ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಸ್ಟೀಲ್ ಬ್ರಿಡ್ಜ್ ಬದಲು ಕಾಂಕ್ರೀಟ್ ಮೇಲ್ಸೇತುವೆ ನಿರ್ಮಿಸಲು ತೀರ್ಮಾನ

|
Google Oneindia Kannada News

ಬೆಂಗಳೂರು, ಫೆಬ್ರವರಿ 22: ನಗರದಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ತೀವ್ರ ವಿರೋಧ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸ್ಟೀಲ್ ಬ್ರಿಡ್ಜ್ ಬದಲು ಕಾಂಕ್ರೀಟ್ ಮೇಲ್ಸೇತುವೆಯನ್ನು ನಿರ್ಮಿಸಲು ಸರ್ಕಾರ ಮುಂದಾಗಿದೆ.

ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಮೇಕ್ರಿ ಸರ್ಕಲ್ ಮೂಲಕ ಹೆಬ್ಬಾಳದವರೆಗೆ ನಿರ್ಮಾಣ ಮಾಡಲು ಉದ್ದೇಶಿಸಿದ್ದ ಎಲಿವೇಟೆಡ್ ಕಾರಿಡಾರ್ ರಸ್ತೆಯನ್ನು ಮೇಖ್ರಿ ವೃತ್ತದ ವರೆಗೆ ಸೀಮಿತಗೊಳಿಸುವಂತೆ ರಾಜ್ಯ ರಸ್ತೆ ಅಭಿವೃದ್ಧಿ ನಿಗಮಕ್ಕೆ ತಿಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.

ಚಾಲುಕ್ಯ ವೃತ್ತದ ವಿವಾದಿತ ಉಕ್ಕಿನ ಸೇತುವೆ ಯೋಜನೆಗೆ ಮರುಜೀವ ಚಾಲುಕ್ಯ ವೃತ್ತದ ವಿವಾದಿತ ಉಕ್ಕಿನ ಸೇತುವೆ ಯೋಜನೆಗೆ ಮರುಜೀವ

ಹೆಬ್ಬಾಳದ ಎಸ್ಟೀಮ್ ಮಾಲ್‌ನಿಂದ ಮೇಖ್ರಿ ವೃತ್ತದ ಮಾರ್ಗವಾಗಿ ಚಾಲುಕ್ಯ ವೃತ್ತದವರೆಗೆ ಈ ಹಿಂದೆ ಪ್ರಸ್ತಾಪಿಸಲಾಗಿದ್ದ ಸ್ಟೀಲ್ ಬ್ರಿಡ್ಜ್ ಬದಲಾಗಿ ಕಾಂಕ್ರೀಟ್ ಸೇತುವೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ.

steel bridge proposal cancelled again

ಇದೇ ವೇಳೆ ಕೆಆರ್‌ಡಿಸಿಎಲ್‌ನಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಮೇಖ್ರಿ ವೃತ್ತದ ಮೂಲಕ ಹೆಬ್ಬಾಳದವರೆಗೆ ಎಲಿವೇಟೆಡ್ ಕಾರಿಡಾರ್ ಯೋಜನೆ ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿತ್ತು. ಆದರೆ ಮೇಖ್ರಿ ವೃತ್ತದಿಂದ ಹೆಬ್ಬಾಳ ಕಡೆಗೆ ಒಂದೇ ಮಾರ್ಗದಲ್ಲಿ ಎರಡೂ ರಸ್ತೆಗಳು ಬೇಡ ಎಂಬ ಕಾರಣಕ್ಕೆಎಲಿವೇಟೆಡ್ ಕಾರಿಡಾರ್ ಯೋಜನೆಯನ್ನು ಮೇಖ್ರಿ ವೃತ್ತಕ್ಕೆ ಅಂತ್ಯಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

English summary
Government cancelled the steel bridge proposal and initialted concrete bridge for Chalukya circle to Hebbala road.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X