ಉಪವಾಸ ಸತ್ಯಾಗ್ರಹಲ್ಲಿ ಪಾಲ್ಗೊಂಡ ಬಳಿಕ ವಿದ್ಯಾರ್ಥಿ ಸಾವು; ಆರೋಪ ನಿರಾಕರಿಸಿದ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ
ಹತ್ತು ದಿನಗಳಿಂದ, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿ ಸೆಮಿಸ್ಟರ್‌ಗೆ 8,500 ರೂಪಾಯಿ ಬಸ್ ಶುಲ್ಕವನ್ನು ವಿಧಿಸಿರುವುದನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದಾರೆ.
ಬೆಂಗಳೂರು, ಫೆಬ್ರವರಿ. 26: ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಡೆವಲಪ್‌ಮೆಂಟ್ ಸ್ಟಡೀಸ್‌ನಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ 26 ವರ್ಷದ ವಿದ್ಯಾರ್ಥಿ ವಿಶ್ವವಿದ್ಯಾನಿಲಯದ ವಾರ್ಷಿಕ ಸಾಂಸ್ಕೃತಿಕ ಉತ್ಸವದಲ್ಲಿ ಭಾಗವಹಿಸುತ್ತಿದ್ದಾಗ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದ್ದು, ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ ನಂತರ ಅವರು ಸಾವನ್ನಪ್ಪಿದ್ದಾರೆ ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಮೃತ ವಿದ್ಯಾರ್ಥಿಯನ್ನು ಪ್ರಥಮ ವರ್ಷದ ಎಂಎ ಡೆವಲಪ್‌ಮೆಂಟ್ ಸ್ಟಡೀಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ 26 ವರ್ಷದ ಅಭಿಜಿತ್ ಶಿಂಧೆ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಯೊಬ್ಬರ ದುರದೃಷ್ಟಕರ ಸಾವಿನಿಂದ ನಾವು ಆಘಾತಕ್ಕೊಳಗಾಗಿದ್ದೇವೆ. ವಿದ್ಯಾರ್ಥಿ, ಕಾಲೇಜು ಉತ್ಸವದಲ್ಲಿ ಭಾಗವಹಿಸುತ್ತಿದ್ದಾಗ ಕುಸಿದುಬಿದ್ದು ಶುಕ್ರವಾರ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ಅಭಿಜಿತ್ ಶಿಂಧೆ ಅವರು ಗುರುವಾರ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು ಎಂದು ಸ್ನಾತಕೋತ್ತರ ವಿದ್ಯಾರ್ಥಿ ಹಾಗೂ ಅವರ ಸ್ನೇಹಿತರೊಬ್ಬರು ತಿಳಿಸಿದ್ದಾರೆ.

ಹತ್ತು ದಿನಗಳಿಂದ, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿ ಸೆಮಿಸ್ಟರ್‌ಗೆ 8,500 ರೂಪಾಯಿ ಬಸ್ ಶುಲ್ಕವನ್ನು ವಿಧಿಸಿರುವುದನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದಾರೆ. ಆದೇಶವನ್ನು ಹಿಂಪಡೆಯಲು ಒತ್ತಾಯಿಸಿದ್ದಾರೆ. ಸುಮಾರು 2.5 ಕಿಲೋಮೀಟರ್ ದೂರದಲ್ಲಿರುವ ತಮ್ಮ ಕೆಜಿಎ ಹಾಸ್ಟೆಲ್‌ನಿಂದ ಕ್ಯಾಂಪಸ್‌ಗೆ ಮತ್ತು ಹೊರಗೆ ಕರೆದೊಯ್ಯಲು ಕಡ್ಡಾಯವಾಗಿ ಹೆಚ್ಚುವರಿ ಬಸ್ ಶುಲ್ಕವನ್ನು