ಸ್ಟೀಲ್ ಫ್ಲೈಓವರ್ ವಿರೋಧಿಸಿ ಜಾರ್ಜ್‌ಗೆ ಅನಂತ್ ಪತ್ರ
ತೀವ್ರತರವಾದ ವಿರೋಧದ ನಡುವೆ ಹಠಕ್ಕೆ ಬಿದ್ದು ಸ್ಟೀಲ್ ಫ್ಲೈಓವರ್ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್ ಸರಕಾರದ ಧೋರಣೆಯನ್ನು ಪ್ರಶ್ನಿಸಿ, ಸಚಿವ ಕೆಜೆ ಜಾರ್ಜ್ ಅವರನ್ನು ಉದ್ದೇಶಿಸಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಪತ್ರ ಬರೆದಿದ್ದಾರೆ.
ಸನ್ಮಾನ್ಯ ಶ್ರೀ ಕೆಜೆ ಜಾರ್ಜ್‌ರವರೆ,
ಬೆಂಗಳೂರಿನ ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೆ ಪ್ರಸ್ತಾವಿತ ಮೇಲು ಸೇತುವೆ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ) ಯೋಜನೆಯ ಕುರಿತಂತೆ ದಿನಾಂಕ 25ನೇ ಅಕ್ಟೋಬರ್, 2016ರಂದು ಕರೆಯಲಾಗಿರುವ ಬೆಂಗಳೂರಿನ ಜನಪ್ರತಿನಿಧಿಗಳ ಸಭೆಯ ತಿಳುವಳಿಕೆ ಪತ್ರ ತಲುಪಿದೆ.
ಈಗಾಗಲೇ ತಮಗೆ ತಿಳಿದಿರುವಂತೆ ಬೆಂಗಳೂರಿನ ನಾಗರಿಕರು, ಸಂಘ-ಸಂಸ್ಥೆಗಳು ಪ್ರಸ್ತಾವಿತ ಸ್ಟೀಲ್ ಬ್ರಿಡ್ಜ್ ಯೋಜನೆಯ ಬಗ್ಗೆ ತಮ್ಮ ಆಕ್ಷೇಪಣೆಯನ್ನು ಎತ್ತಿದ್ದಾರೆ. ಸ್ಟೀಲ್ ಬ್ರಿಡ್ಜ್ ನಿರ್ಮಾಣದ ಯೋಜನೆಯ ವಿವರಗಳನ್ನು ಸಾರ್ವಜನಿಕರಿಗೆ ಕಂತುಗಳಲ್ಲಿ ನೀಡಿರುವುದು ಸಾರ್ವಜನಿಕರಲ್ಲಿ ಯೋಜನೆಯ ಬಗ್ಗೆ ಮಾಹಿತಿಗಿಂತ ಹೆಚ್ಚಾಗಿ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳೊಂದಿಗೆ ಯಾವುದೇ ಸಮಾಲೋಚನೆ ನಡೆಸಿಲ್ಲ ಮತ್ತು ಯೋಜನೆಯ ಸಂಬಂಧಿತ ಸಮರ್ಪಕ ವಿವರಗಳನ್ನು ಸಾರ್ವಜನಿಕರಿಗೆ ತಿಳಿಸಿಲ್ಲ ಎಂದು ಸ್ಟೀಲ್ ಬ್ರಿಡ್ಜ್ ಯೋಜನೆಯ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸುತ್ತಿರುವ ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳು ತಿಳಿಸಿವೆ. [ಉಕ್ಕಿನ ಸೇತುವೆಗೂ ಟೋಲ್]

ಈ ಯೋಜನೆಗೆ ನಗರದ 812 ಮರಗಳನ್ನು ಕತ್ತರಿಸಬೇಕಾಗಿದೆ, ಪರ್ಯಾಯವಾಗಿ ಬಿಡಿಎ 60,000 ಅಲಂಕಾರಿಕ ಗಿಡಗಳನ್ನು ನೆಡುವ ಯೋಜನೆ ಹಾಕಿಕೊಂಡಿದೆ! ಸಾರ್ವಜನಿಕರು ಮತ್ತು ತಜ್ಞರುಗಳ ತೀವ್ರ ವಿರೋಧದ ನಡುವೆಯೂ ಸ್ಟೀಲ್‌ಬ್ರಿಡ್ಜ್ ನಿರ್ಮಾಣಕ್ಕೆ ಸರ್ಕಾರ ತೋರುತ್ತಿರುವ ಆತುರ ಮತ್ತು ಅದರ ಒಟ್ಟು ವೆಚ್ಚದ ತೀವ್ರ ಹೆಚ್ಚಳ ಮತ್ತು ಸಾರ್ವಜನಿಕರಿಗೆ ಈ ಬಗ್ಗೆ ಮಾಹಿತಿ ನೀಡದಿರುವುದು ಸಾರ್ವಜನಿಕರು ಪ್ರತಿಭಟನೆಯ ಹಾದಿಯನ್ನು ಹಿಡಿಯುವಂತೆ ಮಾಡಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಗರದ ವಿವಿಧ ಭಾಗಗಳಿಂದ ಪರ್ಯಾಯ ಸಾರಿಗೆ ವ್ಯವಸ್ಥೆಯನ್ನು ಮೆಟ್ರೋ ಯೋಜನೆ ಸೇರಿದಂತೆ ರೂಪಿಸುವತ್ತ ಗಮನಹರಿಸಬೇಕಾಗಿದೆ. ಬೆಂಗಳೂರಿನ ಕೇಂದ್ರ ಭಾಗ ಮತ್ತು ಇತರ ಕಡೆಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಮಗ್ರವಾಗಿ ರೈಲು, ಬಸ್ ಮತ್ತು ಮೆಟ್ರೋ ಸಂಚಾರಗಳ ಸಮರ್ಪಕ ಜಾಲ ನಿರ್ಮಾಣ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಯತ್ತ ಗಮನಹರಿಸಬೇಕಾಗಿದೆ.
