ಬೆಂಗಳೂರಿನಲ್ಲಿ ಇನ್ನಷ್ಟು ಸಂಚಾರಿ ಪೊಲೀಸ್ ಠಾಣೆ

ಬೆಂಗಳೂರು, ಜ. 28: ನಗರದಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿದೆ. ಆದ್ದರಿಂದ ಇನ್ನಷ್ಟು ಸಂಚಾರಿ ಪೊಲೀಸ್ ಠಾಣೆಗಳನ್ನು ತೆರೆಯಲು ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುಮಾರು 1.30 ಕೋಟಿ ಜನರಿದ್ದಾರೆ. ಈಗಿರುವ 44 ಸಂಚಾರಿ ಪೊಲೀಸ್ ಠಾಣೆಗಳಿಗೆ ಕರ್ತವ್ಯ ಭಾರ ಹೆಚ್ಚುತ್ತಿದೆ. ಆದ್ದರಿಂದ ಜನಸಂಖ್ಯೆ ಹಾಗೂ ವಾಹನ ದಟ್ಟಣೆಗೆ ಅನುಗುಣವಾಗಿ ಇನ್ನಷ್ಟು ಸಂಚಾರಿ ಪೊಲೀಸ್ ಠಾಣೆಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು. [ನಕಲಿ ಸಿಐಎ ಏಜೆಂಟ್]

ಬೆಂಗಳೂರು ನಗರ ಸಂಚಾರಿ ಪೊಲೀಸ್ ಮತ್ತು ಸಾರಿಗೆ ಇಲಾಖೆ ಜಂಟಿಯಾಗಿ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿರುವ 26ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.

police

'ಸುರಕ್ಷತೆ ಕೇವಲ ಘೋಷಣೆಯಲ್ಲ, ಅದು ಜೀವನ ಶೈಲಿ' ಎಂಬುದು ಈ ಸಪ್ತಾಹದ ಘೋಷಣಾ ವಾಕ್ಯ. ವಿಶೇಷವಾಗಿ ವಿದ್ಯಾರ್ಥಿಗಳಲ್ಲಿ ಸುರಕ್ಷತಾ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. [ಹೆಚ್ಚು ದಿನ ಪಾರ್ಕಿಂಗ್ ಲಾಟ್ ನಲ್ಲಿ ವಾಹನ ನಿಲ್ಲಿಸಬೇಡಿ]

5,004 ಅಪಘಾತ, 729 ಜನ ಸಾವು : ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಬೆಂಗಳೂರು ನಗರ ಸಂಚಾರಿ ಪೊಲೀಸರು ಹೊರ ತಂದಿರುವ ವಿಶೇಷ ಸಂಚಿಕೆಯನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬಿಡುಗಡೆ ಮಾಡಿದರು.

ರಸ್ತೆ ಸುರಕ್ಷತೆ ಕ್ರಮಗಳನ್ನು ಪಾಲಿಸದ ಕಾರಣ ಬೆಂಗಳೂರಿನಲ್ಲಿ 2014 ನೇ ಸಾಲಿನಲ್ಲಿ 5,004 ಅಪಘಾತಗಳಾಗಿವೆ. 729 ಮಂದಿ ಮೃತಪಟ್ಟಿದ್ದಾರೆ. ಸರ್ಕಾರವು ರಸ್ತೆ ಸುರಕ್ಷತೆಗಾಗಿ ಅನೇಕ ಕಾನೂನುಗಳನ್ನು ಜಾರಿ ಮಾಡಿದೆ. ಆದರೆ ವಾಹನ ಸವಾರರು ಕಾನೂನು ಪಾಲಿಸವುದಿಲ್ಲ. ರಸ್ತೆ ಸುರಕ್ಷತೆಗಾಗಿ ಸಾರಿಗೆ ಇಲಾಖೆಯು ಗೃಹ ಇಲಾಖೆಗೆ ಎಲ್ಲ ವಿಷಯಗಳಲ್ಲಿಯೂ ಸಹಕಾರ ನೀಡಲಿದೆ ಎಂದರು. [ಠಾಣೆ ವ್ಯಾಪ್ತಿ ಅರಿಯಲು ಸಹಾಯವಾಣಿ]

ಪರಿಸರ ಹಾಗೂ ಶಬ್ದ ಮಾಲಿನ್ಯ ತಡೆಯಲು ಸ್ವಯಂ ಸಂಘದ ಜೊತೆ ಸಾರ್ವಜನಿಕರೂ ತಮ್ಮ ವಾಹನಗಳನ್ನು ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಪರಿಸರ ನೈರ್ಮಲ್ಯ ತಡೆಗೆ ಸಹಕರಿಸಬೇಕು ಎಂದರು.

ಮೂಲಸೌಲಭ್ಯ ಅಭಿವೃದ್ಧಿ, ವಾರ್ತಾ ಹಾಗೂ ಹಜ್ ಸಚಿವ ಆರ್ ರೋಷನ್ ಬೇಗ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕ ಲಾಲ್ ರೊಖುಮಾ ಪಚಾವೋ, ಸಾರಿಗೆ ಇಲಾಖೆ ಆಯುಕ್ತ ಡಾ. ರಾಮೇಗೌಡ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ ಸೇರಿದಂತೆ ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. [ಬೈಕ್ ವ್ಹೀಲಿಂಗ್ ವಿರುದ್ಧ ಜಾಗೃತಿ ಅಭಿಯಾನ]

ವಿದ್ಯಾರ್ಥಿಗಳು, ರಸ್ತೆ ಸುರಕ್ಷತಾ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ 45 ಶಾಲೆಗಳ ಮಕ್ಕಳು ಪಥ ಸಂಚಲನ ನಡೆಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+