ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಕಠಿಣ ಲಾಕ್‌ಡೌನ್ ನಿಯಮಗಳು: ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಜು. 14: ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳ ಹೊರತಾಗಿಯೂ ಬೆಂಗಳೂರಿನಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಿಗುತ್ತಿಲ್ಲ. ಹೀಗಾಗಿ ಇಂದಿನಿಂದ ಒಂದು ವಾರ ಲಾಕ್‌ಡೌನ್ ಜಾರಿ ಮಾಡಿ ಸರ್ಕಾರ ಆದೇಶ ಮಾಡಿದೆ. ಹೀಗಾಗಿ ಇಂದಿನಿಂದ ಮುಂದಿನ ಏಳು ದಿನಗಳ ಕಾಲ ಬೆಂಗಳೂರಿನಲ್ಲಿ ಮತ್ತೆ ಕಠಿಣ ಲಾಕ್‌ಡೌನ್ ನಿಯಮಗಳು ಜಾರಿಯಾಗಲಿವೆ.

Recommended Video

ಸದ್ಯಕ್ಕೆ ಸರಿಯಾಗೋದಿಲ್ಲ ಕೊರೊನ ಪರಿಸ್ಥಿತಿ - WHO | Oneindia Kannada

ಹಿಂದೆ ಜಾರಿಯಾದಾಗ ಇದ್ದಂತೆಯೆ ಈ ಸಲವೂ ಬೆಂಗಳೂರಿನಲ್ಲಿ ಲಾಕ್‌ಡೌನ್ ಇರಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ಬಿಗಿ ಬಂದೋಬಸ್ತ್‌ ಬಗ್ಗೆ ಹೆಚ್ಚಿನ ನಿಗಾ ವಹಿಸಲು ಸೂಚಿಸಿದ್ದೇವೆ. ಬೆಂಗಳೂರಿನಲ್ಲಿ ಕಂಟೇನ್ಮೆಂಟ್ ಝೋನ್‌ನಿಂದಾಗಿ ಸೀಲ್‌ಡೌನ್ ಆಗಿರುವ ಪ್ರದೇಶಗಳನ್ನು ಸಂಪೂರ್ಣ ಬಂದ್ ಮಾಡಲಾಗುವುದು. ದಿನಸಿ ಅಂಗಡಿಗಳು ಪ್ರತಿದಿನ ಮಧ್ಯಾಹ್ನ 12 ಗಂಟೆ ತನಕ ಮಾತ್ರ ತೆರೆದಿರುತ್ತವೆ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಲಾಕ್ ಡೌನ್; ಮಾರ್ಗಸೂಚಿ ಪ್ರಕಟಬೆಂಗಳೂರು ಲಾಕ್ ಡೌನ್; ಮಾರ್ಗಸೂಚಿ ಪ್ರಕಟ

ಬೆಂಗಳೂರಿನಲ್ಲಿ ಮಾತನಾಡಿರುವ ಬೊಮ್ಮಾಯಿ ಅವರು, ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಕೆಲವು ಜಿಲ್ಲೆಗಳು ಲಾಕ್ ಡೌನ್ ಜಾರಿಗೆ ಅವಕಾಶ ಕೇಳಿದ್ದವು. ಅವರಿಗೆ ಮಾತ್ರ ಅವಕಾಶ ಕೊಡಲಾಗಿದೆ. ಜೊತೆಗೆ ಜಿಲ್ಲೆಗಳ ಗಡಿ ಭಾಗಗಳ ಬಿಗಿ ಮಾಡಲು ಸೂಚಿಸಿದ್ದೇವೆ.

Strict Lockdown Rules Implemented In Bengaluru: Basavaraj Bommai


ಗಡಿಗಳನ್ನ ಬಂದ್ ಮಾಡಲು ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಕೊಟ್ಟಿದ್ದೇವೆ. ಜೊತೆಗೆ ಅನಗತ್ಯವಾಗಿ ಓಡಾಡುವವರಿಗೆ ಕಠಿಣ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದೇನೆ. ಅನಗತ್ಯವಾಗಿ ಓಡಾಡುವವರ ಮೇಲೆ ಪ್ರಕರಣಗಳನ್ನು ದಾಖಲಿಸಲು ಸೂಚಿಸಿದ್ದೇವೆ. ಜನರು ನಿಯಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

English summary
The government has issued a lockdown a week from now. Thus, strict lockdown rules will be implemented again in Bengaluru for the next seven days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X