ದಿನದ ಮಟ್ಟಿಗೆ ಬಡ್ಡಿರಹಿತ ಸಾಲ ನೀಡುವ ಎಚ್ಡಿಕೆ ಜನಪ್ರಿಯ ಯೋಜನೆ!
Recommended Video

ಬೆಂಗಳೂರು, ಆಗಸ್ಟ್ 25: ಮೀಟರ್ ಬಡ್ಡಿ ದಂಧೆ ತಪ್ಪಿಸಲು ಸರ್ಕಾರದಿಂದಲೇ ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆ ಆರಂಭಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಟರ್ ಬಡ್ಡಿ ತಪ್ಪಿಸಲು ಸರ್ಕಾರದಿಂದ ಮೊಬೈಲ್ ಬ್ಯಾಂಕಿಂಗ್ ಆರಂಭಿಸಲಾಗುತ್ತಿದೆ, ಸರ್ಕಾರದಿಂದ ದಿನಕ್ಕೆ ಸಾವಿರ ರೂ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ. ಬೆಳಗ್ಗೆ ಸಾಲ ಪಡೆದು ಸಂಜೆ ತೀರಿಸಲು ಅವಕಾಶ ಮಾಡಿಕೊಡಲಾಗುತ್ತಿದೆ, ಸರ್ಕಾರ ನೀಡುವ ಈ ಸಾಲಕ್ಕೆ ಯಾವುದೇ ಬಡ್ಡಿಯಿಲ್ಲ ಎಂದು ತಿಳಿಸಿದರು.
ಚಕ್ರಬಡ್ಡಿ, ಮೀಟರ್ ಬಡ್ಡಿ ತಪ್ಪಿಸಲು ಸರ್ಕಾರ ಈ ನಿರ್ಧಾರಕ್ಕೆ ಬಂದಿದ್ದು ಬಡ್ಡಿ ರಹಿತ ಒಂದು ದಿನದ ಸಾಲ ನೀಡಲಾಗುತ್ತಿದೆ. ಅಧಿಕಾರವನ್ನು ಉಳಿಸಿಕೊಳ್ಳುವ ಕಸರತ್ತು ನನ್ನ ಮುಂದಿಲ್ಲ, ಮುಂದೆ ಏನಾಗುತ್ತದೆ ಎಂದು ನನಗೆ ಗೊತ್ತಿದೆ, ಶಾಸಕರ ಜತೆಗೆ ಹೇಗಿರಬೇಕು ಎನ್ನುವುದೂ ನನಗೆ ತಿಳಿದಿದೆ ಎಂದರು.

ಸೆಪ್ಟೆಂಬರ್ ಮೂರಕ್ಕೆ ಹೊಸ ಸಿಎಂ ಬರುತ್ತಾರೆ ಎಂದು ಹೇಳುತ್ತಿದ್ದಾರೆ, ಇದೆಲ್ಲದರ ಬಗ್ಗೆ ನಾನು ಯೋಚನೆ ಮಾಡುವುದಿಲ್ಲ, ಕುಮಾರಸ್ವಾಮಿಯಿಂದ ಏನೂ ಆಗಲ್ಲ ಅಂತಿದ್ರು, ಇನ್ನೂ ಮೂರರಿಂದ ನಾಲ್ಕು ತಿಂಗಳು ಕಾಯಿರಿ ಕುಮಾರಸ್ವಾಮಿ ಏನು ಎನ್ನುವುದನ್ನು ತೋರಿಸುತ್ತೇನೆ ನಾನು ಅಧಿಕಾರವನ್ನು ಉಳಿಸಿಕೊಳ್ಳಲು ಸಮಯ ವ್ಯರ್ಥ ಮಾಡುವುದಿಲ್ಲ ಎಂದು ಹೇಳಿದರು.












Click it and Unblock the Notifications