ಹಾಜರಾಗುವಂತೆ ಆದೇಶ ಹೊರಡಿಸಲಾಗಿದೆ.

ಕಾಲ್ತುಳಿತ ದುರತಂದ ಬೆನ್ನೆಲ್ಲೆ ಬೆಂಗಳೂರು ಪೊಲೀಸ್ ಕಮಿಷನರ್ ಸೇರಿ ಐವರು ಪೊಲೀಸ್ ಅಧಿಕಾರಿಗಳನ್ನು ಸರ್ಕಾರ ಅಮಾನತುಗಿಳಿಸಿದ ಆದೇಶ ಹೊರಡಿಸಿತ್ತು. ಆದರೆ, ಇದೀಗ ಓರ್ವ ಅಧಿಕಾರಿ ಹೊರತುಪಡಿಸಿ ಉಳಿದ ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ರದ್ದುಪಡಿಸಿ ಸೇವೆಗೆ ಮರು ಹಾಜರಾಗಲು ತಿಳಿಸಿದೆ.

ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರು ಮಾತ್ರ ರಾಜ್ಯ ಸರ್ಕಾರದ ಅಮಾನತು ಆದೇಶ ಪ್ರಶ್ನಿಸಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿದ್ದಾರೆ. ಇವರನ್ನು ಹೊರತುಪಡಿಸಿ ಉಳಿದಂತೆ ಬಿ.ದಯಾನಂದ್, ಶೇಖರ್ ಹೆಚ್.ಟಿ, ಬಾಲಕೃಷ್ಣ ಮತ್ತು ಗಿರೀಶ್ ಅವರ ಅಮಾನತು ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದು, ಸೇವೆಗೆ ಮರು ಹಾಜರಾಗುವಂತೆ ತಿಳಿಸಿದೆ.

ಇನ್ನೂ ಕಾಲ್ತುಳಿತ ಪ್ರಕಾರಣ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರ ಆರ್‌ಸಿಬಿ, ಕೆಎಸ್‌ಸಿಎ ಮತ್ತು ಡಿಎನ್‌ಎ ಸಂಸ್ಥೆಗಳ ಮೇಲೆ ಎಫ್‌ಐಆರ್ ದಾಖಲು ಮಾಡಿ, ಈ ಸಂಸ್ಥೆಗಳ ಮುಖ್ಯಸ್ಥರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿಯತ್ತು. ಬಳಿಕ ನ್ಯಾಯಾಲಯಕ್ಕೆ ಎಲ್ಲರೂ ಜಾಮೀನಿನ ಮೇಲೆ ಹೊರಗಡೆ ಬಂದಿದ್ದಾರೆ.

ಇನ್ನೂ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿದ ಹಿನ್ನೆಲೆ, ಇಲ್ಲಿ ನಡೆಯುವ ಮುಂದಿನ ಎಲ್ಲಾ ಪಂದ್ಯಗಳನ್ನು ಬೇರೆಡೆಗೆ ಸ್ಥಳಾಂತರ ಮಾಡುವ ಚಿಂತನೆಯೂ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಯಾಕಂದ್ರೆ ಬೃಹತ್ ಕಾರ್ಯಕ್ರಮಗಳನ್ನು ಮಾಡಲು, ಪಂದ್ಯಗಳನ್ನು ಆಡಿಸಲು ಇದು ಸೂಕ್ತ ಸ್ಥಳವಲ್ಲ ಎಂಬ ಬಗ್ಗೆ ಮಾಹಿತಿ ಹರಬಿದ್ದಿದೆ. ಆದ್ದರಿಂದ ಮುಂದಿನ 2026 ಐಪಿಎಲ್‌ ಪಂದ್ಯವನ್ನು ಚಿನ್ನಸ್ವಾಮಿ ಬಿಟ್ಟು ಬೇರೆಗೆಡೆ ಸೂಕ್ತ ಸ್ಥಳದಲ್ಲಿ ನಡೆಸುವ ಬಗ್ಗೆ ಚಿಂತನೆ ನಡೆದಿದೆ.

ಒಂದು ವೇಳೆ ಕರ್ನಾಟಕದಲ್ಲಿ ಬೇರೆ ಎಲ್ಲಿಯೂ ಪಂದ್ಯ ಆಡಿಸಲು ಸ್ಥಳ ಗುರುತು ಮಾಡದಿದ್ದರೆ, ಆರ್‌ಸಿಬಿ ಬೇರೆ ರಾಜ್ಯಗಳಿಗೆ ಹೋಗಿ ಪಂದ್ಯ ಆಡಬೇಕಾಗುತ್ತದೆ. ಆಗ ಆರ್‌ಸಿಬಿಗೆ ತವರು ಮೈದಾನವನ್ನು ಕಳೆದುಕೊಳ್ಳುವಂತಹ ಪರಿಸ್ಥಿತಿ ಎದುರಾದರೂ ಆಶ್ಚರ್ಯಪಡಬೇಕಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+