ಸೈಯದ್ ಅಲ್ತಾಫ್ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿ ನೇಮಕ

ಬೆಂಗಳೂರು, ಸೆಪ್ಟೆಂಬರ್ 6: ಬಹುದಿನಗಳಿಂದ ಖಾಲಿ ಇದ್ದ ಕರ್ನಾಟಕದ ದೆಹಲಿ ವಿಶೇಷ ಪ್ರತಿನಿಧಿ ಹುದ್ದೆಯನ್ನು ರಾಜ್ಯ ಸರ್ಕಾರ ಸದ್ದಿಲ್ಲದೇ ಭರ್ತಿ ಮಾಡಿದೆ. ರಾಜ್ಯ ಸರ್ಕಾರದ ನವ ದೆಹಲಿ ವಿಶೇಷ ಪ್ರತಿನಿಧಿಯಾಗಿ ಬೆಂಗಳೂರಿನ ಜೆಡಿಎಸ್ ಮುಖಂಡ ಸೈಯದ್ ಮೋಹಿದ್ ಅಲ್ತಾಫ್ ಅವರನ್ನು ನೇಮಕ ಮಾಡಿದೆ.

ಈಗಾಗಲೇ ಸರ್ಕಾರದಲ್ಲಿ ಹಲವಾರು ಹುದ್ದೆಗಳು ಖಾಲಿ ಇರುವಾಗ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿರುವುದು ಹಲವರ ಕೆಂಗಣ್ಣಿಗೆ ಕಾರಣವಾಗಿದೆ.

ಸೈಯದ್ ಮೋಹಿದ್ ಅಲ್ತಾಫ್ ಅವರು ಜೆಡಿಎಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾಗಿದ್ದು, 2013ರ ವಿಧಾನಸಭೆ ಚುನಾವಣೆಯಲ್ಲಿ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.

State govt appoints Delhi new special representative

ಇದೀಗ ರಾಜ್ಯದಲ್ಲಿನ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಉಪಾಧ್ಯಕ್ಷ, ನಿರ್ದೇಶಕರ ಸ್ಥಾನಗಳು ಖಾಲಿ ಇದೆ ಆದರೆ ಸೈಯದ್ ಮೋಹಿದ್ ಅಲ್ತಾಫ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿರುವುದು ಕಾರ್ಯಕರ್ತರು ಹುಬ್ಬೇರಿಸುವಂತೆ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+