ಸುಮಲತಾಗೆ ಬೆಂಬಲ: ನಟ ದರ್ಶನ್ ಮನೆ ಮೇಲೆ ಕಲ್ಲು ತೂರಾಟ
ಬೆಂಗಳೂರು, ಮಾರ್ಚ್ 23: ಕನ್ನಡ ಚಿತ್ರನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ ಮೇಲೆ ದುಷ್ಕರ್ಮಿಗಳು ಶನಿವಾರ ಕಲ್ಲು ತೂರಾಟ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಅವರ ಕಾರು ಜಖಂಗೊಂಡಿದೆ. ನಗರದ ರಾಜರಾಜೇಶ್ವರಿನಗರದಲ್ಲಿರುವ ಮನೆಯ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ
ಇಚ್ಚೀಚೆಗಷ್ಟೇ ಸುಮಲತಾ ಅಂಬರೀಷ್ ಅವರಿಗೆ ಲೋಕಸಭಾ ಚುನಾವೆಯಲ್ಲಿ ಸ್ಪರ್ಧಿಸಲು ಬೆಂಬಲಿಸಿದ್ದಕ್ಕಾಗಿ ದರ್ಶನ್ ಮತ್ತು ಯಶ್‌ರನ್ನು ಗುರಿಯಾಗಿಸಿಕೊಂಡು ಹಲವರು ಟೀಕೆ ಮಾಡಿದ್ದರು.

ಇದೇ ಹಿನ್ನಲೆಯಲ್ಲಿ ದರ್ಶನ್ ಮನೆ ಮೇಲೆ ಕಲ್ಲು ತೂರಾಟ ನಡೆದಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ದುರ್ಷರ್ಮಿಯೊಬ್ಬ ದರ್ಶನ್ ಮನೆ ಮೇಲೆ ಕಲ್ಲು ತೂರಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ರಾಜರಾಜೇಶ್ವರಿ ನಗರ ಪೊಲೀಸರು, ಕೆಂಗೇರಿ ಎಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.












Click it and Unblock the Notifications