ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ

ಬೆಂಗಳೂರು, ಆಗಸ್ಟ್ 11 : ಬೆಂಗಳೂರಿನ ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಮಂಗಳವಾರ ರಾತ್ರಿ ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮೇಲೆ ಮೇಲೆ 15ಕ್ಕೂ ಅಧಿಕ ಜನರು ಕಲ್ಲು ತೂರಾಟ ನಡೆಸಿದ್ದಾರೆ. ಮನೆಯ ಮುಂದಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

Stone Pelting At Congress MLA Akhanda Srinivas Murthy House

ಒಂದು ಸಮುದಾಯಕ್ಕೆ ಸೇರಿದವರು ಈ ದಾಳಿಯನ್ನು ನಡೆಸಿದ್ದಾರೆ. ದಾಳಿ ನಡೆದ ಸಂದರ್ಭದಲ್ಲಿ ಶಾಸಕರು ಮನೆಯಲ್ಲಿ ಇರಲಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ನಡೆಸಿದ್ದಾರೆ.

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಎಂಬುವವರು ಒಂದು ಸಮುದಾಯದ ವಿರುದ್ಧ ಫೇಸ್‌ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಈ ದಾಳಿ ನಡೆಸಲಾಗಿದೆ. ಫೇಸ್ ಬುಕ್ ಪೋಸ್ಟ್ ಸ್ಕ್ರೀನ್ ಶಾಟ್‌ಗಳು ವಾಟ್ಸಪ್ ಮೂಲಕ ಹರಿದಾಡಿದ್ದು, ನೂರಾರು ಜನರು ಶಾಸಕರ ಮನೆ ಮುಂದೆ ಜಮಾಯಿಸಿದ್ದಾರೆ.

ಡಿ. ಜೆ. ಹಳ್ಳಿ ಪೊಲೀಸರು, ಡಿಸಿಪಿ ಶರಣಪ್ಪ ಮುಂತಾದ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ. ಉದ್ರಿಕ್ತ ಜನರು ಡಿ. ಜೆ. ಹಳ್ಳಿ ಪೊಲೀಸ್ ಠಾಣೆಯ ಮುಂದೆಯೂ ಗಲಾಟೆ ಮಾಡುತ್ತಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸಹ ಸ್ಥಳಕ್ಕೆ ಆಗಮಿಸುತ್ತಿದ್ದಾರೆ.

ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರು ಸ್ಥಳಕ್ಕೆ ಆಗಮಿಸಿದ್ದು, ಬಳಿಕ ಡಿ. ಜೆ. ಹಳ್ಳಿ ಪೊಲೀಸ್ ಠಾಣೆಗೆ ತೆರಳಿದ್ದಾರೆ. ದಾಳಿ ನಡೆದ ಸಂದರ್ಭದಲ್ಲಿ ಶಾಸಕರು ನಿವಾಸದಲ್ಲಿ ಇರಲಿಲ್ಲ.

ಡಿ. ಜೆ. ಹಳ್ಳಿ ಪೊಲೀಸ್ ಠಾಣೆಯ ಮುಂದೆಯೂ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ. ಡಿಸಿಪಿಯ ಕಾರನ್ನು ಜನರು ಜಖಂಗೊಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+