ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯ ಟ್ವೀಟ್ ಬೆನ್ನಲ್ಲೆ ಪಿಯುಸಿ ಉಪನ್ಯಾಸಕರಿಗೆ ಗುಡ್ ನ್ಯೂಸ್

|
Google Oneindia Kannada News

ಬೆಂಗಳೂರು, ಜುಲೈ 16: 2018ರಲ್ಲಿ ಪಿಯುಸಿ ಉಪನ್ಯಾಸಕರ ಹುದ್ದೆಗೆ ಆಯ್ಕೆಗೊಂಡಿದ್ದ ಅಭ್ಯರ್ಥಿಗಳ ಕೌನ್ಸಿಲಿಂಗ್ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಮರು ಚಾಲನೆ ನೀಡಿದೆ.

Recommended Video

Obama , Musk , Apple , Uber and may Twitter account Hacked | Oneindia Kannada

ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ನಿನ್ನೆಯಷ್ಟೇ ಟ್ವೀಟ್ ಮಾಡಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಟೀಕಿಸಿದ್ದರು. ಸಿದ್ದರಾಮಯ್ಯರವರ ಟ್ವೀಟ್ ಬೆನ್ನಲ್ಲೆ ಆರ್ಥಿಕ ಇಲಾಖೆ ಉಪನ್ಯಾಸಕರ ಕೌನ್ಸಿಲಿಂಗ್ ಗೆ ಅನುಮತಿ ನೀಡಿದೆ.

ಪಿಯುಸಿ ಫಲಿತಾಂಶ ಕುಸಿತ, ಶಿಕ್ಷಣ ಸಚಿವರ ವಿರುದ್ಧ ಸಿದ್ದರಾಮಯ್ಯ ಕಿಡಿಪಿಯುಸಿ ಫಲಿತಾಂಶ ಕುಸಿತ, ಶಿಕ್ಷಣ ಸಚಿವರ ವಿರುದ್ಧ ಸಿದ್ದರಾಮಯ್ಯ ಕಿಡಿ

ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫೇಸ್‌ಬುಕ್‌ನಲ್ಲಿ ಖಚಿತಪಡಿಸಿದ್ದಾರೆ. ''ಆಯ್ಕೆಗೊಂಡಿರುವ PUC ಉಪನ್ಯಾಸಕರ ಕೌನ್ಸೆಲಿಂಗ್ ಗೆ ಆರ್ಥಿಕ ಇಲಾಖೆಯ ಹಸಿರು ನಿಶಾನೆ ದೊರಕಿದೆ. ನಾಳೆ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ಶೀಘ್ರ ದಿನಾಂಕ ಪ್ರಕಟಿಸಲಾಗುವುದು'' ಎಂದು ಮಾಹಿತಿ ನೀಡಿದ್ದಾರೆ.

State Govt given permission for the counseling of PUC lecturers

ಸುರೇಶ್ ಕುಮಾರ್ ಅವರ ಈ ಪೋಸ್ಟ್ ಬೆನ್ನಲ್ಲೆ ಸಿದ್ದರಾಮಯ್ಯ ಸಹ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ. 'ರಾಜ್ಯದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಧನ್ಯವಾದಗಳು. ಪಿಯುಸಿ ಉಪನ್ಯಾಸಕರ ಕೌನ್ಸಿಲಿಂಗ್‌ಗೆ ಹಾಜರಾಗುವ ಅಭ್ಯರ್ಥಿಗಳಿಗೆ ಶುಭ ಹಾರೈಕೆಗಳು' ಎಂದಿದ್ದಾರೆ.

State Govt given permission for the counseling of PUC lecturers

ಅಂದ್ಹಾಗೆ, 'ಪಿಯುಸಿ ಉಪನ್ಯಾಸಕರ ಹುದ್ದೆಗೆ 2018ರಲ್ಲಿ ಬರೆದಿದ್ದ ಪರೀಕ್ಷೆಯ‌ಲ್ಲಿ ಉತ್ತೀರ್ಣರಾದ 1298 ಅಭ್ಯರ್ಥಿಗಳ ಆಯ್ಕೆಪಟ್ಟಿ ಅಂತಿಮವಾಗಿತ್ತು. ಆದರೆ ಸುರೇಶ್ ಕುಮಾರ್ ಮಧ್ಯೆಪ್ರವೇಶಿಸಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಿರುವುದು ಅಭ್ಯರ್ಥಿಗಳಿಗಷ್ಟೇ ಅಲ್ಲ ವಿದ್ಯಾರ್ಥಿಗಳಿಗೂ ಮಾಡಿರುವ ಅನ್ಯಾಯ'' ಎಂದು ಸಿದ್ದರಾಮಯ್ಯ ಆರೋಪಿಸಿದ್ದರು.

English summary
Education Minister Suresh Kumar said state finance ministry given permission for the counseling of PUC lecturers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X