Bengaluru Rent: ಬೆಂಗಳೂರಿನ ಬಾಡಿಗೆ ಮನೆ ಮಾಲೀಕರಿಗೆ ಹೊಸ ಸಂಕಷ್ಟ

ಜಾಗತಿಕ ನಗರ ಎಂದು ಗುರುತಿಸಿಕೊಂಡಿರುವ ಬೆಂಗಳೂರಿನಲ್ಲಿ ಬಾಡಿಗೆ ಮನೆಗಳಲ್ಲಿ ನೆಲೆಸಿರುವವರೇ ಹೆಚ್ಚು. ಉದ್ಯೋಗ, ಶಿಕ್ಷಣ, ವ್ಯಾಪಾರ ಸೇರಿದಂತೆ ಹಲವು ಉದ್ದೇಶಗಳಿಗಾಗಿ ಬೇರೆ ಬೇರೆ ಊರುಗಳಿಂದ ಬಂದಿರುವವರು ಮನೆಗಳನ್ನು ಬಾಡಿಗೆ ಪಡೆಯುತ್ತಿದ್ದಾರೆ. ಹೊರ ರಾಜ್ಯಗಳಿಂದ ಮಾತ್ರವಲ್ಲದೆ ವಿದೇಶಗಳಿಂದಲೂ ಜನ ಬಂದು ಬೆಂಗಳೂರಿನಲ್ಲಿ ನೆಲೆಸುತ್ತಿದ್ದಾರೆ. ಹಾಗಾಗಿ ಬಾಡಿಗೆ ಮನೆಗಳು ಲಾಭದ ಮಾರ್ಗವಾಗಿ ಬದಲಾಗಿದೆ. ಮನೆಗಳನ್ನು ಬಾಡಿಗೆಗೆ ನೀಡುತ್ತಾ ತಿಂಗಳಿಗೆ ಲಕ್ಷಗಟ್ಟಲೆ ಹಣ ಸಂಪಾದಿಸುತ್ತಿದ್ದಾರೆ. ಇದೀಗ ಈ ಬಾಡಿಗೆ ಮನೆ ಮಾಲೀಕರಿಗೆ ಹೊಸ ಸಂಕಷ್ಟವೊಂದು ಎದುರಾಗಿದೆ.

ಬೆಂಗಳೂರಿನಲ್ಲಿ ಈಗ ಸುಲಭವಾಗಿ ಬಾಡಿಗೆ ಮನೆ ಸಿಗುವುದನ್ನೇ ದುರ್ಬಳಕೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ವಿದೇಶಗಳಿಂದಲೂ ಜನ ಬಂದು ಬೆಂಗಳೂರಿನಲ್ಲಿ ಬಾಡಿಗೆ ಮನೆಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಮನೆ ಮಾಲೀಕರು ಕೂಡ ಯಾವುದೇ ನಿಯಮಗಳನ್ನು ಪಾಲಿಸದೆ ಬಾಡಿಗೆಗೆ ಮನೆಗಳನ್ನು ನೀಡುತ್ತಿದ್ದಾರೆ. ಈಗ ಇಂತಹವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಇನ್ನು ಮುಂದೆ ನಿಯಮ ಉಲ್ಲಂಘಿಸಿ ವಿದೇಶಿ ಪ್ರಜೆಗಳಿಗೆ ಬಾಡಿಗೆ ನೀಡಿದರೆ, ಮನೆ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸ್ ಕಮೀಷನರ್‌ ಬಿ.ದಯಾನಂದ್ ವಾರ್ನಿಂಗ್‌ ಕೊಟ್ಟಿದ್ದಾರೆ.

