ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾರ್ಚ್ ಒಳಗೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಗರ ಸಾರಿಗೆ ಸೇವೆ

By Kiran B Hegde
|
Google Oneindia Kannada News

ಬೆಂಗಳೂರು, ಡಿ. 9: ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ 2015ರ ಮಾರ್ಚ್ ತಿಂಗಳ ಒಳಗೆ ನಗರ ಸಾರಿಗೆ ಸೇವೆ ಆರಂಭಿಸಲಾಗುವುದು. 50 ಸಾವಿರಕ್ಕಿಂತ ಕಡಿಮೆ ಜನಸಂಖ್ಯೆ ಇರುವ ಪಟ್ಟಣ ಪ್ರದೇಶಗಳಲ್ಲಿಯೂ ನಗರ ಸಾರಿಗೆ ಸೇವೆ ಆರಂಭಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. [5 ವರ್ಷದಲ್ಲಿ ಮೊದಲ ಬಾರಿ ಡೀಸೆಲ್ ದರ ಇಳಿಕೆ]

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು, ರಾಜ್ಯದಲ್ಲಿ ಬಸ್‌ಗಳ ಕೊರತೆ ಇಲ್ಲ. ನರ್ಮ್ ಯೋಜನೆಯಡಿಯೂ ಬಸ್ ಸಿಗಲಿವೆ. ನಗರ ಸಾರಿಗೆ ವ್ಯವಸ್ಥೆ ಬಲಪಡಿಸಲು ಮೊದಲು ಎಲ್ಲ ಜಿಲ್ಲೆಗಳಲ್ಲೂ ತಲಾ ಆರು ಕೋಟಿ ರೂ. ವೆಚ್ಚದಲ್ಲಿ ಹೊಸ ಸಾರಿಗೆ ಡಿಪೋ ಆರಂಭಿಸಲಾಗುವುದು ಎಂದು ತಿಳಿಸಿದರು. [ಬಸ್ ದರ ಇಳಿಕೆ ಅಸಾಧ್ಯ]

rama

ಸಾರಿಗೆ ಸಂಸ್ಥೆಯಲ್ಲಿರುವ 30 ಸಾವಿರಕ್ಕೂ ಹೆಚ್ಚು ತಾತ್ಕಾಲಿಕ ಸಿಬ್ಬಂದಿಗೆ ಮಾಸಿಕ ಆರು ಸಾವಿರ ರೂ. ಗೌರವ ಧನ ಸಿಗುತ್ತಿದ್ದು, ಒಂದು ಸಾವಿರ ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಪ್ರಯಾಣ ದರ ಇಳಿಸಲ್ಲ: ರಾಜ್ಯದಲ್ಲಿ ಸಾರಿಗೆ ಸಂಸ್ಥೆಯ ಪ್ರಯಾಣ ದರಗಳನ್ನು ಇಳಿಸುವುದಿಲ್ಲ. ಡೀಸೆಲ್ ಬೆಲೆ ಕಡಿಮೆಯಾದ ಹಿನ್ನೆಲೆಯಲ್ಲಿ 137 ಕೋಟಿ ರೂ. ಉಳಿತಾಯವಾಗುತ್ತಿದೆ. ಆದರೂ ವಿವಿಧ ಕಾರಣಗಳಿಗಾಗಿ 129 ಕೋಟಿ ರೂ. ಹೆಚ್ಚುವರಿ ವೆಚ್ಚವಾಗುತ್ತಿದೆ. ಹೀಗಾಗಿ ಬಸ್ ಪ್ರಯಾಣ ದರಗಳನ್ನು ಇಳಿಸಲು ಸಾಧ್ಯವಿಲ್ಲ. ಎಂದು ಸ್ಪಷ್ಪಪಡಿಸಿದರು. [ಮತ್ತೆ ಬಿಎಂಟಿಸಿ ದರ ಇಳಿಕೆ ಜಪ]

ಬೇರೆ ರಾಜ್ಯಗಳಲ್ಲಿ ಸಾರಿಗೆ ಸಂಸ್ಥೆ ನಷ್ಟದಲ್ಲಿದ್ದು, ಕರ್ನಾಟಕದಲ್ಲಿ ಲಾಭದತ್ತ ಮುನ್ನಡೆಯುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. [ದರ ಏರಿಕೆಯಲ್ಲಿನ ಇಚ್ಛಾಶಕ್ತಿ ಇಳಿಕೆಯಲ್ಲಿಲ್ಲ]

English summary
Transport Minister of Karnataka Ramalinga Reddy told that state is willing to start city bus service in all district centres. He confirmed that government will not decrease the bus fare.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X