ರಾಜ್ಯ ಸರ್ಕಾರ ಸಾರ್ವಜನಿಕರೊಂದಿಗೆ ವಿಸ್ತೃತ ಸಮಾಲೋಚನೆಯನ್ನು ನಡೆಸಬೇಕು ಮತ್ತು ಇದಕ್ಕೂ ಮುನ್ನ ಯೋಜನೆಯ ಬಗ್ಗೆ ಸಂಪೂರ್ಣ ವಿವರಗಳನ್ನು ಮುಂಚಿತವಾಗಿ ನೀಡಬೇಕು. ಸಾರ್ವಜನಿಕರಿಗೆ ಮುಂಚಿತವಾಗಿ ಯೋಜನೆಯ ಸಂಬಂಧಿತ ವಿವರಗಳನ್ನು ನೀಡದೆ ಸಮಾಲೋಚನೆ ನಡೆಸಿದರೆ ಅದಕ್ಕೆ ಯಾವುದೇ ಅರ್ಥವಿರುವುದಿಲ್ಲ.
ನಾವು ಈಗಾಗಲೇ ಹವಾಮಾನದ ಬದಲಾವಣೆಯ ಪರಿಣಾಮಗಳನ್ನು ಅನುಭವಿಸುತ್ತಿರುವುದರಿಂದ ಸರ್ಕಾರದ ಕ್ರಮಗಳು ಪರಿಸರ ಸ್ನೇಹಿಯಾಗಿರಬೇಕು. ಪರಿಸರದ ಮೇಲೆ ಉಂಟಾಗುವ ವ್ಯತಿರಿಕ್ತ ಪರಿಣಾಮಗಳ ಬಗ್ಗೆ ಯಾವುದೇ ಅಧ್ಯಯನ ನಡೆಸದೆ ಯೋಜನೆಯನ್ನು ರೂಪಿಸುತ್ತಿರುವುದು ಈ ಯೋಜನೆಯ ಕೊರತೆ.
ಸಾರ್ವಜನಿಕರು ಹಾಗು ಸಂಘಸಂಸ್ಥೆಗಳೊಂದಿಗೆ ವಿಸ್ತೃತವಾಗಿ ಈ ಯೋಜನೆಯ ಬಗ್ಗೆ ಚರ್ಚಿಸದೆ ಹಾಗೂ ಯೋಜನೆಯ ಬಗ್ಗೆ ಸರಿಯಾದ ಮಾಹಿತಿ ನೀಡದೆ ಮತ್ತು ಪರಿಸರದ ಮೇಲೆ ಉಂಟಾಗುವ ವ್ಯತಿರಿಕ್ತ ಪರಿಣಾಮಗಳ ಬಗ್ಗೆ ಸರಿಯಾಗಿ ಅಧ್ಯಯನ ನಡೆಸದೆ ಈ ಯೋಜನೆಯನ್ನು ಮುಂದುವರೆಸಬಾರದೆಂದು ನಾನು ಸರ್ಕಾರವನ್ನು ಆಗ್ರಹಿಸುತ್ತೇನೆ.
ವಂದನೆಗಳೊಂದಿಗೆ,
ತಮ್ಮ ವಿಶ್ವಾಸಿ
ಅನಂತ್ ಕುಮಾರ್, ಕೇಂದ್ರ ಸಚಿವ
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್











Click it and Unblock the Notifications