Strict Action Against Bengaluru House Owners Renting To Foreigners Illegally Police Commissioner Warns

ಮನೆಯ ಮಾಲೀಕರು ವಿದೇಶಿ ಜನರು ಬಾಡಿಗೆಗೆ ಬಂದ 24 ಗಂಟೆಯಲ್ಲೇ ನಮೂನೆ-ಸಿ ಪ್ರತಿ ಹೊಂದಿರಬೇಕು ಎನ್ನುವ ನಿಯಮ ಇದೆ. ಆದರೆ ಬೆಂಗಳೂರಿನ ಮನೆ ಮಾಲೀಕರು ಈ ನಿಯಮಗಳನ್ನು ಪಾಲಿಸುತ್ತಲೇ ಇಲ್ಲ. ಇದೇ ರೀತಿ ಕಳೆದ ಐದು ವರ್ಷಗಳಲ್ಲಿ ಅಕ್ರಮವಾಗಿ ವಿದೇಶಿ ಪ್ರಜೆಗಳಿಗೆ ಬಾಡಿಗೆ ಮನೆಗಳನ್ನು ನೀಡಿದವರ ವಿರುದ್ಧ 70 ಕೇಸ್‌ಗಳು ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹಾಗಾಗಿ, ವಿದೇಶಿಯರ ಕಾಯ್ದೆ ಪ್ರಕಾರ ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆಗೆ ನೀಡಿದ ಒಂದು ದಿನದೊಳಗೆ ವಿದೇಶಿಯರ ನೋಂದಣಿ ಇಲಾಖೆಯ ಆನ್‌ಲೈನ್‌ ಪೋರ್ಟಲ್‌ನಲ್ಲಿ ಫಾರಂ-ಸಿ ಅನ್ನು ಅಧಿಕಾರಿಗಳಿಗೆ ಸಲ್ಲಿಸಬೇಕು. ಇನ್ನು ಮುಂದೆ ಬೆಂಗಳೂರಲ್ಲಿ ಯಾವುದೇ ವಿದೇಶಿ ಪ್ರಜೆಗಳಿಗೆ ಬಾಡಿಗೆ ನೀಡುವ ಮೊದಲು ಅವರ ಹಿನ್ನೆಲೆ ಮಾಹಿತಿ ಸಂಗ್ರಹಿಸಬೇಕು. ನಂತರ ಅವರ ಮಾಹಿತಿಯನ್ನು ಸಂಬಂಧಪಟ್ಟ ಪ್ರಾಧಿಕಾರಕ್ಕೂ ನೀಡಬೇಕು. ಈ ನಿಯಮ ಉಲ್ಲಂಘಿಸಿದರೆ ಮನೆ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Strict Action Against Bengaluru House Owners Renting To Foreigners Illegally Police Commissioner Warns

ಬೆಂಗಳೂರಿನಲ್ಲಿ ಇಬ್ಬರ ಬಂಧನ: ನಗರದ ಹೆಬ್ಬಾಳ ಸಮೀಪ ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಸಿಸಿಬಿ ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ. ಇವರ ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದರು. ಬಿಸಿನೆಸ್‌ ವೀಸಾದಡಿ ಅವರು ಭಾರತಕ್ಕೆ ಬಂದು, ಸ್ಥಳೀಯ ವ್ಯಕ್ತಿಯ ನೆರವು ಪಡೆದಿದ್ದರು. ಈ ಸಂಬಂಧ ಮನೆಯ ಮಾಲೀಕರು, ವಿದೇಶಿ ಪ್ರಜೆಗಳ ವಿರುದ್ಧ ಕೇಸ್‌ ಕೂಡ ದಾಖಲಿಸಲಾಗಿದೆ. ಇವರು ಅರ್ಜೆಂಟೀನಾ ಮತ್ತು ಬ್ರೆಜಿಲ್‌ನವರು ಎನ್ನಲಾಗಿದೆ. ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವವರ ಮಾಹಿತಿ ನೀಡದ ಮನೆ ಮಾಲೀಕರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗಿದೆ. ಬ್ರೆಜಿಲ್‌ನ 24 ವರ್ಷದ ಲುಕೋಸ್ ಹೆನ್ರಿಕ್, 23 ವರ್ಷದ ಸ್ಯಾಮ್ಯುಯೆಲ್ ಡೈಜಿಯನ್ ಬಂಧಿತರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+