ಸಿದ್ದರಾಮಯ್ಯ ಟ್ವೀಟ್ ಬೆನ್ನಲ್ಲೆ ಪಿಯುಸಿ ಉಪನ್ಯಾಸಕರಿಗೆ ಗುಡ್ ನ್ಯೂಸ್
ಬೆಂಗಳೂರು, ಜುಲೈ 16: 2018ರಲ್ಲಿ ಪಿಯುಸಿ ಉಪನ್ಯಾಸಕರ ಹುದ್ದೆಗೆ ಆಯ್ಕೆಗೊಂಡಿದ್ದ ಅಭ್ಯರ್ಥಿಗಳ ಕೌನ್ಸಿಲಿಂಗ್ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಮರು ಚಾಲನೆ ನೀಡಿದೆ.
Recommended Video
ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ನಿನ್ನೆಯಷ್ಟೇ ಟ್ವೀಟ್ ಮಾಡಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಟೀಕಿಸಿದ್ದರು. ಸಿದ್ದರಾಮಯ್ಯರವರ ಟ್ವೀಟ್ ಬೆನ್ನಲ್ಲೆ ಆರ್ಥಿಕ ಇಲಾಖೆ ಉಪನ್ಯಾಸಕರ ಕೌನ್ಸಿಲಿಂಗ್ ಗೆ ಅನುಮತಿ ನೀಡಿದೆ.
ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫೇಸ್‌ಬುಕ್‌ನಲ್ಲಿ ಖಚಿತಪಡಿಸಿದ್ದಾರೆ. ''ಆಯ್ಕೆಗೊಂಡಿರುವ PUC ಉಪನ್ಯಾಸಕರ ಕೌನ್ಸೆಲಿಂಗ್ ಗೆ ಆರ್ಥಿಕ ಇಲಾಖೆಯ ಹಸಿರು ನಿಶಾನೆ ದೊರಕಿದೆ. ನಾಳೆ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ಶೀಘ್ರ ದಿನಾಂಕ ಪ್ರಕಟಿಸಲಾಗುವುದು'' ಎಂದು ಮಾಹಿತಿ ನೀಡಿದ್ದಾರೆ.

ಸುರೇಶ್ ಕುಮಾರ್ ಅವರ ಈ ಪೋಸ್ಟ್ ಬೆನ್ನಲ್ಲೆ ಸಿದ್ದರಾಮಯ್ಯ ಸಹ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ. 'ರಾಜ್ಯದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಧನ್ಯವಾದಗಳು. ಪಿಯುಸಿ ಉಪನ್ಯಾಸಕರ ಕೌನ್ಸಿಲಿಂಗ್‌ಗೆ ಹಾಜರಾಗುವ ಅಭ್ಯರ್ಥಿಗಳಿಗೆ ಶುಭ ಹಾರೈಕೆಗಳು' ಎಂದಿದ್ದಾರೆ.

ಅಂದ್ಹಾಗೆ, 'ಪಿಯುಸಿ ಉಪನ್ಯಾಸಕರ ಹುದ್ದೆಗೆ 2018ರಲ್ಲಿ ಬರೆದಿದ್ದ ಪರೀಕ್ಷೆಯಲ್ಲಿ ಉತ್ತೀರ್ಣರಾದ 1298 ಅಭ್ಯರ್ಥಿಗಳ ಆಯ್ಕೆಪಟ್ಟಿ ಅಂತಿಮವಾಗಿತ್ತು. ಆದರೆ ಸುರೇಶ್ ಕುಮಾರ್ ಮಧ್ಯೆಪ್ರವೇಶಿಸಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಿರುವುದು ಅಭ್ಯರ್ಥಿಗಳಿಗಷ್ಟೇ ಅಲ್ಲ ವಿದ್ಯಾರ್ಥಿಗಳಿಗೂ ಮಾಡಿರುವ ಅನ್ಯಾಯ'' ಎಂದು ಸಿದ್ದರಾಮಯ್ಯ ಆರೋಪಿಸಿದ್ದರು.












Click it and Unblock the Notifications