ಪಾವತಿಸಬೇಖು ಎಂದು ವಿವಿ ಒತ್ತಾಯಿಸುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಪ್ರವೇಶ ಪ್ರಕ್ರಿಯೆಯಲ್ಲಿ ಈ ಹೆಚ್ಚುವರಿ ಶುಲ್ಕದ ಬಗ್ಗೆ ಆಡಳಿತ ಮಂಡಳಿ ತಿಳಿಸಿರಲಿಲ್ಲ, ಅವರ ಸಮಸ್ಯೆಗಳನ್ನು ಆಲಿಸಲು ವಿಶ್ವವಿದ್ಯಾಲಯ ನಿರಾಕರಿಸಿದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಯೊಬ್ಬರು ಹೇಳುವಂತೆ, ಈ ಪ್ರತಿಭಟನೆಯಲ್ಲಿ ಕಳೆದ 10 ನೇ ದಿನದಿಂದ ಅಭಿಜಿತ್ ಶಿಂಧೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಗುರುವಾರ ಮಾತ್ರ ಅವರು ಉಪವಾಸ ಬಿಟ್ಟಿದ್ದರು. ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನೊಳಗೆ ಮೂಲಭೂತ ವೈದ್ಯಕೀಯ ಸೌಲಭ್ಯಗಳ ಕೊರತೆಯಿದೆ. ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಲು ಪ್ರಯತ್ನಿಸುತ್ತಿದ್ದಾರೆ. ನಾವು ಉಪವಾಸ ಮುಷ್ಕರದ ಬಗ್ಗೆ ತಿಳಿಸಿದ ನಂತರವೂ ಕಾಲೇಜು ತುರ್ತು ಪರಿಸ್ಥಿತಿಗಳಿಗೆ ಯಾವುದೇ ವೈದ್ಯಕೀಯ ಬೆಂಬಲವನ್ನು ನೀಡಲಿಲ್ಲ. ಅಭಿಜಿತ್ ಶಿಂಧೆ ಪ್ರತಿಭಟನೆಯಲ್ಲಿ ಇರಲಿಲ್ಲ ಎಂದು ಹೇಳಿ ತಮ್ಮ ಹೆಸರು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ವಿಶ್ವವಿದ್ಯಾನಿಲಯದಲ್ಲಿ ವೈದ್ಯಕೀಯ ಸೌಲಭ್ಯಗಳು ಲಭ್ಯವಿವೆ ಎಂದು ಹೇಲಿರುವ ವಿವಿ ವಕ್ತಾರರು, ಯಾವುದೇ ವೈದ್ಯಕೀಯ ಸಹಾಯವನ್ನು ಒದಗಿಸಿಲ್ಲ ಎಂಬ ವಿದ್ಯಾರ್ಥಿಗಳ ಆರೋಪವನ್ನು ತಳ್ಳಿಹಾಕಿದ್ದಾರೆ. ಜೊತೆಗೆ ಮೃತರು ಉಪವಾಸ ಸತ್ಯಾಗ್ರಹದ ಭಾಗವಾಗಿರಲಿಲ್ಲ ಎಂದು ವಿಶ್ವವಿದ್ಯಾಲಯ ಹೇಳಿಕೊಂಡಿದೆ.

"ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಯೊಬ್ಬರ ಸಾವಿನಿಂದ ನಾವು ಆಘಾತಕ್ಕೊಳಗಾಗಿದ್ದೇವೆ. ವಿದ್ಯಾರ್ಥಿ ಸಾಂಸ್ಕೃತಿಕ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುತ್ತಿದ್ದ ವೇಳೆ ವಿದ್ಯಾರ್ಥಿಯು ಕುಸಿದು ಬಿದ್ದಿದ್ದು, ತಕ್ಷಣದ ವೈದ್ಯಕೀಯ ಸಹಾಯ ನೀಡಲಾಗಿದೆ . ಆದರೆ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಮೃತ ವಿದ್ಯಾರ್ಥಿಯು ಫೆಬ್ರವರಿ 23, ಗುರುವಾರ ಅಥವಾ ಫೆಬ್ರವರಿ 24, ಶುಕ್ರವಾರ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಿರಲಿಲ್ಲ" ಎಂದು ವಿಶ್ವವಿದ್ಯಾಲಯದ ವಕ್ತಾರರು ತಿಳಿಸಿದ್ದಾರೆ. ಇನ್ನು, ಇದುವರೆಗೆ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications