ಮಹಿಳೆಯರಿಗೆ ನೆಮ್ಮದಿ ಸುದ್ದಿ: ಕ್ಯಾಬ್‌ಗಳಲ್ಲಿ ಚೈಲ್ಡ್ ಲಾಕ್ ಇಲ್ಲ
Recommended Video

ಬೆಂಗಳೂರು, ಅಕ್ಟೋಬರ್ 11: ಕಾರುಗಳಲ್ಲಿರುವ ಚೈಲ್ಡ್ ಲಾಕ್ ವರವೂ ಹೌದು ಶಾಪವೂ ಹೌದು, ಇತ್ತೀಚೆಗೆ ಹೆಚ್ಚುತ್ತಿರುವ ಮಹಿಳಾ ಪ್ರಯಾಣಿಕರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಚೈಲ್ಡ್ ಲಾಕ್ ಕಿತ್ತುಹಾಕುವ ನಿರ್ಧಾರ ಮಾಡಿದೆ.
ಬೆಂಗಳೂರು ಪ್ರಸೂತಿ ಮತ್ತು ಸ್ತ್ರೀರೋಗ ಸೊಸೈಟಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಿಜೆ ದಿನೇಶ್ ಮಹೇಶ್ವರಿ ಹಾಗೂ ನ್ಯಾ. ಎಸ್ ಜಿ ಪಂಡಿತ್ ಅವರಿದ್ದ ನ್ಯಾಯ ಪೀಠದ ಮುಂದೆ ಬಂದಿತ್ತು.
ಚೈಲ್ಡ್ ಸೇಫ್ಟಿ ಲಾಕ್ ನಿಷ್ಕ್ರಿಯಗೊಳಿಸುವ ಕುರಿತು ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ ನಿಯಮಕ್ಕೆ ತಿದ್ದುಪಡಿ ತಂದು ಅ.9ರಂದು ಅಧಿ ಸೂಚನೆ ಹೊರಡಿಸಲಾಗಿದೆ. ಸಾರ್ವಜನಿಕರ ಆಕ್ಷೇಪಣೆಗೆ 30 ದಿನಗಳ ಕಾಲಾವಕಾಶ ನೀಡಲಾಗಿದೆ.

ಅಧಿಸೂಚನೆಯಲ್ಲೇನಿದೆ? ಅ.9 ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1988ರ ಕಲಂ(25)ರಲ್ಲಿ ವ್ಯಾಖ್ಯಾನಿಸಿರುವ ಸಾರಿಗೆ ವಾಹನ ವರ್ಗದ ಮೋಟಾರ್ ಕ್ಯಾಬ್ಸ್ ವಾಹನಗಳಲ್ಲಿ ಚೈಲ್ಡ್ ಲಾಕ್ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸತಕ್ಕದ್ದು, ತಪ್ಪಿದಲ್ಲಿ ಅಂತಹ ವಾಹನಗಳ ರಹದಾರಿ ನೀಡುವ, ನವೀಕರಿಸುವ ಮತ್ತು ಅರ್ಹತಾ ಪತ್ರ ನೀಡುವ, ನವೀಕರಣ ಮಂಜೂರು ಮಾಡುವಂತಿಲ್ಲ. ಈ ಬಗ್ಗೆ ಸಂಬಂಧಿಸಿದವರು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದೆ.
ಈಗಾಗಲೇ ಚೈಲ್ಡ್ ಲಾಕ್ ಹೊಂದಿರುವ ವಾಹನಗಳು ರಸ್ತೆಯ ಮೇಲೆ ಚಲಿಸದಂತೆ ಯಾವ ರೀತಿ ನಿಯಮಗಳಿದೆ ತಿಳಿಸಿ ಎಂದು ನ್ಯಾಯಪೀಠ ಪ್ರಶ್ನೆ ಮಾಡಿದೆ. ಬೆಂಗಳೂರು ನಗರದಲ್ಲಿ ಕ್ಯಾಬ್ ಗಳಲ್ಲಿ ಸಂಚರಿಸುವ ಮಹಿಳಾ ಪ್ರಯಾಣಿಕರ ಮೇಲೆ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಚಾಲಕರು ಈ ವ್ಯವಸ್ಥೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ, ಇದನ್ನು ತೆಗೆದು ಹಾಕಲು ಅವಕಾಶ ಮಾಡಿಕೊಡಿ ಎಂದು ಕೋರ್ಟ್ ಗೆ ಕೋರಿದ್ದಾರೆ.












Click it and Unblock the Notifications